ನಾಳೆ ಮೈಸೂರಿನಲ್ಲಿ ‘ವಿವೇಕ ಸ್ಮಾರಕ’ ಉದ್ಘಾಟಿಸಲಿರುವ ಪ್ರಧಾನಿ ಮೋದಿ

Photo :x.com/narendramodi
ಬೆಂಗಳೂರು : ಮೈಸೂರಿನಲ್ಲಿ ಆಗಸ್ಟ್ 1 ರಂದು, ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ‘ವಿವೇಕ ಸ್ಮಾರಕ' ಉದ್ಘಾಟನೆಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಶುಕ್ರವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ನೀಡಿದ್ದ ಐತಿಹಾಸಿಕ ಭೇಟಿಯ ನೆನಪಿನಲ್ಲಿ ‘ವಿವೇಕ ಸ್ಮಾರಕ’ ನಿರ್ಮಾಣಗೊಂಡಿದೆ. ಈ ವಿವೇಕ ಸ್ಮಾರಕವು ತರಗತಿ ಕೊಠಡಿಗಳು, ಗ್ರಂಥಾಲಯ, ಧ್ಯಾನ ಮತ್ತು ಯೋಗ ಮಂದಿರ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.
ನಮ್ಮ ಯುವಜನತೆಯನ್ನು ಸಬಲೀಕರಣಗೊಳಿಸುವಲ್ಲಿ ಹಾಗೂ ಸ್ವಾಮಿ ವಿವೇಕಾನಂದರ ಉದಾತ್ತ ಚಿಂತನೆಗಳನ್ನು ಪ್ರಚುರಪಡಿಸುವಲ್ಲಿ ಇದು ಮುಂಚೂಣಿಯಲ್ಲಿರಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
Next Story






