Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಿಂದ...

ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಿಂದ ತೆಗೆಯಲು ಎಸ್‍ಐಆರ್ ಜಾರಿ : ಪ್ರಶಾಂತ್ ಭೂಷಣ್

ವಾರ್ತಾಭಾರತಿವಾರ್ತಾಭಾರತಿ10 May 2026 9:15 PM IST
share
ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಿಂದ ತೆಗೆಯಲು ಎಸ್‍ಐಆರ್ ಜಾರಿ : ಪ್ರಶಾಂತ್ ಭೂಷಣ್
‘ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಮಸೂದೆ ಹಾಗೂ ಎಸ್‍ಐಆರ್ʼ-ಸಾರ್ವಜನಿಕ ವಿಚಾರ ಸಂಕಿರಣ

ಬೆಂಗಳೂರು, ಮೇ 10 : ಬಿಜೆಪಿ ಸರಕಾರವು ಚುನಾವಣಾ ಆಯೋಗದ ಮೂಲಕ ದೇಶದಲ್ಲಿರುವ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರನ್ನು ಮತದಾರರ ಪಟ್ಟಿಯಿಂದ ಹೊರತೆಗೆಯಲು ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ನಡೆಸುತ್ತಿದೆ ಎಂದು ಸುಪ್ರೀಂ ಕೋರ್ಟ್‍ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ರವಿವಾರ ಇಲ್ಲಿನ ಆಶೀರ್ವಾದ್ ಸೆಂಟರ್‌ ನಲ್ಲಿ ನಡೆದ ‘ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಮಸೂದೆ ಹಾಗೂ ಎಸ್‍ಐಆರ್- ಸಾರ್ವಜನಿಕ ವಿಚಾರ ಸಂಕಿರಣ’ದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಎಸ್‍ಐಆರ್ ಎಂಬುದು ಗಂಬೀರ ಸಮಸ್ಯೆಯಾಗುತ್ತಿದ್ದು, ದೇಶದ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲು ಜಾರಿ ಮಾಡಲಾಗಿದೆ ಎಂದರು.

ಎಸ್‍ಐಆರ್ ಮತದಾರರ ಪಟ್ಟಿ ಪರಿಶೀಲನೆಗಾಗಿ ಚುನಾವಣಾ ಆಯೋಗವು ಮನೆಯಿಂದ ಮನೆಗೆ ಎಣಿಕೆ(ಎನ್ಯುಮರೇಶನ್) ಫಾರ್ಮ್‍ಗಳನ್ನು ಭರ್ತಿ ಮಾಡಲು ಕಡ್ಡಾಯಗೊಳಿಸಿದೆ. ಈ ಪ್ರಕ್ರಿಯೆಯು ಪ್ರಸ್ತುತ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ನವೀಕರಿಸುತ್ತದೆ ಎಂದು ಆಯೋಗವು ಹೇಳಿದೆ. ಆದರೆ ದೇಶದ ಮೊದಲ ಮತದಾರರ ಪಟ್ಟಿ ತಯಾರಿಸಿದಾಗ ಈ ಪ್ರಕ್ರಿಯೆ ಇರಲಿಲ್ಲ ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಎಸ್‍ಐಆರ್ ಮೂಲಕ 60 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿದೆ. 27 ಸಾವಿರಕ್ಕೂ ಅಧಿಕ ಮಂದಿಯನ್ನು ಕೇವಲ ಹೆಸರಿನಲ್ಲಿ ಅಕ್ಷರಗಳು ವ್ಯತ್ಯಾಸ ಇದೆ ಎಂದು ತೆಗೆಯಲಾಗಿದೆ. ಇದರಲ್ಲಿ ಶೇ.70 ಮಂದಿ ಮುಸ್ಲಿಮರಾಗಿದ್ದಾರೆ. ಅಲ್ಲದೆ ಬಹುತೇಕ ಮಂದಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತದಾರರೇ ಆಗಿದ್ದಾರೆ. ಹೀಗಾಗಿಯೇ ಪಶ್ಚಿಮ ಬಂಗಾಳದ ಬಹುತೇಕ ವಿಧಾನಸಭೆ ಕ್ಷೇತ್ರಗಳಲ್ಲಿ ಅಲ್ಪ ಮತಗಳ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಅವರು ವಿಶ್ಲೇಷಿಸಿದರು.

