Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ ʼನವೋದ್ಯಮ ನೀತಿ 2025-30ʼ...

ರಾಜ್ಯದ ʼನವೋದ್ಯಮ ನೀತಿ 2025-30ʼ ಅನಾವರಣ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ17 Jan 2026 7:48 PM IST
share
ರಾಜ್ಯದ ʼನವೋದ್ಯಮ ನೀತಿ 2025-30ʼ ಅನಾವರಣ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಮುಂದಿನ ಐದು ವರ್ಷಗಳಲ್ಲಿ ಉದ್ಯಮಶೀಲತೆಗೆ ಇನ್ನಷ್ಟು ಉತ್ತೇಜನ ನೀಡಿ ಕರ್ನಾಟಕವನ್ನು ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ‘ನವೋದ್ಯಮ ನೀತಿ 2025-2030ನ್ನು ರಾಜ್ಯ ಸರಕಾರವು ಅನಾವರಣಗೊಳಿಸಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ರಾಷ್ಟ್ರೀಯ ‘ನವೋದ್ಯಮ ಮಾಸ’ದ ಭಾಗವಾಗಿ, ರಾಜ್ಯ ಸರಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯ ಆಶ್ರಯದಲ್ಲಿ ನಡೆದ ನವೋದ್ಯಮಗಳಿಗೆ ನೆರವಾಗುವ ‘ಐಡಿಯಾ 2 ಪಿಒಸಿ ಎಲೆವೇಟ್ 2025’ ಉಪಕ್ರಮದ 146 ವಿಜೇತರ ಸನ್ಮಾನ ಸಮಾರಂಭದಲ್ಲಿ ಈ ನೀತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಮುಖ್ಯಾಂಶಗಳು: ರಾಜ್ಯದಲ್ಲಿ 25 ಸಾವಿರ ನವೋದ್ಯಮ ಸ್ಥಾಪಿಸುವ ಗುರಿ, ನೀತಿ ಜಾರಿಗೆ 570.67 ಕೋಟಿ ರೂ. ಮೊತ್ತ ನಿಗದಿ, ಮಹಿಳೆ ನೇತೃತ್ವದ ಹಾಗೂ ಗ್ರಾಮೀಣ ನವೋದ್ಯಮಗಳಿಗೆ ಆದ್ಯತೆ, ನವೋದ್ಯಮಗಳ ಎಲ್ಲ ಹಂತಗಳಲ್ಲಿ ಸರಕಾರದ ಬೆಂಬಲದ ಭರವಸೆ, ಮುಂದಿನ ಐದು ವರ್ಷಗಳ ಉದ್ಯಮಶೀಲ ಬೆಳವಣಿಗೆಗೆ ಮಾರ್ಗಸೂಚಿ ಹೊಂದಿರುವ ಈ ನೀತಿಯು, 2030ರ ವೇಳೆಗೆ ಬೆಂಗಳೂರು ಆಚೆಗಿನ ಕ್ಲಸ್ಟರ್‍ಗಳಲ್ಲಿ ಕನಿಷ್ಠ 10 ಸಾವಿರ ನವೋದ್ಯಮಗಳು ಸೇರಿದಂತೆ ರಾಜ್ಯದಾದ್ಯಂತ 25 ಸಾವಿರ ನವೋದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಿದೆ ಎಂದು ಅವರು ಮಾಹಿತಿ ನೀಡಿದರು.

