Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ...

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ : ನ್ಯಾ.ಬಿ.ಎನ್.ಶ್ರೀಕೃಷ್ಣ

ವಾರ್ತಾಭಾರತಿವಾರ್ತಾಭಾರತಿ1 Nov 2026 9:17 PM IST
share
ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ : ನ್ಯಾ.ಬಿ.ಎನ್.ಶ್ರೀಕೃಷ್ಣ

ಬೆಂಗಳೂರು : ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯು ಹಾಳಾಗಿದೆ. ಆಮಿಷ ತೋರಿಸಿ ಮತದಾರರನ್ನು ಕೊಳ್ಳುವ ಮೂಲಕ ರಾಜಕಾರಣಿಗಳು ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಆದುದರಿಂದ ಪ್ರಜಾಪ್ರಭುತ್ವದ ಅಂತಃಸತ್ವವನ್ನು ಜನರಿಗೆ ತಿಳಿಸುವ ಕೆಲಸ ಮಾಧ್ಯಮಗಳು ಮಾಡಬೇಕು ಎಂದು ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಗರದ ಗಾಂಧಿ ಭವನದಲ್ಲಿ ಸೆಂಟರ್ ಫಾರ್ ಪ್ರೋಟೆಕ್ಷನ್ ಆಫ್ ಡೆಮಾಕ್ರಟಿಕ್ ರೈಟ್ಸ್ ಆ್ಯಂಡ್ ಸೆಕ್ಯುಲರಿಸಂ(ಸಿಪಿಡಿಆರ್ ಎಸ್) ಸಂಘಟನೆಯ ವತಿಯಿಂದ ಆಯೋಜಿಸಿದ್ದ ‘ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಧರ್ಮನಿರಪೇಕ್ಷತೆ’ ಕುರಿತ ರಾಜ್ಯ ಸಮಾವೇಶದಲ್ಲಿ ಅವರು ಮಾತನಾಡಿದರು.

ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಹಾಗೂ ಮಾನವ ಹಕ್ಕುಗಳನ್ನು ಉಲ್ಲಂಘಿಸುವ ಕೆಲಸವನ್ನು ಸರಕಾರಗಳು ಮಾಡಬಾರದು. ಪ್ರಶ್ನಿಸಿದರೆ ಜೈಲಿಗೆ ಕಳುಹಿಸುವ, ಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಬಂಧಿಸುವ, ತಿಭಟನೆಗಳಿಗೆ ಅವಕಾಶ ನೀಡದಿರುವ ಕೆಲಸ ಸರಕಾರದಿಂದ ನಡೆಯುತ್ತಿದೆ ಎಂದು ಹೇಳಿದರು.

ದೇಶದ ಪ್ರತಿಯೊಬ್ಬ ಪ್ರಜೆಗೆ ಹುಟ್ಟಿನಿಂದಲೇ ಬಂದಿರುವ ಮಾನವ ಹಕ್ಕುಗಳನ್ನು ನಿರ್ಬಂಧಿಸುವ, ವ್ಯಕ್ತಿತ್ವವನ್ನು ನಾಶಗೊಳಿಸುವ ಕೆಲಸವನ್ನು ಸರಕಾರ ಮಾಡಬಾರದು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಚುನಾವಣಾ ಆಯೋಗವು ಸ್ವಾಯತ್ತತೆಯನ್ನು ಕಾಯ್ದುಕೊಂಡಿಲ್ಲ. ಹೀಗಾಗಿಯೇ ದೇಶದ ಯುವ ಜನಾಂಗಕ್ಕೆ ನಿರಾಶೆಯಾಗಿದೆ. ಅದರಿಂದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಹೇಳಿದರು.

ಸೆಕ್ಯುಲರಿಸಂ ಪದವು 42ನೇ ಸಂವಿಧಾನ ತಿದ್ದುಪಡಿಯ ಮೂಲಕ ಪ್ರಸ್ತಾವನೆಯಲ್ಲಿ ಸೇರ್ಪಡೆಯಾದರೂ, ಧರ್ಮನಿರಪೇಕ್ಷತೆ ಪ್ರಜ್ಞೆಯು ಸಂವಿಧಾನದ ಮೂಲರಚನೆಯಲ್ಲಿಯೇ ಇತ್ತು. ಸಂವಿಧಾನದ ಆಶಯಗಳನ್ನು ಹಾಗೂ ಸಂವಿಧಾನ ನೀಡಿರುವ ಹಕ್ಕುಗಳನ್ನು ಕಾಪಾಡಬೇಕಿರುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಮಾತನಾಡಿ, ಎಸ್‍ಐಆರ್ ಪ್ರಕ್ರಿಯೆ ಮೂಲಕ ಮತದಾರರ ಹಕ್ಕನ್ನು ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗ ನಾಶ ಮಾಡುತ್ತಿದೆ. ಮುಖ್ಯ ಚುನಾವಣಾ ಆಯುಕ್ತರನ್ನು ನೇಮಿಸುವ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನಾಯಮೂರ್ತಿಯನ್ನು ಹೊರಗಿಡುವ ಕೆಲಸವನ್ನು ಆಡಳಿತ ಪಕ್ಷ ಮಾಡಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ 12 ವರ್ಷಗಳಲ್ಲಿ ದೇಶದಲ್ಲಿ ಭಯದ ವಾತಾವರಣ ನಿರ್ಮಿಸಿದ್ದಾರೆ. ಇದೀಗ ಸಿಜೆಪಿ, ವಿದ್ಯಾರ್ಥಿ ಸಂಘಟನೆಗಳು, ಜಾತ್ಯತೀತ ಪಕ್ಷಗಳು ಹೋರಾಟಕ್ಕೆ ಮುಂದಾಗಿವೆ. ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ಯುವ ಜನತೆ ಮುಂಚೂಣಿಯಲ್ಲಿರುವುದು ಆಶಾದಾಯಕ ಎಂದರು.

ಸಮಾವೇಶದಲ್ಲಿ ಸಿಪಿಡಿಆರ್ ಎಸ್ ಪ್ರದಾನ ಕಾರ್ಯದರ್ಶಿ ಪ್ರೊ.ಶ್ರೀಧರ್ ಕುಂಚೆ, ಸಂಚಾಲಕ ಎಂ.ಎನ್. ಶ್ರೀರಾಮ್, ವಕೀಲೆ ಹೇಮಲತಾ ಮಹಿಷಿ ಮತ್ತಿತರರು ಹಾಜರಿದ್ದರು.

ಸಮಾವೇಶದ ನಿರ್ಣಯಗಳು :

ಸಮಾವೇಶದಲ್ಲಿ ಮಾನವ ಹಕ್ಕುಗಳು, ಪ್ರಜಾಸತ್ತಾತ್ಮಕ ಆಚರಣೆಗಳು ಮತ್ತು ಜಾತ್ಯತೀತತೆಯನ್ನು ರಕ್ಷಿಸುವುದು. ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಗೆ ಸಂಬಂಧಿಸಿದ ಆತಂಕಗಳು ಮತ್ತು ಕಳವಳಗಳನ್ನು ವ್ಯಕ್ತಪಡಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

Tags

Democracy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X