Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪೊಕ್ಸೊ ಪ್ರಕರಣ: ಬಿ.ಎಸ್.ಯಡಿಯೂರಪ್ಪರಿಗೆ...

ಪೊಕ್ಸೊ ಪ್ರಕರಣ: ಬಿ.ಎಸ್.ಯಡಿಯೂರಪ್ಪರಿಗೆ ಸಮನ್ಸ್ ಜಾರಿ ಮಾಡಿದ ವಿಶೇಷ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ19 Nov 2025 9:44 AM IST
share
ಪೊಕ್ಸೊ ಪ್ರಕರಣ: ಬಿ.ಎಸ್.ಯಡಿಯೂರಪ್ಪರಿಗೆ ಸಮನ್ಸ್ ಜಾರಿ ಮಾಡಿದ ವಿಶೇಷ ನ್ಯಾಯಾಲಯ
ಡಿ.2ರಂದು ಕೋರ್ಟ್ ಗೆ ಹಾಜರಾಗಲು ಆದೇಶ

ಬೆಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ದಾಖಲಾಗಿರುವ ಪೊಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ನಾಲ್ವರಿಗೆ ಬೆಂಗಳೂರಿನ ವಿಶೇಷ ಸೆಷನ್ಸ್ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿಗೊಳಿಸಿದೆ.

ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ (ಎಫ್ಟಿಎಸ್ಸಿ-1) ನ್ಯಾಯಾಧೀಶೆ ಎಸ್. ಸುಜಾತಾ ಅವರು ಆರೋಪಿಗಳಾದ ಬಿ.ಎಸ್. ಯಡಿಯೂರಪ್ಪ, ವೈ.ಎಂ.ಅರುಣ, ಎಂ. ರುದ್ರೇಶ ಹಾಗೂ ಜಿ. ಮರಿಸ್ವಾಮಿಯವರಿಗೆ ಸಮನ್ಸ್ ಜಾರಿಗೊಳಿಸಿ, ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಆದೇಶಿಸಿದ್ದಾರೆ.

ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್. ನಾಯಕ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಎಲ್ಲ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿ, ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿದೆ.

ಕೋರ್ಟ್ ಆದೇಶವೇನು?

ಪೊಕ್ಸೊ ಪ್ರಕರಣದಲ್ಲಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡು 2024ರ ಜುಲೈ 4ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು 2025ರ ಫೆಬ್ರವರಿ 7ರಂದು ಪುರಸ್ಕರಿಸಿದ್ದ ಹೈಕೋರ್ಟ್, ಜುಲೈ 4ರ ಆದೇಶ ರದ್ದುಪಡಿಸಿ, ಪ್ರಕರಣವನ್ನು ಹಿಂದಿರುಗಿಸಿತ್ತು. ಆನಂತರ, ಫೆಬ್ರವರಿ 28ರಂದು ಪ್ರಕರಣದ ಸಂಬಂಧ ಹೊಸದಾಗಿ ಕಾಗ್ನೈಜೆನ್ಸ್ ತೆಗೆದುಕೊಂಡು, ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಆ ಆದೇಶವನ್ನೂ ಆರೋಪಿಗಳು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಆ ವೇಳೆ ಫೆಬ್ರವರಿ 28ರ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಅದಾದ ನಂತರ ಕಾಲ ಕಾಲಕ್ಕೆ ವಿಚಾರಣೆ ಮುಂದೂಡುತ್ತಾ ಬರಲಾಗಿದ್ದು, 2025ರ ನವೆಂಬರ್ 11ರಂದು ಪ್ರಕರಣವನ್ನು ಡಿಸೆಂಬರ್ 16ಕ್ಕೆ ಮುಂದೂಡಲಾಗಿತ್ತು. ಈ ಮಧ್ಯೆ, ಪ್ರಕರಣದ ಕಾಗ್ನೈಜೆನ್ಸ್ ತೆಗೆದುಕೊಂಡ ಹಾಗೂ ಸಮನ್ಸ್ ಜಾರಿ ಮಾಡಿದ ಕ್ರಮವನ್ನು ಹೈಕೋರ್ಟ್ ನವೆಂಬರ್ 13ರಂದು ಎತ್ತಿಹಿಡಿದಿದೆ. ಇದೀಗ, ವಿಶೇಷ ಸರ್ಕಾರಿ ಅಭಿಯೋಜಕರು ಹೈಕೋರ್ಟ್ ಆದೇಶದ ಪ್ರಮಾಣೀಕೃತ ಪ್ರತಿ ಸಲ್ಲಿಸಿ, ಪ್ರಕರಣವನ್ನು ಮುಂಚಿತವಾಗಿಯೇ ವಿಚಾರಣೆ ನಡೆಸಲು ಕೋರಿದ್ದಾರೆ. ಪೊಕ್ಸೊ ಕಾಯ್ದೆಯ ಸೆಕ್ಷನ್ 35ರ ಪ್ರಕಾರ ಕಾಗ್ನೈಜೆನ್ಸ್ ತೆಗೆದುಕೊಂಡ 30 ದಿನಗಳ ಒಳಗೆ ಸಂತ್ರಸ್ತ ಬಾಲಕಿಯ ಹೇಳಿಕೆ ದಾಖಲಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗಳ ಹಾಜರಾತಿಗೆ ಸಮನ್ಸ್ ಜಾರಿಗೊಳಿಸಬಹುದು. ಆದ್ದರಿಂದ, ಎಲ್ಲ ಆರೋಪಿಗಳಿಗೂ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ವಿಚಾರಣಾ ಕೋರ್ಟ್ ಆದೇಶ ಎತ್ತಿ ಹಿಡಿದಿದ್ದ ಹೈಕೋರ್ಟ್