ಈ ನೀತಿ ಜಾರಿಗೊಳಿಸಲು ಇಲಾಖೆಯು 570.67 ಕೋಟಿ ರೂ. ಮೊತ್ತವನ್ನು ಮೀಸಲು ಇರಿಸಿದೆ, ಹಣಕಾಸು, ಪೋಷಣೆ, ಮಾರ್ಗದರ್ಶನ, ಮಾರುಕಟ್ಟೆ ಲಭ್ಯತೆ, ಅಂತರ್‍ರಾಷ್ಟ್ರೀಯ ಸಹಯೋಗ, ಸೇರ್ಪಡೆ, ಸುಸ್ಥಿರತೆ ಮತ್ತು ನಿಯಂತ್ರಣ ಕ್ರಮಗಳಿಗೆ ನೆರವು ಒಳಗೊಂಡಂತೆ ಒಟ್ಟು ಏಳು ಪ್ರಮುಖ ಆಧಾರ ಸ್ತಂಭಗಳನ್ನು ಈ ನೀತಿಯು ಆಧರಿಸಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಮಹಿಳಾ ನೇತೃತ್ವದ ಉದ್ಯಮಗಳು, ತಳಮಟ್ಟದ ನಾವೀನ್ಯಕಾರರು, ಗ್ರಾಮೀಣ ಉದ್ಯಮಿಗಳು ಮತ್ತು ಸಾಮಾಜಿಕವಾಗಿ ಪ್ರಭಾವ ಬೀರುವ ಉದ್ಯಮಗಳನ್ನು ಬೆಂಬಲಿಸುವ ಮೂಲಕ ಎಲ್ಲರ ಒಳಗೊಳ್ಳುವಿಕೆಗೆ ಆದ್ಯತೆ ನೀಡಲಿದೆ, ಸರಕಾರ ಮೊದಲು-ಯೋಜನೆಯಡಿ, ಉತ್ಪನ್ನ ಮತ್ತು ಪರಿಹಾರ ನೀಡುವ ನವೋದ್ಯಮ(ಸ್ಟಾರ್ಟ್‍ಅಪ್)ಗಳಿಗೆ ರಾಜ್ಯ ಸರಕಾರವನ್ನು ತಮ್ಮ ಮೊದಲ ಗ್ರಾಹಕರಾಗಿ ಹೊಂದುವ ವಿಶಿಷ್ಟ ಅವಕಾಶವನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಆರಂಭಿಕ ಪರಿಕಲ್ಪನೆಯಿಂದ ಆರಂಭಿಸಿ ಜಾಗತಿಕ ವಿಸ್ತರಣೆ ಮತ್ತು ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ಷೇರುಪೇಟೆ ಪ್ರವೇಶಿಸುವ ಹಂತದವರೆಗೂ ನವೋದ್ಯಮಗಳಿಗೆ ಬೆಂಬಲ ನೀಡುವ ರೀತಿಯಲ್ಲಿ ಈ ನೀತಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.

ನವೋದ್ಯಮಿಗಳಿಗೆ ಸನ್ಮಾನ:

ಸನ್ಮಾನಕ್ಕೆ ಪಾತ್ರರಾದ ನವೋದ್ಯಮಿಗಳಲ್ಲಿ 103 ಎಲೆವೇಟ್ 2025 ವಿಜೇತರು, 33 ಎಲೆವೇಟ್ ಉನ್ನತಿ ವಿಜೇತರು ಮತ್ತು 10 ಎಲೆವೇಟ್ ಅಲ್ಪಸಂಖ್ಯಾತ ನವೋದ್ಯಮಿಗಳು ಸೇರಿದ್ದಾರೆ. ಅರ್ಹ ನವೋದ್ಯಮಗಳಿಗೆ ಒಟ್ಟು 38.85 ಕೋಟಿ ರೂ. ಮೊತ್ತದ ಅನುದಾನ ವಿತರಿಸಲಾಗಿದೆ. ಎಲೆವೇಟ್ ಕಾರ್ಯಕ್ರಮದಡಿಯಲ್ಲಿ ಗುರುತಿಸಲ್ಪಟ್ಟ ನವೋದ್ಯಮಗಳಿಗೆ 50 ಲಕ್ಷ ರೂ.ವರೆಗೆ ಒಂದು ಬಾರಿಯ ಅನುದಾನ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದರ ಜೊತೆಗೆ, ಉತ್ಪನ್ನ ಅಭಿವೃದ್ಧಿ ಮತ್ತು ದೃಢೀಕರಣಕ್ಕೆ ನೆರವಾಗಲು ನವೋದ್ಯಮಗಳಿಗೆ ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುವ ಸರಕಾರಿ ಬೆಂಬಲಿತ ಕೇಂದ್ರಗಳಲ್ಲಿ ಸಬ್ಸಿಡಿ ದರದಲ್ಲಿ ಮಾರ್ಗದರ್ಶನ ಮತ್ತು ಸೂಕ್ತ ನೆರವು ನೀಡಲಾಗುತ್ತಿದೆ. ಎಲೆವೇಟ್ ಮೂಲಕ, ರಾಜ್ಯದಾದ್ಯಂತದ ನವೋದ್ಯಮಿಗಳು ತಮ್ಮ ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಅನುವು ಮಾಡಿಕೊಡಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಎಲೆವೇಟ್ ಕಾರ್ಯಕ್ರಮದಡಿ ಉದ್ಯಮಶೀಲತೆಯ ಪಯಣದ ವಿವಿಧ ಹಂತಗಳಲ್ಲಿ ಭರವಸೆ ಮೂಡಿಸಿರುವ ನವೋದ್ಯಮಗಳನ್ನು ಗುರುತಿಸಿ ಅಗತ್ಯ ಬೆಂಬಲ ನೀಡಲಾಗುತ್ತಿದೆ. ನವೋದ್ಯಮಗಳು ಸುಸ್ಥಿರ ರೀತಿಯಲ್ಲಿ ಬೆಳೆಯಲು ಅನುವು ಮಾಡಿಕೊಡಲಾಗುತ್ತಿದೆ. ನವೋದ್ಯಮಗಳ ಒಡೆತನದಲ್ಲಿ ಯಾವುದೆ ಪಾಲು ತೆಗೆದುಕೊಳ್ಳದೆ ಹಣಕಾಸಿನ ನೆರವು ನೀಡುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದು ಭರವಸೆಯದಾಯಕ ನವೋದ್ಯಮಗಳ ಬಗ್ಗೆ ರಾಜ್ಯ ಸರ್ಕಾರ ತಳೆದಿರುವ ಪ್ರಗತಿಪರ ಮತ್ತು ಅನುಕೂಲಕರ ಧೋರಣೆಗೆ ನಿದರ್ಶನವಾಗಿದೆ ಎಂದು ಅವರು ತಿಳಿಸಿದರು.

