Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಡಿಎ ಕಚೇರಿ ತೆರವುಗೊಳಿಸಿ ಹೊಸ ಕಟ್ಟಡ...

ಬಿಡಿಎ ಕಚೇರಿ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ನಿರ್ಣಯ ಪ್ರಶ್ನಿಸಿದ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ10 Oct 2026 7:21 PM IST
share
ಬಿಡಿಎ ಕಚೇರಿ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ನಿರ್ಣಯ ಪ್ರಶ್ನಿಸಿದ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನಗರದ ಕುಮಾರಪಾರ್ಕ್‌ ಪಶ್ಚಿಮದಲ್ಲಿರುವ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ (ಬಿಡಿಎ) ಪ್ರಧಾನ ಕಚೇರಿ ತೆರವುಗೊಳಿಸಿ ಆ ಜಾಗದಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಆಧುನಿಕ ಕಟ್ಟಡ ನಿರ್ಮಿಸಲು ಕೈಗೊಂಡಿರುವ ನಿರ್ಣಯ ಪ್ರಶ್ನಿಸಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಡಿಎಗೆ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಎಂ. ಶಿವಕುಮಾರ್‌ ಮತ್ತು ಎಚ್‌. ಶಿವರಾಮ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್‌ ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಭರತ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿದೆ.

ಸುವರ್ಣ ಮಹೋತ್ಸವ ಆಚರಣೆಯೊಂದೇ ಈಗಿನ ಕಟ್ಟಡವನ್ನು ತೆರವುಗೊಳಿಸಿ ನೂತನ ಕಚೇರಿ ನಿರ್ಮಿಸಲು ಸಮರ್ಥನೀಯ ಕಾರಣವಾಗುವುದಿಲ್ಲ. ಯೋಜನೆಯ ಅಗತ್ಯ, ಕಾರ್ಯಸಾಧ್ಯತೆ, ಹಣಕಾಸಿನ ಪರಿಣಾಮ ಮತ್ತು ಈಗಿನ ಕಟ್ಟಡದ ಸ್ಥಿತಿಗತಿ ಕುರಿತು ಯಾವುದೇ ಸಮಗ್ರ ಪರಿಶೀಲನೆ ನಡೆಸಿಲ್ಲ. ಆದ್ದರಿಂದ, ಬಿಡಿಎ ಕೇಂದ್ರ ಕಚೇರಿ ಕಟ್ಟಡ ನೆಲಸಮಗೊಳಿಸಿ ಆಧುನಿಕ ಕಟ್ಟಡ ನಿರ್ಮಿಸುವ ಸಂಬಂಧ ಅಂಗೀಕರಿಸಲಾಗಿರುವ ನಿರ್ಣಯವನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಅರ್ಜಿದಾರರ ಆಕ್ಷೇಪವೇನು? :

