Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, 31...

‘183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, 31 ಗ್ರಾಮಗಳಿಗೆ ಟ್ಯಾಂಕರ್ ನೀರು’; ಕುಡಿಯುವ ನೀರಿನ ಅಭಾವ ಉಂಟಾಗದಂತೆ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ10 March 2026 8:29 PM IST
share
‘183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, 31 ಗ್ರಾಮಗಳಿಗೆ ಟ್ಯಾಂಕರ್ ನೀರು’; ಕುಡಿಯುವ ನೀರಿನ ಅಭಾವ ಉಂಟಾಗದಂತೆ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‍ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ಎಲ್ಲ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಂಗಳವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ನೀರು ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಮೂಲಗಳನ್ನು ಹೆಚ್ಚಿಸಲಾಗುವುದು, ಅನಿವಾರ್ಯ ಸಂದರ್ಭಗಳಲ್ಲಿ ಕೊಳವೆಬಾವಿಗಳನ್ನು ಕೊರೆಯುವುದು ಅತ್ಯಗತ್ಯವೆಂದು ಕಂಡು ಬಂದಲ್ಲಿ, ಸಂಬಂಧಪಟ್ಟ ಭೂವಿಜ್ಞಾನಿಗಳ ವರದಿಯನುಸಾರ ಸೂಕ್ತ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯವು ಮೂಲತಃ ಶುಷ್ಕ ಪ್ರದೇಶವಾಗಿರುವುದರಿಂದ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಂಭವವಿರುತ್ತದೆ. ಈ ಸಮಸ್ಯೆಯನ್ನು ದೈನಂದಿನ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲು ಕ್ರಮವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆದುದರಿಂದ, ಗ್ರಾಮೀಣ ಪ್ರದೇಶದ ಜನರಿಗೆ ನೀರಿನ ಅಭಾವ ಎದುರಾದ್ದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲು ಈಗಾಗಲೆ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಹಂತವಾಗಿ ಎಲ್ಲ ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು, ಪ್ರತಿ ಗ್ರಾಮದಲ್ಲಿ ಕನಿಷ್ಠ 3 ನಳ ನೀರು ಸಂಪರ್ಕಗಳ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೂಡಲೇ ಕೈಗೊಂಡು ಮಾಹಿತಿಗಳನ್ನು ದಾಖಲಿಸಲು ಸೂಚಿಸಲಾಗಿದೆ. ಎಲ್ಲ ಕುಡಿಯುವ ನೀರಿನ ಮೇಲ್ಮಟ್ಟದ ಜಲಸಂಗ್ರಹಾರಗಳನ್ನು ಮಾರ್ಗಸೂಚಿಗಳ ಅನ್ವಯ ಶುಚಿಗೊಳಿಸಲು ಸೂಕ್ತ ಕ್ರಮವಹಿಸುವಂತೆಯೂ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

183 ಗ್ರಾಮಗಳಲ್ಲಿ ನೀರಿನ ಸಮಸ್ಯೆ: ರಾಜ್ಯದಲ್ಲಿ ಈಗಾಗಲೆ 21 ಜಿಲ್ಲೆಗಳ 144 ತಾಲೂಕುಗಳ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುದೆ. ಇವುಗಳ ಪೈಕಿ 31 ಗ್ರಾಮಗಳಿಗೆ 96 ಟ್ಯಾಂಕರ್‍ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಇದೇ ಮಾರ್ಚ್ ನಲ್ಲಿ ಫ್ಲಷಿಂಗ್ ಹಾಗೂ ಆಳಗೊಳಿಸುವ ಮೂಲಕ 1053 ಕೊಳವೆ ಬಾವಿಗಳನ್ನು ದುರಸ್ತಿಗೊಳಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯುವುದು ಅವಶ್ಯಕವೆಂದು ನಿರೀಕ್ಷಿಸಲಾಗಿದ್ದು, ಆದ್ಯತೆಯ ಮೇರೆಗೆ ಕ್ರಮವಹಿಸಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯಗಳ ಬರ ಪರಿಹಾರ ನಿಧಿ ಹಾಗೂ ಇಲಾಖೆಯ ಟಾಸ್ಕ್‌ ಫೋರ್ಸ್ ಅಡಿ ಸಂಯೋಜಿತಗೊಳಿಸಿ ಬಳಸಿಕೊಂಡು ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸಲು ಗ್ರಾಮ ಪಂಚಾಯತಿಗಳು, ತಾಲೂಕು ಪಂಚಾಯತಿಗಳು ಹಾಗೂ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X