‘ಚಳಿಗಾಲದ ಅಧಿವೇಶನ’ ಸಿಎಂ ಸಭೆಗೆ ಬರುವುದು ಅಸಾಧ್ಯ: ಪ್ರಹ್ಲಾದ್ ಜೋಶಿ

ಹೊಸದಿಲ್ಲಿ : ಸಂಸತ್ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಬುಧವಾರ ಈ ಸಂಬಂಧ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ಅವರು, ಸಭೆ ನಿಗದಿಪಡಿಸುವ ಮೊದಲೇ ಚರ್ಚಿಸಿ ದಿನಾಂಕ ನಿಗದಿಪಡಿಸಿದ್ದಿದ್ದರೆ ಅನುಕೂಲವಾಗುತ್ತಿತ್ತು. ರಾಜ್ಯದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಲೆಂದು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.8ರಂದು ರಾಜ್ಯ ಪ್ರತಿನಿಧಿಸುವ ಸಂಸದರ ಸಭೆ ಕರೆದಿದ್ದರು. ಆದರೆ, ಈ ಬಗ್ಗೆ ಮೊದಲೇ ಸಂಸದರೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಿರಲಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಮೊದಲೇ ಚರ್ಚಿಸಬೇಕಿತ್ತು: ಸಿಎಂ ಮೊದಲೇ ಚರ್ಚಿಸಿ ದಿನಾಂಕ ನಿಗದಿಪಡಿಸಿದ್ದರೆ ಅನುಕೂಲ ಆಗುತ್ತಿತ್ತು. ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಅವರೂ ಸಭೆಗೆ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮತ್ತೊಮ್ಮೆ ದಿನಾಂಕ ನಿಗದಿಪಡಿಸಬೇಕು ಎಂದು ಸಲಹೆ ನೀಡಿದ್ದಾರೆ.





