Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸುಸ್ಥಿರತೆ, ತ್ಯಾಜ್ಯ ನಿರ್ವಹಣೆ ಮತ್ತು...

ಸುಸ್ಥಿರತೆ, ತ್ಯಾಜ್ಯ ನಿರ್ವಹಣೆ ಮತ್ತು ತ್ಯಾಜ್ಯದಿಂದ ಆರ್ಥಿಕ ಮೌಲ್ಯ ಸೃಷ್ಟಿಗೆ ಆದ್ಯತೆ : ಸಚಿವ ಪ್ರಿಯಾಂಕ್ ಖರ್ಗೆ

ಯುನಿವರ್ಸಿಟಿ ಆಫ್ ಯಾರ್ಕ್ ಜೊತೆ ಕರ್ನಾಟಕ ಒಪ್ಪಂದ: ಸಂಶೋಧನೆ, ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ

ವಾರ್ತಾಭಾರತಿವಾರ್ತಾಭಾರತಿ20 Oct 2026 2:12 PM IST
share
ಸುಸ್ಥಿರತೆ, ತ್ಯಾಜ್ಯ ನಿರ್ವಹಣೆ ಮತ್ತು ತ್ಯಾಜ್ಯದಿಂದ ಆರ್ಥಿಕ ಮೌಲ್ಯ ಸೃಷ್ಟಿಗೆ ಆದ್ಯತೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸುಸ್ಥಿರತೆ, ಘನತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯದಿಂದ ಆರ್ಥಿಕ ಮೌಲ್ಯ ಸೃಷ್ಟಿಸುವ ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಯಾರ್ಕ್ ಹಾಗೂ ನಾರ್ತ್ ಯಾರ್ಕ್‌ಷೈರ್ ಪ್ರದೇಶಗಳ ನಡುವಿನ ಸಹಕಾರವನ್ನು ಬಲಪಡಿಸಲು ಮುಂದಿನ ಮೂರು ವರ್ಷಗಳಲ್ಲಿ ಸ್ಪಷ್ಟ ಆದ್ಯತೆಗಳೊಂದಿಗೆ ಜಂಟಿ ನಾವೀನ್ಯತಾ ಕಾರ್ಯಕ್ರಮಗಳು, ಶ್ರೇಷ್ಠತಾ ಕೇಂದ್ರಗಳು (Centres of Excellence) ಮತ್ತು ಪ್ರಾಯೋಗಿಕ ಯೋಜನೆಗಳನ್ನು ರೂಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕದ ಗ್ಲೋಬಲ್ ಇನ್ನೋವೇಶನ್ ಅಲಯನ್ಸ್ ಈ ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯಲು ಸಿದ್ಧ ವೇದಿಕೆಯನ್ನು ಒದಗಿಸಲಿದೆ. ಎರಡೂ ಕಡೆಯ ಆಸಕ್ತಿಯ ಕ್ಷೇತ್ರಗಳಲ್ಲಿ ಉತ್ತಮ ಹೊಂದಾಣಿಕೆಯಿದ್ದು, ಜಂಟಿ ಸಂಶೋಧನೆ, ತಂತ್ರಜ್ಞಾನ ಅಭಿವೃದ್ಧಿ ಹಾಗೂ ಸರ್ಕಾರದಿಂದ ಸರ್ಕಾರಕ್ಕೆ ಸಹಭಾಗಿತ್ವದ ಮೂಲಕ ಸ್ಪಷ್ಟ ಮತ್ತು ಅಳೆಯಬಹುದಾದ ಫಲಿತಾಂಶಗಳನ್ನು ಸಾಧಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.

ಯಾರ್ಕ್ ಮತ್ತು ನಾರ್ತ್ ಯಾರ್ಕ್‌ಷೈರ್ ಮೇಯರ್ ಡೇವಿಡ್ ಸ್ಕೈತ್ ಅವರೊಂದಿಗಿನ ಸಭೆಯ ಬಳಿಕ ಮಾತನಾಡಿದ ಸಚಿವರು, ಸಹಕಾರದ ಉದ್ದೇಶವನ್ನು ಕಾರ್ಯರೂಪಕ್ಕೆ ತರಲು ಎರಡೂ ಕಡೆಯ ಸಂಸ್ಥೆಗಳನ್ನು ಗುರುತಿಸಿ, ಆದ್ಯತೆಯ ಕ್ಷೇತ್ರಗಳಲ್ಲಿ ನಿರ್ದಿಷ್ಟ ಪ್ರಾಯೋಗಿಕ ಯೋಜನೆಗಳನ್ನು ತ್ವರಿತವಾಗಿ ಕೈಗೊಳ್ಳುವ ಅಗತ್ಯವನ್ನು ಒತ್ತಿಹೇಳಿದರು.

ಸಭೆಯ ಬಳಿಕ ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಯುನೈಟೆಡ್ ಕಿಂಗ್‌ಡಮ್‌ನ ಯುನಿವರ್ಸಿಟಿ ಆಫ್ ಯಾರ್ಕ್‌ನೊಂದಿಗೆ ಸಹಕಾರದ ಉದ್ದೇಶ ಪತ್ರಕ್ಕೆ (Letter of Intent–LoI) ಸಹಿ ಹಾಕಿತು.

