ಬೆಂಗಳೂರಿನಲ್ಲಿ ಪೋಲೆಂಡ್ ಪ್ರಧಾನಿ–ಸಿಎಂ ಡಿಕೆಶಿ ಭೇಟಿ; ದ್ವಿಪಕ್ಷೀಯ ಮಾತುಕತೆ

ಬೆಂಗಳೂರು: ಸಿಎಂ ಡಿ.ಕೆ. ಶಿವಕುಮಾರ್ ಅವರು ಪೋಲೆಂಡ್ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರನ್ನು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಪೋಲೆಂಡ್ ನ ವಿತ್ತ ಸಚಿವ ಆಂಡ್ರೇಜ್ ಡೊಮ್ಯಾನ್ಸ್ಕಿ, ಪೋಲೆಂಡ್ ಸರ್ಕಾರದ ಹಿರಿಯ ಅಧಿಕಾರಿಗಳು, ಕರ್ನಾಟಕದ ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್, ಐ ಟಿ, ಬಿಟಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Next Story