ಬಿಡಿಎ ಕೇಂದ್ರ ಕಚೇರಿಯ ಆರಂಭಿಕ ಕಟ್ಟಡಗಳನ್ನು 1978ರಲ್ಲಿ ನಿರ್ಮಿಸಲಾಗಿತ್ತು. ಪ್ರಾಧಿಕಾರದ ಕೆಲಸದ ಹೊರೆ ಮತ್ತು ಸಿಬ್ಬಂದಿ ಸಂಖ್ಯೆ ಹೆಚ್ಚಿದಂತೆ ಈಗಿನ ಕಟ್ಟಡಗಳು ಸಾಕಾಗದ ಕಾರಣ, ಕೇಂದ್ರ ಕಚೇರಿ ಸಂಕೀರ್ಣದ ಪಕ್ಕದಲ್ಲಿಯೇ 2004ರಲ್ಲಿ ನಾಲ್ಕು ಮಹಡಿಗಳ ಹೆಚ್ಚುವರಿ 'ಅಭಿವೃದ್ಧಿ ಭವನ' ನಿರ್ಮಿಸಲಾಗಿದೆ. ಬಿಡಿಎ ಕೇಂದ್ರ ಕಚೇರಿ ಕಟ್ಟಡದ ನಿರ್ವಹಣೆಗೆ ಈಗಾಗಲೇ ಸುಮಾರು 25 ಕೋಟಿ ರೂ. ವೆಚ್ಚ ಮಾಡಲಾಗಿದೆ. ಹೀಗಿದ್ದರೂ, ಪ್ರಾಧಿಕಾರದ 50ನೇ ವರ್ಷಾಚರಣೆ ಸಮೀಪಿಸುತ್ತಿದೆ ಎಂಬ ಕಾರಣಕ್ಕೆ ಸಮರ್ಥನೆ ನೀಡದೆ ಈಗಿನ ಕಟ್ಟಡವನ್ನು ನೆಲಸಮಗೊಳಿಸಿ ಆಧುನಿಕ ಕಟ್ಟಡ ನಿರ್ಮಿಸಲು 2025ರ ಡಿಸೆಂಬರ್ 30ರಂದು ನಡೆದ ಪ್ರಾಧಿಕಾರದ ಮಂಡಳಿ ಸಭೆಯಲ್ಲಿ ಏಕಪಕ್ಷೀಯ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಈಗಿರುವ ಕಟ್ಟಡದ ಸದೃಢತೆ ಮತ್ತು ಸುರಕ್ಷತೆ ಬಗ್ಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ರಚನಾತ್ಮಕ ಅಥವಾ ತಾಂತ್ರಿಕ ಪರಿಶೀಲನೆ ನಡೆಸಿಲ್ಲ. ಅನ್ವಯವಾಗುವ ಕಾನೂನುಬದ್ಧ ಪ್ರಕ್ರಿಯೆ ಪಾಲಿಸದೆಯೇ ಮತ್ತು ಅಗತ್ಯ ಅನುಮೋದನೆಗಳನ್ನು ಪಡೆಯದೆಯೇ ನಿರ್ಣಯ ಅಂಗೀಕರಿಸಲಾಗಿದೆ. ಬಿಡಿಎ ಕಾಯ್ದೆಯ ಪ್ರಕಾರ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಪ್ರಾಧಿಕಾರವು ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಬಿಡಿಎಗೆ ನಿರ್ಣಯ ಕೈಗೊಳ್ಳುವ ಅಧಿಕಾರವಿದ್ದರೂ, ಅದು ಮನಸಿಗೆ ಬಂದಂತೆ ವರ್ತಿಸಲು ಅಥವಾ ಏಕಪಕ್ಷೀಯವಾಗಿ ಅನುಮೋದನೆ ನೀಡಿ ಕಟ್ಟಡ ನೆಲಸಮಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಕಟ್ಟಡ ನೆಲಸಮಗೊಳಿಸಿ ಹೊಸ ಸಂಕೀರ್ಣ ನಿರ್ಮಿಸುವ ಯೋಜನೆಯಲ್ಲಿ ಭಾರಿ ಪ್ರಮಾಣದ ಸಾರ್ವಜನಿಕ ಹಣ ಒಳಗೊಂಡಿದೆ. ಬಿಡಿಎ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದು, 5 ವರ್ಷಕ್ಕೂ ಅಧಿಕ ಅವಧಿಯಿಂದ ಲೆಕ್ಕಪತ್ರಗಳ ಲೆಕ್ಕಪರಿಶೋಧನೆ ನಡೆಸಿಲ್ಲ. ಲೆಕ್ಕಪತ್ರಗಳನ್ನು ಸಾರ್ವಜನಿಕರ ಪರಿಶೀಲನೆಗೆ ಲಭ್ಯವಾಗುವಂತೆ ಸಾರ್ವಜನಿಕ ವಲಯದಲ್ಲಿಯೂ ಪ್ರಕಟಿಸಿಲ್ಲ. ಇಂತಹ ಆರ್ಥಿಕ ಪರಿಸ್ಥಿತಿಯಲ್ಲಿರುವ ಪ್ರಾಧಿಕಾರವು ಬಳಕೆಯಲ್ಲಿರುವ ಕಟ್ಟಡವನ್ನು ಕೆಡವಿ, ಮರುನಿರ್ಮಾಣಕ್ಕಾಗಿ ಭಾರಿ ವೆಚ್ಚ ಮಾಡುವುದು ಸಾರ್ವಜನಿಕ ಆಸ್ತಿ ಮತ್ತು ರಾಜ್ಯದ ಬೊಕ್ಕಸದ ಮೇಲೆ ಗಂಭೀರ ಪರಿಣಾಮ ಉಂಟುಮಾಡಲಿದೆ ಎಂದು ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

Tags

BDAHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X