Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿ.ಟಿ.ರವಿ ವಿರುದ್ಧ ಭುಗಿಲೆದ್ದ ಆಕ್ರೋಶ...

ಸಿ.ಟಿ.ರವಿ ವಿರುದ್ಧ ಭುಗಿಲೆದ್ದ ಆಕ್ರೋಶ : ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Dec 2024 4:18 PM IST
share
Photo of Protest

ಬೆಳಗಾವಿ : ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣ ರಾಷ್ಟ್ರ, ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡಿದ್ದಾರೆ.

ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಮೆರವಣಿಗೆ ನಡೆಸಿ, ಸಿ‌.ಟಿ.ರವಿ ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದರು. ಮೆರವಣಿಗೆಯಲ್ಲಿ ಸಿ‌.ಟಿ.ರವಿ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿಗೆ ಸೀರೆ ಉಡಿಸಿ ಆಕ್ರೋಶ ಹೊರಹಾಕಿದರು. ಚೆನ್ನಮ್ಮ ವೃತ್ತದಲ್ಲಿ ಪ್ರತಿಕೃತಿ ಸುಟ್ಟು ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರ ಹಾಕಿದರು.‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿ‌.ಟಿ.ರವಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಈ ವೇಳೆ ಹೋರಾಟಗಾರರು ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ಶೋಕ ಸೂಚಿಸುವ ಹಾಡುಗಳನ್ನು ಹಾಕಿ ʼಸಿಟಿ ಸತ್ನಪ್ಪೊ ಸತ್ನೋʼ ಎಂದು ಬೊಬ್ಬೆ ಹೊಡೆದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು, ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.‌

ಸಿ‌.ಟಿ.ರವಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಷ್ಟೇ ಅಲ್ಲ. ಇಡೀ ಸ್ತ್ರೀಕುಲಕ್ಕೆ ಅಪಮಾನ ಮಾಡಿದ್ದಾರೆ. ಸಿ.ಟಿ.ರವಿ ಕ್ಷಮೆಯಾಚಿಸಬೇಕು, ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಬೇಕೆಂದು ಅಭಿಮಾನಿಗಳು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲೆಡೆಯಿಂದ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ಸಹ ಬಹಳ ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಒಂದು ಕ್ಷಣವೂ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಯುವ ಹಕ್ಕು ಸಿ.ಟಿ.ರವಿಗೆ ಇಲ್ಲ. ಅಂತವರನ್ನು ಬಿಜೆಪಿ ತಕ್ಷಣ ಹೊರಹಾಕಬೇಕು. ʼಮಾತೆತ್ತಿದರೆ ಭಾರತ್ ಮಾತಾಕಿ ಜೈ, ಜೈ ಶ್ರೀರಾಮ ಎನ್ನುವ ಬಿಜೆಪಿ ಸ್ತ್ರೀಯರಿಗೆ ಹೆಜ್ಜೆ ಹೆಜ್ಜಿಗೂ ಅವಮಾನ ಮಾಡುತ್ತಿದೆʼ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X