ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಜೂ.11: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಸುಧಾ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಬ್ಯಾಂಕ್ವಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗೆ ಪ್ರಮಾಣ ವಚನ ಬೋಧಿಸಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶ ವಿ.ಕಾಮೇಶ್ವರ ರಾವ್, ಇಂಧನ ಸಚಿವ ಕೆ.ಜೆ.ಜಾರ್ಜ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ., ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story