Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ರಾ.ಪಂ. ಸೇವೆಗಳಿಗೆ ಸಂಬಂಧಿಸಿ ದೂರು...

ಗ್ರಾ.ಪಂ. ಸೇವೆಗಳಿಗೆ ಸಂಬಂಧಿಸಿ ದೂರು ದಾಖಲು- ಇತ್ಯರ್ಥಕ್ಕೆ 'ಆನ್ ಲೈನ್ ವ್ಯವಸ್ಥೆ’: ಸಚಿವ ಈಶ್ವರ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ31 Aug 2026 10:31 AM IST
share
ಗ್ರಾ.ಪಂ. ಸೇವೆಗಳಿಗೆ ಸಂಬಂಧಿಸಿ ದೂರು ದಾಖಲು- ಇತ್ಯರ್ಥಕ್ಕೆ ಆನ್ ಲೈನ್ ವ್ಯವಸ್ಥೆ’: ಸಚಿವ ಈಶ್ವರ ಖಂಡ್ರೆ

ಬೆಂಗಳೂರು, ಆ.31: ಗ್ರಾಮ ಪಂಚಾಯತ್ ಸೇವೆಗಳಿಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ದಾಖಲಿಸಲು ಗ್ರಾಮೀಣರಿಗೆ ಅನುವಾಗುವಂತೆ ಡ್ಯಾಷ್ ಬೋರ್ಡ್ ಆಧಾರಿತ ‘ದೂರು ದಾಖಲು- ಇತ್ಯರ್ಥಕ್ಕೆ ಆನ್ ಲೈನ್ ವ್ಯವಸ್ಥೆ’ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಇ-ಸ್ವತ್ತು, ತೆರಿಗೆ ನಿರ್ಧರಣೆ, ಸಾಮಾಜಿಕ ಅರಣ್ಯೀಕರಣ, ಗ್ರಾಪಂ ವ್ಯಾಪ್ತಿಯ ಕೆರೆ ನಿರ್ವಹಣೆ, ಕೆರೆ ಒತ್ತುವರಿ, ಜೆಜೆಎಂ, ಕುಡಿಯುವ ನೀರಿನ ಸಮಸ್ಯೆ, ನೈರ್ಮಲ್ಯ, ಗ್ರಾಮೀಣ ರಸ್ತೆ, ವಿಬಿ-ಜಿ ರಾಮ್ ಜಿ, ಗ್ರಾಮೀಣ ಆಸ್ತಿಗಳ ಸೃಜನೆ ಸೇರಿದಂತೆ ಯಾವುದೇ ಅಹವಾಲನ್ನು ಗ್ರಾಮೀಣ ಪ್ರದೇಶದ ಜನರು ದಾಖಲಿಸಲು ಮತ್ತು ಅದಕ್ಕೆ ತಕ್ಷಣ ಸ್ಪಂದಿಸಲು ಈ ವ್ಯವಸ್ಥೆ ರೂಪಿಸಲು ನಿರ್ದೇಶನ ನೀಡಿದ್ದಾರೆ.

ರಾಜ್ಯದ ಸುಮಾರು ಅರ್ಧದಷ್ಟು ಜನಸಂಖ್ಯೆಯೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇರ ಸಂಪರ್ಕ ಹೊಂದಿದ್ದು, ಗ್ರಾಮೀಣರ ಕುಂದುಕೊರತೆಗೆ ಸ್ಪಂದಿಸುವುದು ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇಲಾಖೆಯಲ್ಲಿ ಪಾರದರ್ಶಕತೆ ತರಲು, ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆ ಕಾಮಗಾರಿಗಳಲ್ಲಿನ ಲೋಪದೋಷ, ಮೂಲಸೌಕರ್ಯ ಗುಣಮಟ್ಟ ಕೊರತೆ, ಗ್ರಾಪಂ ಒದಗಿಸುವ ವಿವಿಧ ಸೇವೆಗಳಲ್ಲಿನ ವಿಳಂಬ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಚಿವಾಲಯಕ್ಕೆ ದೂರುಗಳು ಬರುತ್ತಿದ್ದು, ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು, ಗ್ರಾಮೀಣರು ಈ ಸಂಬಂಧ ವಿಡಿಯೋ ಮತ್ತು ಫೋಟೋ ಸಹಿತ ದೂರು ದಾಖಲಿಸಲು ಮತ್ತು ಈ ದೂರಿಗೆ ಸಂಬಂಧಿಸಿದಂತೆ ಕ್ರಮ ವಹಿಸುವ ಅಧಿಕಾರಿಯ ದೂರವಾಣಿ, ಹೆಸರು ಇತ್ಯಾದಿ ಮಾಹಿತಿ ಪಡೆಯಲು ಮತ್ತು ದೂರಿನ ಸ್ಥಿತಿಗತಿ ಅರಿಯಲು ಮಿಗಿಲಾಗಿ ನಿಗದಿತ ಕಾಲಮಿತಿಯಲ್ಲಿ ದೂರುಗಳನ್ನು ಇತ್ಯರ್ಥಪಡಿಸಲು ಅನುವಾಗುವಂತೆ ಸರಳ ಪ್ರಕ್ರಿಯೆಯ ಆ್ಯಪ್ ಮತ್ತು ಡ್ಯಾಷ್ ಬೋರ್ಡ್ ಸಹಿತ ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲು ಕ್ರಮ ವಹಿಸುವಂತೆ ಈಶ್ವರ ಖಂಡ್ರೆ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.

ಜಿಬಿಎ, ಬಿಡಬ್ಲ್ಯುಎಸ್ಎಸ್.ಬಿ, ಬಿಡಿಎ, ಬಿಎಂ.ಆರ್.ಸಿ.ಎಲ್, ಬೆಸ್ಕಾಂ ಮೊದಲಾದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ದೂರು ದಾಖಲಿಸಿ ಪರಿಹಾರ ಪಡೆಯಲು https://nammabengaluru.org.in/ ಮತ್ತು Sahaaya ಆಪ್ ನಿರ್ಮಿಸಿರುವ ಮಾದರಿಯಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ವಿಭಾಗಗಳ ಬಗ್ಗೆ ದೂರು ದಾಖಲಿಸಲು ಏಕ ಗವಾಕ್ಷಿ ಯೋಜನೆ ಜಾರಿಗೆ ತರುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

Tags

Online SystemEshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X