Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್...

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕುಣಿಗಲ್‌ಗೆ ಮಾತ್ರ : ಪರಮೇಶ್ವರ್

"ನಿಷೇಧಾಜ್ಞೆಯ ನಡುವೆಯೂ ಪ್ರತಿಭಟನೆ: ಶಾಸಕರ ಸಹಿತ 18 ಮಂದಿ ವಿರುದ್ಧ ಎಫ್‌ಐಆರ್"

ವಾರ್ತಾಭಾರತಿವಾರ್ತಾಭಾರತಿ3 Jun 2025 12:26 AM IST
share
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕುಣಿಗಲ್‌ಗೆ ಮಾತ್ರ : ಪರಮೇಶ್ವರ್

ತುಮಕೂರು : ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕುಣಿಗಲ್‌ಗೆ ಮಾತ್ರ ಸೀಮಿತವಾಗಿದ್ದು, ಮಾಗಡಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಯಲ್ಲ. ಜಿಲ್ಲೆಯ ಹಿತ ಕಾಪಾಡಲು ನಾನು ಬದ್ಧನಾಗಿದ್ದೇನೆಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ಹೇಮಾವತಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಕ್ಸ್‌ಪ್ರೆಸ್ ಕೆನಾಲ್ ನಿರ್ಮಾಣದಿಂದ ಗುಬ್ಬಿ, ತುಮಕೂರು, ಶಿರಾ, ತುಮಕೂರು ಗ್ರಾಮಾಂತರ ಕ್ಷೇತ್ರಗಳಿಗೆ ನೀರು ಹರಿಯುವುದಿಲ್ಲ ಎಂಬ ತಪ್ಪು ಕಲ್ಪನೆ ಸೃಷ್ಟಿಸಲಾಗಿದೆ. ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಮುನ್ನ ತಜ್ಞರ ವರದಿಯನ್ನು ಪಡೆದುಕೊಂಡೇ ಈ ಯೋಜನೆಯನ್ನು ಅನುಷ್ಠಾನ ಮಾಡಿರುವುದು. 2024ನೇ ಜನವರಿ 5ರ ಸಂಪುಟ ಸಭೆಯಲ್ಲಿ ಈ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್‌ಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಾರಂಭದಲ್ಲಿ ಜನಪ್ರತಿನಿಧಿಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 2024ರ ಸೆಪ್ಟಂಬರ್ 3ರಂದು ಶಾಸಕರಾದ ಬಿ.ಸುರೇಶಗೌಡ, ಜಿ.ಬಿ.ಜ್ಯೋತಿಗಣೇಶ್, ಎಂ.ಟಿ.ಕೃಷ್ಣಪ್ಪ, ಡಾ.ರಂಗನಾಥ ಅವರ ಸಮ್ಮುಖದಲ್ಲಿ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ ಮಾಹಿತಿ ನೀಡಿದಾಗ ಈ ಶಾಸಕರುನಮ್ಮ ಭಾಗಕ್ಕೆ ನೀರನ್ನು ಕೊರತೆ ಬಾರದಂತೆ ತೆಗೆದುಕೊಂಡು ಹೋಗುವುದಾದರೆ ನಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದ್ದರು ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

ಕುಣಿಗಲ್‌ಗೆ ಚಾನಲ್ ಇದ್ದರೂ 2014ರಿಂದ 2024ರವರೆಗೆ ಚಾನಲ್ ಮೂಲಕ ಹರಿದಿರುವ ನೀರಿನ ಪ್ರಮಾಣವನ್ನು ತೆಗೆದುಕೊಂಡರೆ, ಒಂದು ಬಾರಿಯೂ ಪೂರ್ಣ ಪ್ರಮಾಣದ ನೀರನ್ನು ಒದಗಿಸಲಾಗಿಲ್ಲ. ಕುಣಿಗಲ್‌ಗೆ 3ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದ್ದು, 2014-15ರಲ್ಲಿ 0.210, 2015-16ರಲ್ಲಿ 0.230, 2016-17ರಲ್ಲಿ 0.030, 2017-18ರಲ್ಲಿ 0.072, 2018-2019ರಲ್ಲಿ 0.075, 2019-2020ರಲ್ಲಿ 0.227, 2020-21ರಲ್ಲಿ 0.4486, 2021-22ರಲ್ಲಿ 0.332, 2022-23ರಲ್ಲಿ 0.332, ಮತ್ತು 2023-24ರಲ್ಲಿ 0.2041 ಟಿಎಂಸಿಯಷ್ಟು ನೀರು ಹರಿದಿದೆ. ಕುಣಿಗಲ್‌ಗೆ ಪೂರ್ಣ ಪ್ರಮಾಣದಲ್ಲಿ ಚಾನಲ್ ಮುಖಾಂತರ ನೀರು ಹರಿಯದೆ ಇರುವುದರಿಂದ ಆ ಭಾಗದ ಶಾಸಕರು ಸರಕಾರಕ್ಕೆ ಮನವಿ ಮಾಡಿದಾಗ ಪೂರ್ಣ ಪ್ರಮಾಣದ ನೀರು ಕೊಡಲು ಈ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಯನ್ನು 956 ಕೋಟಿ ರೂ.ವೆಚ್ಚದಲ್ಲಿ ಸರಕಾರ ಕೈಗೆತ್ತಿಕೊಂಡಿದೆ ಎಂದು ಸಚಿವರು ಹೇಳಿದರು.

ಈ ವೇಳೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಎಸ್ಪಿ ಅಶೋಕ್.ಕೆ.ವಿ. ಮತ್ತು ಪಾಲಿಕೆ ಆಯುಕ್ತೆ ಅಶ್ವಿಜಾ ಉಪಸ್ಥಿತರಿದ್ದರು.

‘ನಿಷೇಧಾಜ್ಞೆಯ ನಡುವೆಯೂ ಪ್ರತಿಭಟನೆ: ಶಾಸಕರ ಸಹಿತ 18 ಮಂದಿ ವಿರುದ್ಧ ಎಫ್‌ಐಆರ್’

ಮೇ 31ರಂದು ಎಕ್ಸ್‌ಪ್ರೆಸ್ ಕೆನಾಲ್ ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಓರ್ವ ಪಿಎಸ್‌ಐ ಸಹಿತ ಕೆಲ ಪೊಲೀಸರಿಗೆ ಗಾಯವಾಗಿದೆ. ಜಿಲ್ಲಾಡಳಿತ ಪ್ರತಿಭಟನೆ ಮಾಡಬಾರದೆಂದು ನಿಷೇಧಾಜ್ಞೆ ಹೇರಿದ್ದರೂ ಪ್ರತಿಭಟನೆ ಕೈಗೊಂಡು ಗುತ್ತಿಗೆದಾರರ ಹಿಟಾಚಿ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಲಾಗಿದೆ. ಪ್ರತಿಭಟನೆಗೆ ಪ್ರಚೋದನೆ ನೀಡಿದ್ದಾರೆಂದು ಶಾಸಕರಾದ ಬಿ.ಸುರೇಶಗೌಡ, ಜಿ.ಬಿ.ಜ್ಯೋತಿಗಣೇಶ್, ಎಂ.ಟಿ.ಕೃಷ್ಣಪ್ಪ, ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್‌ಕುಮಾರ್ ಸಹಿತ 18 ಮಂದಿ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X