Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕ್ವಾಂಟಮ್ ತಂತ್ರಜ್ಞಾನ ಮತ್ತು...

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಡಿಸಿಎಂ ಒಲವು : ಎನ್.ಎಸ್.ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ6 Jan 2026 9:30 PM IST
share
ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಡಿಸಿಎಂ ಒಲವು : ಎನ್.ಎಸ್.ಭೋಸರಾಜು

ಬೆಂಗಳೂರು: ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.

ಮಂಗಳವಾರ ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಅವರು ಈ ವಿಷಯ ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಪೆನಾಂಗ್ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ, ತಮ್ಮ ರಾಜ್ಯದ ಯಶಸ್ಸಿನ ಮಾದರಿಯನ್ನು ವಿವರಿಸಿದರು. ಪೆನಾಂಗ್ ಭೌಗೋಳಿಕವಾಗಿ ಸಣ್ಣ ರಾಜ್ಯವಾಗಿದ್ದರೂ, ಇಂದು ಜಾಗತಿಕ ಮಟ್ಟದ ಸೆಮಿಕಂಡಕ್ಟರ್ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮುಖ್ಯ ಕಾರಣ ನಮ್ಮಲ್ಲಿರುವ ಬಲವಾದ ‘ಉದ್ಯಮ ಮತ್ತು ಸಂಶೋಧನಾ ಸಹಭಾಗಿತ್ವ'. ಇದರಲ್ಲಿ ಪೆನಾಂಗ್ ವಿಶ್ವವಿದ್ಯಾಲಯವು ನಿರ್ಣಾಯಕ ಪಾತ್ರ ವಹಿಸಿದೆ ಎಂದು ಹೇಳಿದರು.

ಉದ್ಯಮಗಳಿಗೆ ನೇರವಾಗಿ ಬೆಂಬಲ ನೀಡುವಂತಹ ಸಂಶೋಧನಾ ಪರಿಸರ ವ್ಯವಸ್ಥೆಯನ್ನು ವಿವಿ ನಿರ್ಮಿಸಿದೆ. ಇದೇ ಮಾದರಿಯನ್ನು ಕರ್ನಾಟಕ ಮತ್ತು ಪೆನಾಂಗ್ ನಡುವೆ ವಿಸ್ತರಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚರ್ಚೆಯ ವೇಳೆ ಎನ್.ಎಸ್. ಭೋಸರಾಜು ಅವರು ಸಣ್ಣ ನೀರಾವರಿ ಕ್ಷೇತ್ರದಲ್ಲಿ ಕರ್ನಾಟಕ ಸಾಧಿಸಿರುವ ಮೈಲಿಗಲ್ಲುಗಳನ್ನು ಪರಿಚಯಿಸಿದರು. ವಿಶೇಷವಾಗಿ ರಾಜ್ಯದ ‘ತ್ಯಾಜ್ಯದಿಂದ ಸಂಪತ್ತು' ಪರಿಕಲ್ಪನೆಯಡಿ ಜಾರಿಗೆ ತಂದಿರುವ ಕೆ.ಸಿ.ವ್ಯಾಲಿ (ಕೋರಮಂಗಲ-ಚಲ್ಲಘಟ್ಟ) ಮತ್ತು ಎಚ್.ಎನ್.ವ್ಯಾಲಿ (ಹೆಬ್ಬಾಳ-ನಾಗವಾರ) ಯೋಜನೆಗಳ ಬಗ್ಗೆ ಗಮನ ಸೆಳೆದರು.

ನಗರದ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಅದನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರದಂತಹ ಬರಪೀಡಿತ ಜಿಲ್ಲೆಗಳ ಕೆರೆಗಳಿಗೆ ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಯಶಸ್ವಿಯಾಗಿ ಹೆಚ್ಚಿಸಿದ್ದೇವೆ. ಕೃಷಿ ಚಟುವಟಿಕೆಗಳಿಗೆ ಇದು ಜೀವ ತುಂಬಿದೆ ಎಂದು ಅವರು ನಿಯೋಗಕ್ಕೆ ವಿವರಿಸಿದರು. ಈ ಸುಸ್ಥಿರ ಅಭಿವೃದ್ಧಿ ಮಾದರಿಗೆ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.

ರಾಜ್ಯ ಸರಕಾರ ಯುವಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ರೂಪಿಸಿರುವ ಮಹತ್ವಾಕಾಂಕ್ಷೆಯ ‘ಕ್ವಾಂಟಮ್ ಆಕ್ಷನ್ ಪ್ಲಾನ್' ನಲ್ಲಿ ಭಾಗಿಯಾಗಲು ಪೆನಾಂಗ್ ನಿಯೋಗ ಉತ್ಸುಕತೆ ತೋರಿತು. ‘ಪೂರ್ವದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಪೆನಾಂಗ್ ಜೊತೆಗಿನ ಸಹಭಾಗಿತ್ವಕ್ಕೆ ನಮ್ಮ ಸರಕಾರ ಮುಕ್ತವಾಗಿದೆ’ ಎಂದು ಸಚಿವರು ಸ್ವಾಗತಿಸಿದರು.

ಬೆಂಗಳೂರು ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಹಾಗೂ ಪೆನಾಂಗ್ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಂದಿರುವ ಪರಿಣತಿಯ ಸಮ್ಮಿಲನದಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಉಭಯ ನಾಯಕರು ಅಭಿಪ್ರಾಯವ್ಯಕ್ತಪಡಿಸಿದರು.

ಸಭೆಯ ಅಂತ್ಯದಲ್ಲಿ, ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ ಅವರು ಸಚಿವ ಭೋಸರಾಜು ಅವರಿಗೆ ಮಲೇಷ್ಯಾ ಮತ್ತು ಪೆನಾಂಗ್‍ಗೆ ಭೇಟಿ ನೀಡುವಂತೆ ಅಧಿಕೃತ ಆಹ್ವಾನ ನೀಡಿದರು. ವಿಶೇಷವಾಗಿ ಪೆನಾಂಗ್‍ನ ವಿಶ್ವವಿದ್ಯಾಲಯದ ಸಂಶೋಧನಾ ಸೌಲಭ್ಯಗಳು ಮತ್ತು ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯನ್ನು ಖುದ್ದಾಗಿ ವೀಕ್ಷಿಸಿ, ಮಾನವ ಸಂಪನ್ಮೂಲ ಅಭಿವೃದ್ಧಿ ಒಪ್ಪಂದವನ್ನು ಅಂತಿಮಗೊಳಿಸಲು ಈ ಭೇಟಿ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕೆ-ಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕ ಸದಾಶಿವ ಪ್ರಭು ಸೇರಿದಂತೆ ಪೆನಾಂಗ್ ರಾಜ್ಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



Tags

N.S. Bhosaraju
share
ವಾರ್ತಾಭಾರತಿ
ವಾರ್ತಾಭಾರತಿ
Next Story
X