ವಿವಿ ಹಾಜರಾತಿ ಮಿತಿ ಮಾನದಂಡ ಆಕ್ಷೇಪಿಸಿದ ಪಿಐಎಲ್ : ವಿಚಾರಣೆಗೆ ಹೈಕೋರ್ಟ್ ನಕಾರ

ಬೆಂಗಳೂರು, ಆ.7: ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದುಕೊಳ್ಳಬೇಕಾದರೆ ವಿಶ್ವವಿದ್ಯಾನಿಲಯಗಳು ನಿಗದಿಪಡಿಸುವ ಹಾಜರಾತಿ ಮಿತಿಯ ಮಾನದಂಡಗಳನ್ನು ಹಾಗೂ ಕೋರ್ಸ್ ಅರ್ಧಕ್ಕೇ ಮೊಟಕುಗೊಳಿಸಿದಾಗ ವಿದ್ಯಾರ್ಥಿಯ 10ನೇ ತರಗತಿ ಮತ್ತು ಪಿಯುಸಿ ಮೂಲ ಅಂಕಪಟ್ಟಿಗಳನ್ನು ತಡೆ ಹಿಡಿಯವುದನ್ನು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.
ಬೆಂಗಳೂರಿನ ರಾಷ್ಟ್ರೀಯ ಮಾನವಹಕ್ಕು ಮತ್ತು ಸಾಮಾಜಿಕ ನ್ಯಾಯ ವೇದಿಕೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪಿಐಎಲ್ ಇತ್ಯರ್ಥಪಡಿಸಿತು.
Next Story





