Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್...

ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಗೆ ಪ್ರಧಾನಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 Nov 2026 8:08 PM IST
share
ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಗೆ ಪ್ರಧಾನಿ ಚಾಲನೆ

ಬೆಂಗಳೂರು : ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ನಗರದ ಐಐಎಂ ಬೆಂಗಳೂರು ಸಭಾಂಗಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದರು. ಜೊತೆಗೆ, ರಾಜ್ಯದ ವಿವಿಧ ರೈಲ್ವೆ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು.

ಅಮೃತ ಭಾರತ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಳಿಸಲಾದ ಚಾಮರಾಜನಗರ, ಚಿಕ್ಕಮಗಳೂರು, ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣಗಳನ್ನು ಉದ್ಘಾಟಿಸಿದ ಪ್ರಧಾನಿ, 45 ಕಿ.ಮೀ. ಉದ್ದದ ಬಾಗಲಕೋಟೆ-ವಂದಾಲ ಜೋಡಿ ಮಾರ್ಗ ಹಾಗೂ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಭಾಗದ ವಿದ್ಯುದೀಕರಣವನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಎಸ್‍ಎಂವಿಟಿ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, 2026-27ನೆ ಸಾಲಿನ ಕೇಂದ್ರ ಬಜೆಟ್‍ನಲ್ಲಿ ಭಾರತೀಯ ರೈಲ್ವೆಗೆ 2.93 ಲಕ್ಷ ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಕರ್ನಾಟಕದಲ್ಲಿ 52 ಸಾವಿರ ಕೋಟಿ ರೂ. ಮೊತ್ತದ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

ಈಗಾಗಲೇ ಪ್ರಸ್ತಾಪಿಸಲಾದ ಏಳು ಹೈಸ್ಪೀಡ್ ರೈಲು ಕಾರಿಡಾರ್‌ಗಳ ಜೊತೆಗೆ ಬೆಂಗಳೂರು-ಪುಣೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನೂ ಕೈಗೆತ್ತಿಕೊಳ್ಳಲಾಗುವುದು. ನೂತನವಾಗಿ ಪರಿಚಯಿಸಲಾದ ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ಸೇವೆಯು ಕರಾವಳಿ ಭಾಗದ ಜನರು ಹಾಗೂ ಜನಪ್ರತಿನಿಧಿಗಳ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ ಎಂದು ಅವರು ಹೇಳಿದರು.

ಈ ಹೊಸ ರೈಲು ಸೇವೆಯು ಬೆಂಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲದೆ, ದಕ್ಷಿಣ ಗೋವಾದ ಪ್ರಯಾಣಿಕರಿಗೂ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ವಿದ್ಯಾರ್ಥಿಗಳು, ಯುವ ವೃತ್ತಿಪರರು, ಉದ್ಯಮಿಗಳು ಹಾಗೂ ವ್ಯಾಪಾರಸ್ಥರಿಗೆ ಅನುಕೂಲಕರ ಪ್ರಯಾಣದ ಆಯ್ಕೆಯನ್ನು ಒದಗಿಸುವುದರ ಜೊತೆಗೆ, ಕರಾವಳಿ ಕರ್ನಾಟಕ ಮತ್ತು ಗೋವಾದ ಪ್ರವಾಸೋದ್ಯಮ ಅಭಿವೃದ್ಧಿಗೂ ಉತ್ತೇಜನ ನೀಡಲಿದೆ ಎಂದು ಸೋಮಣ್ಣ ತಿಳಿಸಿದರು.

ವಂದೇ ಭಾರತ್ ರೈಲುಗಳ ನಿರ್ವಹಣೆಗಾಗಿ ಥಣಿಸಂದ್ರದಲ್ಲಿ ಅಂದಾಜು 270 ಕೋಟಿ ರೂ. ವೆಚ್ಚದಲ್ಲಿ ನಿರ್ವಹಣಾ ಡಿಪೊ ನಿರ್ಮಿಸಲಾಗುತ್ತಿದೆ. ರಾಜ್ಯದಲ್ಲಿ ವಿವಿಧ ಹೊಸ ರೈಲು ಮಾರ್ಗ ಹಾಗೂ ಜೋಡಿ ಮಾರ್ಗ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಸೋಮಣ್ಣ ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ.ಮೋಹನ್, ರೈಲ್ವೆ ಮಂಡಳಿಯ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಕುಮಾರ್ ಹಾಗೂ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆಶುತೋಷ್‌ ಕುಮಾರ್ ಸಿಂಗ್ ಮಾತನಾಡಿದರು. ಸಂಸದರಾದ ಲಹರ್ ಸಿಂಗ್ ಸಿರೋಯಾ, ಜಗ್ಗೇಶ್, ಶಾಸಕರಾದ ಎಸ್.ರಘು, ಮುನಿರತ್ನ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ, ‘ವಿಕಸಿತ ಭಾರತ @ 2047’ ಮತ್ತು ‘ಭಾರತೀಯ ರೈಲ್ವೆಯ ಆಧುನೀಕರಣ’ ವಿಷಯಗಳ ಕುರಿತು ಆಯೋಜಿಸಲಾಗಿದ್ದ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಯಶವಂತಪುರ-ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ಸೇವೆಯು ನ.15ರಿಂದ ಯಶವಂತಪುರ ಮತ್ತು ಮಡಗಾಂವ್ ಎರಡೂ ಕಡೆಯಿಂದ ಪ್ರಾರಂಭವಾಗಲಿದೆ. ರೈಲು ಸಂಖ್ಯೆ 26655 ಯಶವಂತಪುರದಿಂದ ಮಡಗಾಂವ್‍ಗೆ ಬುಧವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಸಂಚರಿಸಲಿದೆ.

ರೈಲು ಸಂಖ್ಯೆ 26656 ಮಡಗಾಂವ್‍ನಿಂದ ಯಶವಂತಪುರಕ್ಕೆ ಗುರುವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಸಂಚರಿಸಲಿದೆ. ರೈಲು ಸಂಖ್ಯೆ 26655 ಯಶವಂತಪುರ ಜಂಕ್ಷನ್‍ನಿಂದ ಬೆಳಗ್ಗೆ 7:35 ಗಂಟೆಗೆ ಹೊರಟು ಅದೇ ದಿನ ರಾತ್ರಿ 8:55 ಗಂಟೆಗೆ ಮಡಗಾಂವ್ ತಲುಪಲಿದೆ. ರೈಲು ಸಂಖ್ಯೆ 26656 ಮಡಗಾಂವ್‍ನಿಂದ ಬೆಳಗ್ಗೆ 8:20 ಗಂಟೆಗೆ ಹೊರಟು ಅದೇ ದಿನ ರಾತ್ರಿ 9:15 ಗಂಟೆಗೆ ಯಶವಂತಪುರ ಜಂಕ್ಷನ್ ತಲುಪಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಶ್ರವಣಬೆಳಗೊಳ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮಂಗಳೂರು ಜಂಕ್ಷನ್, ಉಡುಪಿ, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಮುರ್ಡೇಶ್ವರ, ಗೋಕರ್ಣ ರೋಡ್ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

Tags

Vande Bharat ExpressMadgaonMangaluruBengaluruPM Modi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X