ಪೊಕ್ಸೊ ಅಪರಾಧಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ, ಸಮನ್ಸ್ ಜಾರಿಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಕೋರಿ ಯಡಿಯೂರಪ್ಪ ಸೇರಿ ನಾಲ್ವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದಲ್ಲಿ ಸಂಜ್ಞೇ ಪರಿಗಣಿಸಿ, ಸಮನ್ಸ್ ಜಾರಿ ಮಾಡಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿ ಹಿಡಿದಿತ್ತು.

ಜೊತೆಗೆ, ಪ್ರಕರಣದ ವಿಚಾರಣೆ ವೇಳೆ ಯಡಿಯೂರಪ್ಪರನ್ನು ಅನಗತ್ಯವಾಗಿ ವಿಚಾರಣೆಗೆ ಹಾಜರಾಗುವಂತೆ ಒತ್ತಾಯಿಸಬಾರದು. ಅರ್ಜಿದಾರರ ಉಪಸ್ಥಿತಿ ಅಗತ್ಯವಿಲ್ಲದಿದ್ದರೆ ವಿಚಾರಣೆಗೆ ಹಾಜರಾತಿಯಿಂದ ವಿನಾಯಿತಿ ಕೋರಿ ಸಲ್ಲಿಸುವ ಮನವಿಯನ್ನು ವಿಚಾರಣಾ ನ್ಯಾಯಾಲಯ ಪುರಸ್ಕರಿಸಬೇಕು ಎಂದು ಹೇಳಿತ್ತು.

ಈ ನ್ಯಾಯಾಲಯ (ಹೈಕೋರ್ಟ್) ಆದೇಶದಲ್ಲಿ ಅವಲೋಕಿಸಿರುವ ಅಂಶಗಳ ಪ್ರಭಾವಕ್ಕೆ ಒಳಗಾಗದೇ ತನ್ನ ಮುಂದೆ ಇರುವ ಸಾಕ್ಷಿಗಳನ್ನು ಆಧರಿಸಿ ವಿಚಾರಣಾ ನ್ಯಾಯಾಲಯ ಪ್ರಕರಣ ನಿರ್ಧರಿಸಬೇಕು. ಆರೋಪ ಕೈ ಬಿಡುವುದೂ ಸೇರಿ ಯಾವುದೇ ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯದ ಮುಂದೆ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ನವೆಂಬರ್ 13ರಂದು ಹೊರಡಿಸಲಾಗಿದ್ದ ಆದೇಶದಲ್ಲಿ ಸ್ಪಷ್ಟಪಡಿಸಿದ್ದ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತ್ತು.

Tags

POCSO caseBS Yediyurappacourt summons
share
ವಾರ್ತಾಭಾರತಿ
ವಾರ್ತಾಭಾರತಿ
Next Story
X