Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ-ಆರಸ್ಸೆಸ್ ರಾಮನ ಹೆಸರನ್ನು ಕೇವಲ...

ಬಿಜೆಪಿ-ಆರಸ್ಸೆಸ್ ರಾಮನ ಹೆಸರನ್ನು ಕೇವಲ ಅಧಿಕಾರ ಮತ್ತು ಹಣಕ್ಕಾಗಿ ಬಳಸಿಕೊಳ್ಳುತ್ತಿವೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ6 July 2026 11:02 PM IST
share
ಬಿಜೆಪಿ-ಆರಸ್ಸೆಸ್ ರಾಮನ ಹೆಸರನ್ನು ಕೇವಲ ಅಧಿಕಾರ ಮತ್ತು ಹಣಕ್ಕಾಗಿ ಬಳಸಿಕೊಳ್ಳುತ್ತಿವೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನೂತನ ಮಂದಿರದ ಕಾಣಿಕೆ ಡಬ್ಬಿಗಳಲ್ಲಿ ನಡೆದಿದೆ ಎನ್ನಲಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಆರಸ್ಸೆಸ್ ಸಂಘಟನೆಗಳು ರಾಮನ ಹೆಸರನ್ನು ಕೇವಲ ಅಧಿಕಾರ ಮತ್ತು ಹಣಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಸೋಮವಾರ ಈ ಸಂಬಂಧ ಸಾಮಾಜಿಕ ಜಾಲತಾಣವಾದ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ತಮ್ಮ ಸಂಪೂರ್ಣ ರಾಜಕೀಯ ಅಸ್ತಿತ್ವವನ್ನು ರಾಮ ಮಂದಿರದ ಮೇಲೆಯೇ ಕಟ್ಟಿಕೊಂಡಿದ್ದಾರೆ. 1990ರ ದಶಕದಿಂದಲೂ ಆರೆಸ್ಸೆಸ್ ಸಂಘಟನೆಗೆ ರಾಮ ಮಂದಿರದ ಹೆಸರಿನಿಂದಲೇ ಅಸ್ತಿತ್ವದ ನೆಲೆ ಸಿಕ್ಕಿದೆ ಎಂದಿದ್ದಾರೆ.

ಮಂದಿರದಲ್ಲಿ ನಡೆದಿರುವ ಕಾಣಿಕೆ ಕಳ್ಳತನದ (ಚಂದಾ ಚೋರಿ) ಅಪರಾಧವನ್ನು ಮುಚ್ಚಿಹಾಕುವ ಮತ್ತು ರಕ್ಷಿಸುವ ಪ್ರಯತ್ನಗಳು ಎದ್ದುಕಾಣುತ್ತಿವೆ. ಈ ಕಳ್ಳತನದ ಬಗ್ಗೆ ಜನರು ಪ್ರಶ್ನೆ ಮಾಡದಂತೆ ‘ಸಂಯಮ ಕಾಯ್ದುಕೊಳ್ಳಿ’ ಎಂದು ಆರೆಸ್ಸೆಸ್ ಕೇಳುತ್ತಿರುವುದು ಅವರ ನಿಜವಾದ ಮುಖವನ್ನು ಜಗತ್ತಿಗೆ ಪರಿಚಯಿಸಿದೆ ಎಂದು ಖಂಡಿಸಿದ್ದಾರೆ.

ಈಗಾಗಲೇ ಪ್ರಶ್ನಾತೀತ ಹಾಗೂ ಅಲುಗಾಡಿಸಲಾಗದ ಅಧಿಕಾರವನ್ನು ಭದ್ರಪಡಿಸಿಕೊಂಡಿರುವ ಕಾರಣಕ್ಕಾಗಿ, ಜನರು ಈಗ ತಮ್ಮನ್ನು ಯಾವುದೇ ಪ್ರಶ್ನೆ ಮಾಡಬಾರದು ಎಂದು ಆರೆಸ್ಸೆಸ್ ಬಯಸುತ್ತಿದೆ. ಬಿಜೆಪಿ ಮತ್ತು ಆರೆಸ್ಸೆಸ್ ಎರಡೂ ಸಂಘಟನೆಗಳು ರಾಮನ ಹೆಸರಿನಲ್ಲಿ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಅಪಾರವಾಗಿ ಬೆಳೆದಿವೆ. ಕಳ್ಳತನದ ಅಪರಾಧವನ್ನು ರಕ್ಷಿಸುತ್ತಿರುವುದು ಅವರ ಕೇವಲ ಅವಕಾಶವಾದಿತನವನ್ನು ಮಾತ್ರವಲ್ಲ, ಅವರ ಅಧಿಕಾರದ ಹಸಿವು ಮತ್ತು ಕೋಟ್ಯಂತರ ಜನರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿವೆ ಎಂದು ಅವರು ಖಂಡಿಸಿದ್ದಾರೆ.

ಕಳೆದ ಮೂರು ದಶಕಗಳಿಂದ ಜನರು ಏನನ್ನು ಶಂಕಿಸುತ್ತಿದ್ದರೋ ಅದು ಇಂದು ನಿಜವಾಗಿದೆ. ಬಿಜೆಪಿ ಮತ್ತು ಆರೆಸ್ಸೆಸ್‍ಗೆ ರಾಮ ಮಂದಿರ ಎಂಬುದು ಎಂದಿಗೂ ಶ್ರದ್ಧೆ ಅಥವಾ ಭಕ್ತಿಯ ವಿಷಯವಾಗಿರಲಿಲ್ಲ, ಬದಲಿಗೆ ಅದು ಕೇವಲ ಅಧಿಕಾರ ಮತ್ತು ಹಣ ಗಳಿಸುವ ಯಂತ್ರವಾಗಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.



Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X