Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಯಚೂರಿನಲ್ಲಿ ʼಏಮ್ಸ್‌ʼ ಸ್ಥಾಪನೆಗೆ...

ರಾಯಚೂರಿನಲ್ಲಿ ʼಏಮ್ಸ್‌ʼ ಸ್ಥಾಪನೆಗೆ ಕೇಂದ್ರ ಸರಕಾರದ ಮನವೊಲಿಸಿ: ಸಚಿವ ಬೋಸರಾಜು ಅವರಿಂದ ಕಲ್ಯಾಣ ಕರ್ನಾಟಕ ಸಂಸದರಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ31 Jan 2024 3:30 PM IST
share
ರಾಯಚೂರಿನಲ್ಲಿ ʼಏಮ್ಸ್‌ʼ ಸ್ಥಾಪನೆಗೆ ಕೇಂದ್ರ ಸರಕಾರದ ಮನವೊಲಿಸಿ: ಸಚಿವ ಬೋಸರಾಜು ಅವರಿಂದ ಕಲ್ಯಾಣ ಕರ್ನಾಟಕ ಸಂಸದರಿಗೆ ಪತ್ರ

ಬೆಂಗಳೂರು: ರಾಯಚೂರು ನಗರದಲ್ಲಿ ʼಏಮ್ಸ್‌ʼ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಬೋಸರಾಜು ಅವರು ಕಲ್ಯಾಣ ಕರ್ನಾಟಕ ಭಾಗದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರಕಾರದಿಂದ ಮಹತ್ವಾಕಾಂಕ್ಷೆ ಜಿಲ್ಲೆಯ (Aspiration District) ಹಾಗೂ 371(ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದೆ. ನಂಜುಂಡಪ್ಪ ವರದಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಐಐಟಿ ಯಂತಹ ಶೈಕ್ಷಣಿಕ ಸಂಸ್ಥೆಗಳನ್ನ ಸ್ಥಾಪಿಸುವಂತೆ ಸಲಹೆ ನೀಡಲಾಗಿತ್ತು. ಆದರೆ, ಕಾರಣಾಂತರಗಳಿಂದ ಐಐಟಿ ಯನ್ನ ಧಾರವಾಡ ಜಿಲ್ಲೆಗೆ ಮಂಜೂರು ಮಾಡಲಾಯಿತು. ಆ ನಂತರದ ದಿನಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡುವುದಾಗಿ ಕೇಂದ್ರ ಸರಕಾರ ಭರವಸೆ ನೀಡಿತು.

ಧಾರವಾಡ ಜಿಲ್ಲೆಯಲ್ಲಿ ಐಐಟಿ ಸ್ಥಾಪನೆ ಆದ ನಂತರ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಂಸ್ಥೆಯಾಗಿರುವ ಏಮ್ಸ್‌ ಅನ್ನು ರಾಯಚೂರು ಜಿಲ್ಲೆಗೆ ಮಂಜೂರು ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ. ಪಕ್ಷಾತೀತವಾಗಿ ರಾಯಚೂರು ನಗರದಲ್ಲಿ ಏಮ್ಸ್‌ ನ್ನು ಸ್ಥಾಪಿಸಬೇಕು ಎನ್ನುವ ಕೂಗಿನ ನಡುವೆ 629 ದಿನಗಳಿಂದ ಸಾರ್ವಜನಿಕರು ನಿರಂತರ ಹೋರಾಟ ನಡೆಸುತ್ತಿದ್ದಾರೆ.

ಸನ್ಮಾನ್ಯ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುತ್ತಿದೆ. 17-06-2023 ರಂದು ಸನ್ಮಾನ್ಯ ಮುಖ್ಯಮಂತ್ರಿಗಳು ಕೇಂದ್ರ ಆರೋಗ್ಯ ಮಂತ್ರಿಗಳಿಗೆ ಪತ್ರವನ್ನ ಬರೆದು ರಾಯಚೂರಿನಲ್ಲಿ ಏಮ್ಸ್ ಮಂಜೂರು ಮಾಡುವಂತೆ ಮನವಿ ಮಾಡಿದರು. ಅಲ್ಲದೇ, ರಾಜ್ಯ ಸರಕಾರದಿಂದ ಅಗತ್ಯ ಸಹಕಾರ ನೀಡುವುದಾಗಿಯೂ ತಮ್ಮ ಪತ್ರದಲ್ಲಿ ತಿಳಿಸಿದ್ದರು. ಇದಕ್ಕೆ ಉತ್ತರ ದೊರಕದ ಹಿನ್ನಲೆಯಲ್ಲಿ 07-09-2023 ರಂದು ಮತ್ತೊಂದು ಪತ್ರವನ್ನು ಬರೆದು ಮನವಿಯನ್ನ ಮಾಡಿದ್ದರು. 22-08-2023 ರಂದು ರಾಯಚೂರು ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು, ಹೋರಾಟ ಸಮಿತಿಯ ಸದಸ್ಯರನ್ನ ಒಳಗೊಂಡ ತಂಡ ದೆಹಲಿಗೆ ಭೇಟಿ ನೀಡಿ ಆರೋಗ್ಯ ಸಚಿವರನ್ನು ಭೇಟಿ ಮಾಡಿ ರಾಜ್ಯ ಸರಕಾರದ ಅಧಿಕೃತ ಒಪ್ಪಿಗೆಯನ್ನು ಸಲ್ಲಿಸಿತು. ಈ ತಂಡಕ್ಕೆ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ರಾಜ್ಯ ಸರಕಾರದ ಆಶಯದಂತೆಯೇ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಆದರೆ, ಇದುವರೆಗೂ ಕೇಂದ್ರ ಸರಕಾರದಿಂದ ಇದುವರೆಗೂ ಯಾವುದೇ ರೀತಿಯ ಅಧಿಕೃತ ಸಂವಹನ ಸ್ವೀಕಾರವಾಗಿಲ್ಲ. ಈ ಹಿನ್ನಲೆಯಲ್ಲಿ 29-01-2024 ರಂದು ಮತ್ತೊಮ್ಮೆ ಸನ್ಮಾನ್ಯ ಮುಖ್ಯಮಂತ್ರಿಗಳು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು 2024-25 ರ ಕೇಂದ್ರ ಬಜೆಟ್ ನಲ್ಲಿ ಘೋಷಣೆ ಮಾಡುವಂತೆ ಕೋರಿದ್ದಾರೆ.

ಈ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕದ ಜನಪ್ರತಿನಿಧಿಗಳಾದ ತಾವುಗಳು ಕೇಂದ್ರ ಸರಕಾರದ ಮೇಲೆ ಮತ್ತಷ್ಟು ಒತ್ತಡ ಹೇರುವ ಅವಶ್ಯಕತೆಯಿದೆ. ತಾವುಗಳು ಕೇಂದ್ರ ಸರಕಾರದ ವಿತ್ತ ಸಚಿವರು ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಿಕೊಳ್ಳುವ ಮೂಲಕ ರಾಯಚೂರು ನಗರಕ್ಕೆ ಏಮ್ಸ್‌ ಮಂಜೂರು ಆಗುವಂತೆ ಮಾಡುವ ನಿಟ್ಟಿನಲ್ಲಿ ಸಹಕರಿಸಿ ಎಂದು ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಸಚಿವರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X