Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್...

ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ11 Sept 2024 2:06 PM IST
share
ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ

ಬೆಂಗಳೂರು, ಸೆ.11: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿಂದು ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಸಮರ್ಪಿಸಿದ ಬಳಿಕ ಮಾತನಾಡಿದ ಅವರು, ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಮತ್ತು ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ ಇಲಾಖೆ ನಿಂತಿದೆ ಎಂದರು.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಹುತಾತ್ಮರ ಕುಟುಂಬಕ್ಕೆ ಪರಿಹಾರ ನೀಡುವ ಘೋಷಣೆ ಮಾಡಿದರು, 30 ಲಕ್ಷ ರೂ. ಇದ್ದ ಪರಿಹಾರದ ಮೊತ್ತವನ್ನು ಈಗ 50 ಲಕ್ಷ ರೂ.ಗೆ ಹೆಚ್ಚಿಸುವ ಕಾರ್ಯವನ್ನೂ ಅವರೇ ಮಾಡಿದ್ದಾರೆ ಎಂದರು.

ನಮ್ಮ ಸರ್ಕಾರ ಅರಣ್ಯದಲ್ಲಿ ಜೀವದ ಹಂಗು ತೊರೆದು ಆನೆ ಕಾರ್ಯಪಡೆ, ಕಳ್ಳಬೇಟಿ ನಿಗ್ರಹ ಶಿಬಿರ ಮತ್ತು ಇತರ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರಿಗೂ ಮಾಸಿಕ 2 ಸಾವಿರ ರೂ. ಕಷ್ಟ ಕಾರ್ಯ ಭತ್ತೆ ನೀಡುವ ಘೋಷಣೆ ಮಾಡಿದ್ದು, ಇದನ್ನು ಅನುಷ್ಠಾನ ಮಾಡಲಾಗಿದೆ ಎಂದು ತಿಳಿಸಿದರು.

ಕಳೆದ ೧6 ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜೊತೆಗೆ ಬೆಂಗಳೂರು, ಕೋಲಾರ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ ಬೆಲೆ ಬಾಳುವ 2500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆದಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

2015ಕ್ಕೆ ಮೊದಲು ಅಂದರೆ ರಾಜ್ಯ ಸರ್ಕಾರದ ನಡವಳಿಗೆ ಮೊದಲು ಪಟ್ಟಾ ಜಮೀನು ಮತ್ತು ಅರಣ್ಯ ಭೂಮಿ ಒತ್ತುವರಿ ಸೇರಿ 3 ಎಕರೆ ಮೀರದ ಪ್ರಕರಣಗಳಲ್ಲಿ ಮತ್ತು ಅರಣ್ಯ ಹಕ್ಕು ಕಾಯ್ದೆಯ ಅರ್ಜಿ ವಿಲೇವಾರಿ ಆಗದ ಪ್ರಕರಣಗಳ ಹೊರತಾಗಿ ದೊಡ್ಡ ಅರಣ್ಯ ಒತ್ತುವರಿ ತೆರವು ಮಾಡಿಸಲು ಸ್ಪಷ್ಟ ಆದೇಶ ನೀಡಲಾಗಿದೆ. ಇದು ಸಂವಿಧಾನದ 41 (ಎ) ಮತ್ತು 51 (ಎ) ಆಶಯಗಳಿಗೆ ಅನುಗುಣವಾಗಿದೆ ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ: ಮಾಸಾಂತ್ಯದೊಳಗೆ ರಾಜ್ಯದ ಅಭಿಪ್ರಾಯ ಸಲ್ಲಿಕೆ

ಪಶ್ಚಿಮಘಟ್ಟ ಹಲವು ನದಿಗಳ ಮೂಲವಷ್ಟೇ ಅಲ್ಲದೆ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಇದೇ 19ರಂದು ಪಶ್ಚಿಮಘಟ್ಟ ವ್ಯಾಪ್ತಿಯ ಬಾಧ್ಯಸ್ಥರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ, ನಂತರ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ನಂತರ ಸಚಿವ ಸಂಪುಟದ ಅನುಮೋದನೆ ಪಡೆದು, ಪಶ್ವಿಮಘಟ್ಟದ ಜೀವವೈವಿಧ್ಯ, ಜನರ ಜೀವನೋಪಾಯ ಎರಡೂ ಇರುವ ರೀತಿಯಲ್ಲಿ ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದ ನಿಲುವು ತಿಳಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಕಾರ್ಯಪಡೆ ಮುಖ್ಯಸ್ಥರಾದ ಬ್ರಿಜೇಶ್ ದೀಕ್ಷಿತ್ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X