ಮೂರು ಹೊಸ ಉಪಕ್ರಮಗಳ ಘೋಷಣೆ:

ಎಲೆವೇಟ್ 2025 ಕಾರ್ಯಕ್ರಮದಲ್ಲಿ, ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು ರಾಜ್ಯದ ಸ್ಟಾರ್ಟ್‍ಅಪ್ ವ್ಯವಸ್ಥೆ ಬಲಪಡಿಸುವ, ಡೀಪ್‍ಟೆಕ್ ನಾವೀನ್ಯತೆಗೆ ವೇಗ ನೀಡುವ ಮತ್ತು ಬೆಂಗಳೂರಿನ ಆಚೆಗೆ ಉದ್ಯಮಶೀಲತೆ ವಿಸ್ತರಿಸುವ ಗುರಿ ಹೊಂದಿರುವ ಮೂರು ಹೊಸ ಉಪಕ್ರಮಗಳನ್ನು ಕಾರ್ಯಗತಗೊಳಿಸುವುದಾಗಿ ಘೋಷಿಸಲಾಯಿತು.

ನಾವೀನ್ಯತೆ ಆಧಾರಿತ ಕೈಗಾರಿಕಾ ಪರಿವರ್ತನೆಯಲ್ಲಿ ಕರ್ನಾಟಕದ ನಾಯಕತ್ವವನ್ನು ಪುನಃ ದೃಢಪಡಿಸಲು ಎಲೆವೇಟ್ ನೆಕ್ಸ್ಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕಾಗಿ 150 ಕೋಟಿ ರೂ. ನಿಗದಿಪಡಿಸಲಾಗಿದೆ. ಆಯ್ಕೆಯಾದ ಪ್ರತಿಯೊಂದು ಅರ್ಹ ನವೋದ್ಯಮವು 1 ಕೋಟಿ ರೂ. ನೆರವು ಪಡೆಯಲಿದೆ. ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್‌, ಐಒಟಿ, ಬ್ಲಾಕ್‍ಚೇನ್, ಎಆರ್/ವಿಆರ್, ರೋಬೊಟಿಕ್ಸ್, ಡ್ರೋನ್ ಮತ್ತಿತರ ಕ್ಷೇತ್ರಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಸ್ಟಾರ್ಟ್‍ಅಪ್‍ಗಳಿಗೆ ಎಲೆವೇಟ್ ನೆಕ್ಸ್ಟ್ ನೆರವಾಗಲಿದೆ.

ಬೆಂಗಳೂರು ಆಚೆಗೆ ಪ್ರವರ್ಧಮಾನಕ್ಕೆ ಬರುತ್ತಿರುವ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ಕೈಗಾರಿಕಾ ಸಮೂಹಗಳಲ್ಲಿ ನವೋದ್ಯಮಗಳ ಸ್ಥಾಪನೆ ಉತ್ತೇಜಿಸಲು ಆರಂಭಿಕ ಹಂತದ ಹಣಕಾಸು ನೆರವು ಒದಗಿಸುವ ಉದ್ದೇಶಕ್ಕೆ 75 ಕೋಟಿ ರೂ.ಮೊತ್ತದ ನಿಧಿ ಸ್ಥಾಪಿಸುವ ನಿರ್ಧಾರ ಪ್ರಕಟಿಸಲಾಗಿದೆ.

ಸಮಾರಂಭದಲ್ಲಿ ಶಾಸಕ ರಿಝ್ವಾನ್ ಅರ್ಶದ್, ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್., ಕಿಯೊನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್) ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ ಉಪಸ್ಥಿತರಿದ್ದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X