ಬಿಎಂಎ ಅಧ್ಯಕ್ಷರಾಗಿ ಪಂಕಜ್ ಕುಮಾರ್ ಪಾಂಡೆ ಪುನರಾಯ್ಕೆ

ಬೆಂಗಳೂರು : ಬೆಂಗಳೂರು ಮ್ಯಾನೇಜ್ಮೆಂಟ್ ಅಸೋಸಿಯೇಷನ್ (ಬಿಎಂಎ) 2026-2027ನೇ ಸಾಲಿನ ಅಧ್ಯಕ್ಷರಾಗಿ ಹಿರಿಯ ಐಎಎಸ್ ಅಧಿಕಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.
ಬಿಎಂಎ ಪದಾಧಿಕಾರಿಗಳ ಹುದ್ದೆಗಳಿಗೆ ನ.7ರಂದು ನಡೆದ ಚುನಾವಣೆಯಲ್ಲಿ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.
ಹಿರಿಯ ಉಪಾಧ್ಯಕ್ಷ- ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಉಪಾಧ್ಯಕ್ಷ-ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ, ಗೌರವ ಕಾರ್ಯದರ್ಶಿ- ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಮ್.ಎಲ್. ಹಾಗೂ ಗೌರವ ಖಜಾಂಚಿಯಾಗಿ ಶೇಷಾದ್ರಿಪುರಂ ಕಾಲೇಜಿನ ಕಾರ್ಮಸ್ ವಿಭಾಗದ ನಿರ್ದೇಶಕರಾದ ಡಾ.ಭಾರ್ಗವಿ ವಿ.ಆರ್. ಆಯ್ಕೆಗೊಂಡಿದ್ದಾರೆ ಎಂದು ಬಿಎಂಎ ನಿರ್ದೇಶಕ ಎನ್.ಡಿ. ವೀರಣ್ಣ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




