Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೊಸೂರು-ಬೆಂಗಳೂರು ಮೆಟ್ರೊ ಯೋಜನೆಗೆ...

ಹೊಸೂರು-ಬೆಂಗಳೂರು ಮೆಟ್ರೊ ಯೋಜನೆಗೆ ಅನುಮತಿ ಬೇಡ: ಕೆಪಿಸಿಸಿ ವಕ್ತಾರ ರಮೇಶ್ ಬಾಬು

ವಾರ್ತಾಭಾರತಿವಾರ್ತಾಭಾರತಿ4 Aug 2023 7:10 PM IST
share
ಹೊಸೂರು-ಬೆಂಗಳೂರು ಮೆಟ್ರೊ ಯೋಜನೆಗೆ ಅನುಮತಿ ಬೇಡ: ಕೆಪಿಸಿಸಿ ವಕ್ತಾರ ರಮೇಶ್ ಬಾಬು

ಬೆಂಗಳೂರು, ಆ.4: ರಾಜ್ಯದ ಹಿತದೃಷ್ಟಿಯಿಂದ ಸದ್ಯದ ಪರಿಸ್ಥಿತಿಯಲ್ಲಿ ಹೊಸೂರು-ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆಗೆ ಅನುಮತಿ ನೀಡದಂತೆ ರಾಜ್ಯ ಸರಕಾರಕ್ಕೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಮನವಿ ಮಾಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪ್ರತ್ಯೇಕ ಪತ್ರ ಬರೆದಿರುವ ಅವರು, ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸೇವೆಯನ್ನು ಬೆಂಗಳೂರು ನಗರದ ವಿವಿಧ ಭಾಗಗಳಿಗೆ ವಿಸ್ತರಿಸುವ ಅವಶ್ಯಕತೆ ಇದೆ. ಆದರೆ ಇಂತಹ ವಿಸ್ತರಣೆಯು ಬೆಂಗಳೂರು ಮತ್ತು ರಾಜ್ಯದ ಜನರಿಗೆ ಹೆಚ್ಚು ತಲುಪಬೇಕಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿಗೆ ನಮ್ಮ ರಾಜ್ಯದ ಜನರು ಉದ್ಯೋಗ ಮತ್ತು ವ್ಯಾಪಾರದ ಕಾರಣಕ್ಕಾಗಿ ವಲಸೆ ಬಂದರೆ ರಾಜ್ಯದ ಹಿತದೃಷ್ಟಿಯಿಂದ ಕನ್ನಡಿಗರ ಹಿತರಕ್ಷಣೆಯನ್ನು ರಾಜ್ಯ ಸರಕಾರ ಮಾಡಬೇಕಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ನೆಲೆಸಿರುವ ಜನಸಾಮಾನ್ಯರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಮೂಲ ಸೌಲಭ್ಯಗಳನ್ನು ಒದಗಿಸಬೇಕಾಗುತ್ತದೆ ಎಂದು ರಮೇಶ್ ಬಾಬು ಹೇಳಿದ್ದಾರೆ.

ರಾಜ್ಯದ ಹಿತದೃಷ್ಟಿಯಿಂದ ಮತ್ತು ಬೆಂಗಳೂರು ಮಹಾನಗರದಲ್ಲಿ ಸಾರಿಗೆ ದಟ್ಟಣೆಯ ಕಾರಣಕ್ಕಾಗಿ ಇತರೆ ರಾಜ್ಯದ ವಲಸಿಗರ ಮೇಲೆ ಅನಿವಾರ್ಯವಾಗಿ ನಿಯಂತ್ರಣವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಹೇರಬೇಕಾಗಿದೆ. ಬೆಂಗಳೂರು ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವ ಕಾಸ್ಮೋಪಾಲಿಟಿನ್ ನಗರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇಲ್ಲಿನ ಬೆಳವಣಿಗೆಯ ಮೇಲೆ ಆರೋಗ್ಯಕರವಾದ ನಿಯಂತ್ರಣವನ್ನು ಹಾಕದೆ ಇದ್ದರೆ, ನಗರದಲ್ಲಿ ಸಾರಿಗೆ ಸಮಸ್ಯೆ ಜೊತೆಗೆ ಕುಡಿಯುವ ನೀರು, ವಿದ್ಯುತ್ ಪೂರೈಕೆ, ರಸ್ತೆ ನಿರ್ಮಾಣ ಹಾಗು ಇತರೆ ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಾಗುತ್ತದೆ. ಇವುಗಳ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯವು ಚೆನ್ನೈ ಮೆಟ್ರೋ ರೈಲ್ವೆ ಸಂಸ್ಥೆಯ ಮೂಲಕ ಹೊಸೂರು-ಬೆಂಗಳೂರು ಮಹಾನಗರಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸುವ ಪ್ರಯತ್ನವನ್ನು ಬೆಂಗಳೂರಿನ ದೃಷ್ಟಿಯಿಂದ ತಡೆಯಬೇಕಾಗಿದೆ ಎಂದು ಅವರು ಕೋರಿದ್ದಾರೆ.

ಅನೇಕ ಕನ್ನಡ ಸಂಘಟನೆಗಳು ಮತ್ತು ಜನಪರ ಸಂಘಟನೆಗಳು ಬೆಂಗಳೂರಿನ ಮತ್ತು ಕರ್ನಾಟಕದ ಹಿತರಕ್ಷಣೆಯ ದೃಷ್ಟಿಯಿಂದ ಹೊಸೂರು-ಬೆಂಗಳೂರು ಮೆಟ್ರೋ ಸಂಪರ್ಕಕ್ಕೆ ಅವಕಾಶ ನೀಡದಂತೆ ರಾಜ್ಯ ಸರಕಾರವನ್ನು ಒತ್ತಾಯ ಮಾಡಿವೆ ಎಂದು ರಮೇಶ್ ಬಾಬು ತಿಳಿಸಿದ್ದಾರೆ.

ರಾಜ್ಯ ಸರಕಾರವು ಸಾರಿಗೆ ವ್ಯವಸ್ಥೆಯನ್ನು ವಿಸ್ತಾರಗೊಳಿಸುವ ಹಿನ್ನೆಲೆಯಲ್ಲಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಸಂಪರ್ಕವೂ ಒಳಗೊಂಡಂತೆ ಬೆಂಗಳೂರಿನ ಎಲ್ಲ ಭಾಗಗಳಲ್ಲಿ ಮೆಟ್ರೋ ವ್ಯವಸ್ಥೆಯನ್ನು ಜಾರಿಗೊಳಿಸಲಿ. ಸದ್ಯದ ಪರಿಸ್ಥಿತಿಯಲ್ಲಿ ಹೊಸೂರು-ಬೆಂಗಳೂರು ಮೆಟ್ರೋ ರೈಲು ಸಂಪರ್ಕದ ಯಾವುದೇ ಪ್ರಸ್ತಾವಕ್ಕೆ ಅನುಮತಿ ನೀಡಬಾರದು ಎಂದು ಅವರು ಕೋರಿದ್ದಾರೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X