ಈ ಒಡಂಬಡಿಕೆಯು ನಾವೀನ್ಯತೆ, ಸಂಶೋಧನೆ, ತಂತ್ರಜ್ಞಾನ, ಉದ್ಯಮಶೀಲತೆ, ಸ್ಟಾರ್ಟ್‌ಅಪ್‌ಗಳಿಗೆ ಮಾರುಕಟ್ಟೆ ಪ್ರವೇಶ ಹಾಗೂ ಶೈಕ್ಷಣಿಕ ಮತ್ತು ಕೈಗಾರಿಕಾ ಸಂಸ್ಥೆಗಳ ನಡುವಿನ ಸಹಕಾರವನ್ನು ವಿಸ್ತರಿಸಲು ಚೌಕಟ್ಟನ್ನು ಒದಗಿಸಲಿದೆ. ಜೈವಿಕ ಆರ್ಥಿಕತೆ, ಸ್ವಚ್ಛ ತಂತ್ರಜ್ಞಾನ, ಕೃಷಿ ತಂತ್ರಜ್ಞಾನ ಮತ್ತು ಡಿಜಿಟಲ್ ತಂತ್ರಜ್ಞಾನಗಳನ್ನು ಪ್ರಮುಖ ಸಹಕಾರದ ಕ್ಷೇತ್ರಗಳಾಗಿ ಗುರುತಿಸಲಾಗಿದೆ.

ಯಾರ್ಕ್ ಮತ್ತು ನಾರ್ತ್ ಯಾರ್ಕ್‌ಷೈರ್ ಜೈವಿಕ ಆರ್ಥಿಕತೆ, ಕೈಗಾರಿಕಾ ಜೈವಿಕ ತಂತ್ರಜ್ಞಾನ, ಸುಸ್ಥಿರ ರಸಾಯನಶಾಸ್ತ್ರ, ಕೃಷಿ ನಾವೀನ್ಯತೆ ಹಾಗೂ ಸ್ವಚ್ಛ ತಂತ್ರಜ್ಞಾನಗಳಲ್ಲಿ ಪರಿಣತಿ ಹೊಂದಿವೆ. ಕರ್ನಾಟಕವು ಜೈವಿಕ ತಂತ್ರಜ್ಞಾನ, ಡಿಜಿಟಲ್ ತಂತ್ರಜ್ಞಾನ, ಸ್ಟಾರ್ಟ್‌ಅಪ್‌ಗಳು ಮತ್ತು ಎಂಜಿನಿಯರಿಂಗ್ ಪ್ರತಿಭೆಗಳ ದೃಢ ನೆಲೆಯನ್ನು ಹೊಂದಿದೆ. ಎರಡೂ ಪ್ರದೇಶಗಳ ಸಾಮರ್ಥ್ಯಗಳನ್ನು ಪರಸ್ಪರ ಜೋಡಿಸುವ ಮೂಲಕ ಸಂಶೋಧನಾ ಫಲಿತಾಂಶಗಳನ್ನು ಪ್ರಾಯೋಗಿಕ ಪರಿಹಾರಗಳು ಹಾಗೂ ವಾಣಿಜ್ಯ ಅವಕಾಶಗಳಾಗಿ ಪರಿವರ್ತಿಸಲು ಸಾಧ್ಯವಾಗಲಿದೆ.

ಸುಸ್ಥಿರತೆ, ಜಲ ಸಂಪನ್ಮೂಲ ನಿರ್ವಹಣೆ, ಸಾರಿಗೆ, ಭದ್ರತೆ ಮತ್ತು ಪೊಲೀಸ್ ವ್ಯವಸ್ಥೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿಯೂ ಸಹಕಾರದ ಅವಕಾಶಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಮುಂದಿನ ಹಂತದಲ್ಲಿ ಸೀಮಿತ ಸಂಖ್ಯೆಯ ಆದ್ಯತೆಯ ಕ್ಷೇತ್ರಗಳನ್ನು ಗುರುತಿಸಿ, ಈ ಒಡಂಬಡಿಕೆಯನ್ನು ಜಂಟಿ ಪ್ರಾಯೋಗಿಕ ಯೋಜನೆಗಳು, ಸಂಶೋಧನಾ ಸಹಯೋಗಗಳು, ಸ್ಟಾರ್ಟ್‌ಅಪ್‌ಗಳ ನಡುವಿನ ಸಂಪರ್ಕ ಹಾಗೂ ತಂತ್ರಜ್ಞಾನಗಳ ವಾಣಿಜ್ಯೀಕರಣಕ್ಕೆ ಪೂರಕವಾದ ಕಾರ್ಯಚೌಕಟ್ಟಾಗಿ ರೂಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Tags

Priyank KhargeWaste ManagementSustainability
share
ವಾರ್ತಾಭಾರತಿ
ವಾರ್ತಾಭಾರತಿ
Next Story
X