ಸುಪ್ರೀಂ ಕೋರ್ಟ್‍ನಲ್ಲಿ ಎಸ್‍ಐಆರ್ ಬಗ್ಗೆ ಪ್ರಶ್ನಿಸಿದಾಗ, ಸರಿಯಾಗಿ ವಿಚಾರಣೆಯನ್ನು ಮಾಡಿಲ್ಲ. ಆದರೆ ಪಶ್ಚಿಮ ಬಂಗಾಳದಲ್ಲಿ ತೆರವುಗೊಳಿಸಿದ 60 ಲಕ್ಷ ಮತದಾರರ ಪೈಕಿ ಕೇವಲ 1,500 ಮತದಾರರನ್ನು ಮರಳಿ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ ಆಯೋಗವು ಪಕ್ಷಪಾತವಾಗಿ ಕೆಲಸ ಮಾಡುತ್ತಿದೆ. ಚುನಾವಣಾ ಆಯೋಗದ ಆಯುಕ್ತರ ನೇಮಕಾತಿ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಿದರೂ, ಪ್ರಯೋಜನವಾಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಹೋರಾಟಗಾರ್ತಿ ಕೆ.ಎಸ್.ವಿಮಲಾ ಮಾತನಾಡಿ, ಎಸ್‍ಐಆರ್ ಜಾರಿ ಮಾಡುವ ಮೂಲಕ ಮುಸ್ಲಿಮರು ಸೇರಿದಂತೆ ಮಹಿಳೆಯರ ಹಕ್ಕುಗಳನ್ನು ಕಸಿಯಲಾಗಿದೆ. ಆದರೆ ಈಗ ಬಿಜೆಪಿ ಸರಕಾರವು ಮಹಿಳಾ ಮೀಸಲಾತಿಯನ್ನು ಪ್ರಸ್ತಾಪಿಸಿದೆ. ಅಲ್ಲದೆ ಕ್ಷೇತ್ರ ಮರುವಿಂಗಡನೆ ಮತ್ತು ಜನಗಣತಿಯ ಬಳಿಕವೇ ಮಹಿಳಾ ಮೀಸಲಾತಿಯನ್ನು ತರಲು ಉದ್ದೇಶಿಸಿರುವುದು ಸರಿಯಾದ ಕ್ರಮವಲ್ಲ ಎಂದರು.

‘ಉತ್ತರ ಭಾರತದ ಜನಸಂಖ್ಯೆಯು ದಕ್ಷಿಣ ಭಾರತದ ಜನಸಂಖ್ಯೆಗಿಂತ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಕ್ಷೇತ್ರ ಮರುವಿಂಗಡನೆ ಮಾಡಿದರೆ, ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಅಲ್ಲದೆ ಕ್ಷೇತ್ರ ಮರುವಿಂಗಡನೆಯ ಸಮಿತಿಯು ಕೇಂದ್ರ ಬಿಜೆಪಿ ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡಲಿದೆ. ಜನಸಂಖ್ಯಾ ಆಧಾರದಲ್ಲಿ ಕ್ಷೇತ್ರ ಮರುವಿಂಗಡನೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ. ಹೀಗಾಗಿ ಅನ್ಯಾಯಕ್ಕೆ ಒಳಗಾಗುವ ದಕ್ಷಿಣ ರಾಜ್ಯಗಳು ಕ್ಷೇತ್ರ ಮರುವಿಂಗಡನೆ ವಿರುದ್ಧ ಬೀದಿ ಹೋರಾಟಗಳನ್ನೆ ಮಾಡಬೇಕು’

-ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟ್‍ನ ಹಿರಿಯ ವಕೀಲ

Tags

Prashant Bhushan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X