Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಧಾನಿ ಮೋದಿ ನಡೆ ‘ವಿನಾಶ ಕಾಲೇ ವಿಪರೀತ...

ಪ್ರಧಾನಿ ಮೋದಿ ನಡೆ ‘ವಿನಾಶ ಕಾಲೇ ವಿಪರೀತ ಬುದ್ಧಿ’ : ಶಾಸಕ ಬಿ.ಆರ್.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ9 Oct 2026 7:30 PM IST
share
ಪ್ರಧಾನಿ ಮೋದಿ ನಡೆ ‘ವಿನಾಶ ಕಾಲೇ ವಿಪರೀತ ಬುದ್ಧಿ’ : ಶಾಸಕ ಬಿ.ಆರ್.ಪಾಟೀಲ್

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯಲ್ಲಿ ಲೋಪ ಆರೋಪದಡಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಜನಪರ ಹೋರಾಟವನ್ನು ಹತ್ತಿಕ್ಕಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಡೆ ʼವಿನಾಶ ಕಾಲೇ ವಿಪರೀತ ಬುದ್ಧಿʼ ಎಂಬಂತೆ ಇದೆ ಎಂದು ಸಾಮಾಜಿಕ ಚಿಂತಕ, ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಜನತಾ ನ್ಯಾಯಾಲಯ ಪ್ರತಿಭಟನಾ ಹೋರಾಟ ಹಾಗೂ ಖ್ಯಾತ ಯೂಟ್ಯೂಬರ್ ಧ್ರುವರಾಠಿ ಅವರೊಂದಿನ ಚರ್ಚೆ ಕುರಿತ ಅಭಿಪ್ರಾಯವನ್ನು ‘ವಾರ್ತಾಭಾರತಿ’ ಪತ್ರಿಕೆಯೊಂದಿಗೆ ಹಂಚಿಕೊಂಡ ಅವರು, ಅ.10ರಂದು ಹೊಸದಿಲ್ಲಿಯಲ್ಲಿ ದೊಡ್ಡ ಮಟ್ಟದಲ್ಲಿ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಹಮ್ಮಿಕೊಳ್ಳಲಾಗಿದೆ. ಮತದಾನ ಹಕ್ಕುಗಳನ್ನೇ ಕಸಿಯಲು ಮುಂದಾಗಿರುವ ಜ್ಞಾನೇಶ್ ಕುಮಾರ್ ವಜಾಗೊಳಿಸಬೇಕೆಂದು ಆಗ್ರಹಿಸುವುದು ನ್ಯಾಯಯುತವಾಗಿದೆ. ಆದರೆ, ಇದನ್ನು ತಡೆಯಲು ರೈಲುಗಳ ಸಂಚಾರ ಹಾಗೂ ಮೆಟ್ರೋಗಳನ್ನೇ ಬಂದ್ ಮಾಡಿರುವ ಕ್ರಮ ಸರಿಯಲ್ಲ. ಇಂತಹ ನಡೆಯೂ ವಿನಾಶ ಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಎಂದು ನುಡಿದರು.

ಗುರುವಾರ ನಡೆದ ಹೋರಾಟದ ವೇದಿಕೆಯಲ್ಲಿ ಯೂಟ್ಯೂಬರ್ ಧ್ರುವರಾಠಿ ಅವರೊಂದಿಗೆ ಚರ್ಚೆ ನಡೆಸಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವ್ಯವಸ್ಥಿತವಾಗಿ ಯುವಕರನ್ನು ವಂಚನೆ ಮಾಡಿರುವುದು ಗೊತ್ತಾಗಿದೆ. ಉದ್ಯೋಗ, ಶಿಕ್ಷಣ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಜನರನ್ನು ವಂಚಿಸುತ್ತ ಬಂದಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು ಸಹ ಆಗಿದೆ. ಇದನ್ನು ನಮ್ಮ ಸಂವಿಧಾನ ನೀಡಿದೆ. ಆದರೆ, ಕೇಂದ್ರದಲ್ಲಿರುವ ಸರಕಾರ ಜನರು ಮಾತನಾಡುವುದೇ ಬೇಡ ಎಂದು ನಿರ್ಬಂಧ ಹೇರಲು ಮುಂದಾಗಿರುವುದು ಖಂಡನೀಯ ಎಂದರು.

ನನ್ನ ರಾಜಕೀಯ ಜೀವನದಲ್ಲಿ ಹತ್ತು ಹಲವು ಸರಕಾರಗಳು, ಪ್ರಧಾನಿಗಳನ್ನು ಕಂಡಿದ್ದೇನೆ. ಯಾರು ಸಹ ಜನರ ಮೇಲೆ ದಬ್ಬಾಳಿಕೆ ಮಾಡಲಿಲ್ಲ. ಆದರೆ, ಈಗಿನ ಸರಕಾರ ನೇರವಾಗಿ ಜನರನ್ನೆ ಗುರಿಯಾಗಿಸಿಕೊಂಡಿರುವುದು ಪ್ರಜಾಪ್ರಭುತ್ವದ ಮೇಲಿನ ಕಪ್ಪು ಚುಕ್ಕೆ ಎಂದೇ ಹೇಳಬಹುದು ಎಂದ ಅವರು, ಈಗ ಯುವಕರು ನಡೆಸುತ್ತಿರುವ ಹೋರಾಟ ಯಾವುದೇ ಪಕ್ಷದ ಹೋರಾಟವಲ್ಲ. ಇದೊಂದು ಜನಾಂದೋಲನವೇ ಆಗಿದೆ. ಇದನ್ನು ಯಾರು ಸಹ ತಡೆಯಲು ಸಾಧ್ಯವಿಲ್ಲ. ಕೇಂದ್ರ ಸರಕಾರ ಇದಕ್ಕೆ ಅಡ್ಡಿಪಡಿಸಿದರೆ ಮತ್ತಷ್ಟು ತೀವ್ರತೆ ಹೆಚ್ಚಾಗುತ್ತದೆ. ಜನರೇ ಇವರಿಗೆ ಶೀಘ್ರದಲ್ಲಿ ಬುದ್ಧಿಕಲಿಸುತ್ತಾರೆ ಎಂದು ಬಿ.ಆರ್.ಪಾಟೀಲ್ ಎಚ್ಚರಿಸಿದರು.

Tags

B.R.Patilmodi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X