Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಖಾಲಿ ಚೊಂಬು’ ಜಾಹೀರಾತಿನಿಂದ...

‘ಖಾಲಿ ಚೊಂಬು’ ಜಾಹೀರಾತಿನಿಂದ ಪ್ರತಿಪಕ್ಷಗಳು ಎಚ್ಚರಗೊಂಡಿವೆ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ22 April 2024 6:00 PM IST
share
‘ಖಾಲಿ ಚೊಂಬು’ ಜಾಹೀರಾತಿನಿಂದ ಪ್ರತಿಪಕ್ಷಗಳು ಎಚ್ಚರಗೊಂಡಿವೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ನಮ್ಮ ಖಾಲಿ ಚೊಂಬು ಜಾಹೀರಾತಿನಿಂದ ಪ್ರತಿಪಕ್ಷಗಳ ನಾಯಕರು ಎಚ್ಚರಗೊಂಡಿದ್ದಾರೆ. ಬಿಜೆಪಿಯವರು ಜಾಹೀರಾತು ನೀಡಿದ್ದು, ನಮ್ಮ ಜನರಿಗೆ ಯಾವುದು ಸರಿ, ಯಾವುದು ತಪ್ಪು ಎಂದು ಯೋಚನೆ ಮಾಡುವ ಶಕ್ತಿ, ಪ್ರಜ್ಞೆ ಎರಡೂ ಇದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಇಂದಿನ ದಿನಪತ್ರಿಕೆಗಳಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ನೀಡಿರುವ ಜಾಹೀರಾತಿನ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸೋಮವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಅವರು ಉತ್ತರಿಸಿದರು.

ಕರ್ನಾಟಕದ ಜನರಿಗೆ ಬಿಜೆಪಿ ಬಹಳ ಅನ್ಯಾಯ ಮಾಡಿದೆ ಎಂದು ಈ ಹಿಂದೆ ದೇವೇಗೌಡರು, ಕುಮಾರಸ್ವಾಮಿ ಇಬ್ಬರೂ ಭಾಷಣ ಮಾಡಿದ್ದರು. 15 ಲಕ್ಷ ರೂ. ಹಣ ಎಷ್ಟು ಜನರ ಖಾತೆಗೆ ಹೋಗಿದೆ, ಎಷ್ಟು ಉದ್ಯೋಗ ಸಿಕ್ಕಿದೆ ಎಂದು ನಾನು, ಸಿದ್ದರಾಮಯ್ಯ ಹಾಗೂ ಎಲ್ಲ ನಾಯಕರು ಪ್ರಶ್ನೆ ಮಾಡುತ್ತಿದ್ದಾರೆ. ಬಿಜೆಪಿಯವರು ಮೊದಲು ಇದಕ್ಕೆ ಉತ್ತರಿಸಲಿ ಎಂದು ಶಿವಕುಮಾರ್ ತಿಳಿಸಿದರು.

ಬಿಜೆಪಿಯವರು ಚಿಪ್ಪು ಅಭಿಯಾನ ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಚಿಪ್ಪು ಕೊಟ್ಟಿಲ್ಲ. ಕನ್ನಡದ ಬಾವುಟ ಹಿಡಿದು ಹೋರಾಟ ಮಾಡುವವರು ನಾವು, ಕನ್ನಡಿಗರ ಪರವಾಗಿ ನಮ್ಮ ತೆರಿಗೆ, ನಮ್ಮ ಹಕ್ಕು ಹೋರಾಟ ಮಾಡಿದ್ದೇವೆ’ ಎಂದು ಶಿವಕುಮಾರ್ ಇದೇ ವೇಳೆ ತಿರುಗೇಟು ನೀಡಿದರು.

ದೇಶದಲ್ಲಿ ಎಲ್ಲರೂ ಸಮಾನರು ಎಂಬ ಅರಿವು ಪ್ರಧಾನಿಗೆ ಇರಬೇಕು. ಪ್ರಧಾನಿ ಈ ದೇಶದ ಮಹತ್ವದ ಹುದ್ದೆಯಲ್ಲಿ ಕುಳಿತಿರುವವರು. ಸಂವಿಧಾನವನ್ನು ಕೈಯಲ್ಲಿ ಹಿಡಿದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅವರಿಗೆ ಈ ದೇಶದ ಎಲ್ಲ ನಾಗರಿಕರು ಸಮಾನರು ಎನ್ನುವ ಅರಿವು ಇರಬೇಕು. ಬೇಧ, ಭಾವ ಮಾಡುವುದು ಅವರ ಹುದ್ದೆಗೆ ಶೋಭೆ ತರುವುದಿಲ್ಲ. ಇದು ಇಡೀ ದೇಶ ಮತ್ತು ಪ್ರಪಂಚಕ್ಕೆ ಕೆಟ್ಟ ಸಂದೇಶವನ್ನು ನೀಡಿದಂತಾಗುತ್ತದೆ ಎಂದು ಅವರು ಹೇಳಿದರು.

ಮುಸ್ಲಿಮರಿಗೆ ಬಿಜೆಪಿಯಿಂದ ಮಾನಸಿಕ ಹಿಂಸೆ: ನಮ್ಮದು ಸರ್ವ ಜನಾಂಗದ ತೋಟ. ಮುಸ್ಲಿಂ ಧರ್ಮಿಯರಿಗೆ ಚಿತ್ರಹಿಂಸೆ ನೀಡಿ ಈ ದೇಶ ಬಿಟ್ಟು ಹೋಗಬೇಕು ಎನ್ನುವಂತಹ ವಾತಾವರಣ ಬಿಜೆಪಿ ನಿರ್ಮಾಣ ಮಾಡುತ್ತಿದೆ. ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಿದ್ದಾರೆ. ನಾವು ಸಂವಿಧಾನದ ಪ್ರಕಾರ ನಡೆಯುತ್ತಿದ್ದೇವೆ. ಆದ ಕಾರಣ ಯಾವುದೇ ಅಪರಾಧ ಪ್ರಕರಣ ನಡೆದರೂ ಯಾರನ್ನೂ ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಅವರು ಹೇಳಿದರು.

ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಾಪಾ ಅವರು ಯಾವ ಕೆಲಸವನ್ನೂ ಮಾಡಿಲ್ಲವಲ್ಲ ಅದಕ್ಕೆ ಈ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಈ ರಾಜ್ಯದಲ್ಲಿ ಡಬಲ್ ಎಂಜಿನ್ ಸರಕಾರ ಫೇಲ್ ಆಯಿತು. ಈಗ ದೊಡ್ಡ ಎಂಜಿನ್ ಕೂಡ ಫೇಲ್ ಆಗುತ್ತದೆ ಎಂದು ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X