Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 5,234 ಮಹಿಳಾ ಸದಸ್ಯರನ್ನು...

5,234 ಮಹಿಳಾ ಸದಸ್ಯರನ್ನು ಸಾಕ್ಷರರನ್ನಾಗಿಸುವ ಸಂಕಲ್ಪ: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ31 Aug 2024 8:49 PM IST
share
5,234 ಮಹಿಳಾ ಸದಸ್ಯರನ್ನು ಸಾಕ್ಷರರನ್ನಾಗಿಸುವ ಸಂಕಲ್ಪ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯಿತಿಯ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥರನ್ನಾಗಿಸುವ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ ಸೆ.1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ 94,775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 9,357 ಅನಕ್ಷರಸ್ಥರಿದ್ದಾರೆ. ಈ ಪೈಕಿ 7,277 ಮಂದಿ ಮಹಿಳೆಯರಿದ್ದಾರೆ. ಕಳೆದ ವರ್ಷ 2,403 ಮಹಿಳೆಯರು ಸೇರಿದಂತೆ 3,011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ ಎಂದು ಅವರು ಹೇಳಿದ್ದಾರೆ,

ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5,234 ಮಂದಿ ಮಹಿಳಾ ಹಾಗೂ 1,112 ಪುರುಷ ಅನಕ್ಷರಸ್ಥ ಪಂಚಾಯಿತಿ ಸದಸ್ಯರು ಅಕ್ಷರ ಕಲಿಯಲಿದ್ದಾರೆ. ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಸಭಾ ನೋಟಿಸ್, ನಡಾವಳಿ, ಮಾರ್ಗಸೂಚಿಗಳನ್ನು ಸ್ವತಃ ಓದಿ ಅರ್ಥಮಾಡಿಕೊಳ್ಳುವಂತೆ ಸಜ್ಜುಗೊಳಿಸುವುದು, ಸ್ಥಳೀಯ ಆಡಳಿತದ ನೀತಿ ನಿರೂಪಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಗ್ರಾಮ ಪಂಚಾಯಿತಿ ಸಭೆಗಳು, ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಆಶಯವಾಗಿದೆ ಎಂದು ಅವರು ಹೇಳಿದ್ದಾರೆ.

ಸೆ.1ರಿಂದ ಅ.20ರವರೆಗೆ ರಾಜ್ಯದ 21 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ, ಪ್ರತಿದಿನ ಎರಡು ಗಂಟೆಗಳಂತೆ 50 ದಿನಗಳಲ್ಲಿ 100 ಗಂಟೆಗಳ ಕಲಿಕೆಯನ್ನು ಪೂರ್ಣಗೊಳಿಸಲಾಗುವುದು, ಕಲಿಯುವವರಿಗೆ ಲೇಖನ ಸಾಮಗ್ರಿ ಹಾಗೂ ಓದುವ ಪುಸ್ತಕಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತದೆ ಹಾಗೂ ಬೋಧಕರಿಗೆ ಗೌರವಧನ ಹಾಗೂ ಶಿಕ್ಷಣಾರ್ಥಿಗಳಿಗೆ ಗೌರವಧನದೊಂದಿಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X