Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. The Wire ಸಂವಾದದಲ್ಲಿ ಈ ಬಾರಿ ಪ್ರಕಾಶ್...

The Wire ಸಂವಾದದಲ್ಲಿ ಈ ಬಾರಿ ಪ್ರಕಾಶ್ ರಾಜ್ ಮುಖ್ಯ ಅತಿಥಿ

ಕಾರ್ಯಕ್ರಮದ ಟಿಕೆಟ್ ಖರೀದಿಸಿ ದಿ ವೈರ್ ಅನ್ನು ಬೆಂಬಲಿಸಿ

ವಾರ್ತಾಭಾರತಿವಾರ್ತಾಭಾರತಿ1 Aug 2023 4:22 PM IST
share
The Wire ಸಂವಾದದಲ್ಲಿ ಈ ಬಾರಿ ಪ್ರಕಾಶ್ ರಾಜ್ ಮುಖ್ಯ ಅತಿಥಿ

ಬೆಂಗಳೂರು: ಖ್ಯಾತ ಆನ್‌ಲೈನ್‌ ಸುದ್ದಿ ತಾಣ The Wire ಆಯೋಜಿಸುವ “ದಿ ವೈರ್‌ ಡೈಲಾಗ್ಸ್”‌ ಆಗಸ್ಟ್‌ 6, ಭಾನುವಾರದಂದು ಬೆಂಗಳೂರಿನಲ್ಲಿ ನಡೆಯಲಿದೆ. ಈ ಬಾರಿ ಖ್ಯಾತ ನಟ ಮತ್ತು ಹೋರಾಟಗಾರ ಪ್ರಕಾಶ್‌ ರಾಜ್‌ ಅವರು ಈ ಕಾರ್ಯಕ್ರಮದಲ್ಲಿ ದಿ ವೈರ್‌ ಸಂಪಾದಕಿ ಸೀಮಾ ಚಿಶ್ತಿ ಅವರೊಂದಿಗೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮವು ಬೆಂಗಳೂರಿನ ಸೈಂಟ್‌ ಜಾನ್ಸ್‌ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಟಿಕೆಟ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ಬಾರಿಯ “ದಿ ವೈರ್‌ ಡೈಲಾಗ್ಸ್”‌ ನ ಮುಖ್ಯ ವಿಷಯ ಭಾರತದ ಸಂವಿಧಾನದಲ್ಲಿ ಅಡಕವಾಗಿರುವ ಮೂಲಭೂತ ತತ್ವಗಳಲ್ಲಿ ಒಂದಾಗಿರುವ ಭ್ರಾತೃತ್ವ ಆಗಿದೆ. ಒಂದು ತತ್ವ, ಮನಃಸ್ಥಿತಿ, ಆಗಿ ಭ್ರಾತೃತ್ವದ ಮಹತ್ವ ಮತ್ತು ಅದು ಹೇಗೆ ವ್ಯಕ್ತಿಗಳ ಘನತೆ ಮತ್ತು ದೇಶದ ಒಗ್ಗಟ್ಟನ್ನು ಬಲಪಡಿಸುತ್ತದೆ ಎಂಬ ಕುರಿತು ಈ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ.

ಭಾರತಕ್ಕೆ ಭ್ರಾತೃತ್ವ ಹಿಂದೆಂದಿಗಿಂತಲೂ ಈಗ ಹೆಚ್ಚು ಹೇಗೆ ಅಗತ್ಯವಿದೆ ಎಂಬ ಕುರಿತು ಐದು ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತರಾಗಿರುವ ಪ್ರಕಾಶ್‌ ರಾಜ್‌ ಅವರು ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ಇದೊಂದು ನೇರಾನೇರ, ನಿರ್ಭೀತಿಯ ಹಾಗೂ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆಯಾಗಲಿದೆ. ಈ ಕಾರ್ಯಕ್ರಮದ ನಂತರ ಪ್ರಕಾಶ್‌ ರಾಜ್‌ ಹಾಗೂ ದಿ ವೈರ್‌ ಸ್ಥಾಪಕ ಸಂಪಾದಕರಾದ ಸಿದ್ಧಾರ್ಥ್‌ ವರದರಾಜನ್‌ ಮತ್ತು ಎಂ ಕೆ ವೇಣು ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಈ ಕಾರ್ಯಕ್ರಮದ ಭಾಗವಾಗಿ ಖ್ಯಾತ ಕಲಾವಿದೆ, ಗಾಯಕಿ ಶಬ್ನಂ ವೀರ್‌ಮಣಿ ಅವರು ಕಬೀರ್‌ ಅವರ ರಚನೆಗಳನ್ನು ಹಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರ ಬಗ್ಗೆ :

ಪ್ರಕಾಶ್‌ ರಾಜ್‌ ಪ್ರತಿಭಾನ್ವಿತ ಹಿರಿಯ ಬಹುಭಾಷಾ ನಟರಾಗಿದ್ದು ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ. ಕಲಾವಿದರಾಗಿರುವ ಹೊರತಾಗಿ ಅವರು ರಾಜಕೀಯದಲ್ಲೂ ಕೈಯ್ಯಾಡಿಸಿ 2019 ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಜನರನ್ನು ಚಿಂತನೆಗೆ ಹಚ್ಚುವ ಅವರ #ಜಸ್ಟ್‌ ಆಸ್ಕಿಂಗ್‌ ಹ್ಯಾಶ್‌ಟ್ಯಾಗ್‌ ಟ್ವೀಟ್‌ಗಳು ಸಾಕಷ್ಟು ಜನಪ್ರಿಯವಾಗಿವೆಯಲ್ಲದೆ ಹಲವಾರು ಪ್ರಮುಖ ವಿಚಾರಗಳನ್ನು ಅಧಿಕಾರಸ್ಥರ ಮುಂದಿಟ್ಟಿದೆ.

ಶಬ್ನಂ ವೀರಮಣಿ ಅವರು ಖ್ಯಾತ ಡಾಕ್ಯುಮೆಂಟರಿ ತಯಾರಕಿಯಾಗಿದ್ದು ಸೃಷ್ಟಿ ಸ್ಕೂಲ್‌ ಆಫ್‌ ಆರ್ಟ್ಸ್‌ ಡಿಸೈನ್‌ ಎಂಡ್‌ ಟೆಕ್ನಾಲಜಿಯ ಭಾಗವಾಗಿದ್ದಾರೆ. ದೃಷ್ಟಿ ಮೀಡಿಯಾ ಆರ್ಟ್ಸ್‌ ಎಂಡ್‌ ಹ್ಯೂಮನ್‌ ರೈಟ್ಸ್‌ ಕಲೆಕ್ಟಿವ್‌ ಸಹ-ಸ್ಥಾಪಕಿಯಾಗಿಯೂ ಅವರು ಖ್ಯಾತಿ ಪಡೆದಿದ್ದಾರೆ. ರಾಜಸ್ಥಾನಿ ಕಬೀರ್‌ ಯಾತ್ರಾದಲ್ಲಿ ಆಕೆ ಕಬೀರ್‌ ಅವರ ಕೃತಿಗಳನ್ನು ಹಾಡಿದ್ದಾರೆ.

ಸೀಮಾ ಚಿಶ್ತಿ ಅವರು ದಿ ವೈರ್‌ ಸಂಪಾದಕಿಯಾಗಿದ್ದು ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗಿದೆ.

ಕಾರ್ಯಕ್ರಮದ ಟಿಕೆಟ್ ಖರೀದಿಸಿ ದಿ ವೈರ್ ಸುದ್ದಿತಾಣವನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X