Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ...

ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ29 Jun 2026 11:59 PM IST
share
ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರೆಸ್ಸೆಸ್) ಮಾನಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ಕಾಗ್ನೈಜೆನ್ಸ್ ತೆಗೆದುಕೊಂಡಿರುವ (ವಿಚಾರಣೆಗೆ ಪರಿಗಣಿಸಿದ) ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಸಂದೀಪ್ ಪಾಟೀಲ್ ಅವರು ದೂರಿನಲ್ಲಿ ಎರಡನೇ ಆರೋಪಿಯನ್ನಾಗಿಸಲಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕ್ರಿಯೆ ಕೈಬಿಟ್ಟಿದ್ದಾರೆ.

ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 356ರ ಅಡಿ (ಕ್ರಿಮಿನಲ್ ಮಾನಹಾನಿ) ದಂಡನೀಯ ಅಪರಾಧಕ್ಕೆ ಕಾಗ್ನೈಜೆನ್ಸ್ ಪರಿಗಣಿಸಲಾಗಿದೆ. ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕರಣ ಕೈಬಿಡಲಾಗಿದೆ. ಕಚೇರಿಯು ಕ್ರಿಮಿನಲ್ ಪ್ರಕರಣ ದಾಖಲಿಸಿ, ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್‌ಗೆ ಸಮನ್ಸ್ ಜಾರಿಗೊಳಿಸಬೇಕು ಎಂದು ಶನಿವಾರ (ಜೂನ್ 27) ಆದೇಶಿಸಿರುವ ನ್ಯಾಯಾಲಯ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿದೆ.

ಪ್ರಕರಣವೇನು?: ಪ್ರಿಯಾಂಕ್ ಖರ್ಗೆ ಅವರು, 2025ರ ಅಕ್ಟೋಬರ್ 4ರಂದು, ಆರೆಸ್ಸೆಸ್ ನವರು ಸರಕಾರಿ ಜಾಗಗಳು ಮತ್ತು ಶಾಲಾ ಆವರಣದಲ್ಲಿ ಯಾವುದೇ ರೀತಿಯ ಸಮಾರಂಭ ಮತ್ತು ಚಟುವಟಿಕೆ ಮಾಡದಂತೆ ನಿಷೇಧಿಸಬೇಕು. ಅವರು ಜನರಿಗೆ ತಪ್ಪು ಸಂದೇಶ ಕೊಡುತ್ತಿದ್ದು, ದೇಶಕ್ಕೆ ಮಾರಕವಾಗಿದ್ದಾರೆ. ಯುವಕರನ್ನು ತಪ್ಪುದಾರಿಯಲ್ಲಿ ಕರೆದೊಯ್ಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್‌ನಲ್ಲಿ, ಗೌರಿ ಲಂಕೇಶ್, ಪನ್ಸಾರೆ ಹಾಗೂ ಎಂ.ಎಂ. ಕಲಬುರ್ಗಿ ಅವರನ್ನು ಆರೆಸ್ಸೆಸ್‌ನವರು ಹತ್ಯೆ ಮಾಡಿದ್ದಾರೆ. ಅವರೇ ನೇರ ಹೊಣೆಗಾರರಾಗಿದ್ದು, ತಾಲಿಬಾನ್ ಸಂಸ್ಕೃತಿಯವರಾಗಿದ್ದಾರೆ ಎಂದು ಪೋಸ್ಟ್ ಮಾಡಿದ್ದರು.

ಮತ್ತೊಂದೆಡೆ, ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್, ಆರೆಸ್ಸೆಸ್‌ನವರ ಚಡ್ಡಿಯಲ್ಲಿ ತಾಕತ್ತು ಇಲ್ಲ ಎಂದಿರುವ ವೀಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತ ಬೆಂಗಳೂರಿನ ಎ.ತೇಜಸ್ ಎಂಬವರು ಖಾಸಗಿ ದೂರು ಸಲ್ಲಿಸಿ, ಆರೋಪಿಗಳು ಆರೆಸ್ಸೆಸ್ ಮಾನಹಾನಿ ಮಾಡಿದ್ದು, ಈ ಮೂಲಕ ಲಕ್ಷಾಂತರ ಕಾರ್ಯಕರ್ತರ ಭಾವನೆಗಳಿಗೆ ಘಾಸಿಯಾಗಿದೆ. ಆದ್ದರಿಂದ, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X