Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಮಸ್ಯೆಗಳ ಪರಿಹಾರಕ್ಕಾಗಿ ಎಐ ಅನ್ನು...

ಸಮಸ್ಯೆಗಳ ಪರಿಹಾರಕ್ಕಾಗಿ ಎಐ ಅನ್ನು ಜವಾಬ್ದಾರಿಯಿಂದ ಬಳವುದು ಮುಖ್ಯ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ5 Aug 2026 9:59 PM IST
share
ಸಮಸ್ಯೆಗಳ ಪರಿಹಾರಕ್ಕಾಗಿ ಎಐ ಅನ್ನು ಜವಾಬ್ದಾರಿಯಿಂದ ಬಳವುದು ಮುಖ್ಯ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕೃತಕ ಬುದ್ಧಿಮತ್ತೆ(ಎಐ) ಸಮಸ್ಯೆಗಳನ್ನು ಪರಿಹರಿಸಬಹುದೇ ಎಂಬುದಕ್ಕಿಂತ, ಸಮಾಜದ ಸಮಸ್ಯೆಗಳ ಪರಿಹಾರಕ್ಕಾಗಿ ನಾವು ಎಐ ಅನ್ನು ಎಷ್ಟು ಜವಾಬ್ದಾರಿಯಿಂದ ಬಳಸುತ್ತೇವೆ ಎಂಬುದೇ ಮುಖ್ಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬುಧವಾರ ಇಲ್ಲಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ವೋಲ್ವರ್‌ ಹ್ಯಾಂಪ್ಟನ್–ಬೆಂಗಳೂರು ಸೆಂಟರ್ ಫಾರ್ ರಿಸರ್ಚ್ ಅಂಡ್ ಇನೋವೇಷನ್ ವತಿಯಿಂದ ಆಯೋಜಿಸಿದ್ದ ‘ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೃತಕ ಬುದ್ಧಿಮತ್ತೆಯ ಪರಿಣಾಮಕಾರಿ ಬಳಕೆ’ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಐ ಯಾವುದೇ ರಕ್ಷಕನಲ್ಲ. ಅದಕ್ಕೆ ಆತ್ಮಸಾಕ್ಷಿ, ಧೈರ್ಯ ಅಥವಾ ಕರುಣೆ ಇಲ್ಲ. ಆದರೆ ಆತ್ಮಸಾಕ್ಷಿ, ಧೈರ್ಯ ಮತ್ತು ಕರುಣೆ ಹೊಂದಿರುವ ಮನುಷ್ಯನ ಕೈಯಲ್ಲಿ ಅದು ಅತ್ಯಂತ ಶಕ್ತಿಯುತ ಸಾಧನವಾಗುತ್ತದೆ. ಹೀಗಾಗಿ ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೃತಕ ಬುದ್ಧಿಮತ್ತೆ ಶಕ್ತಿವರ್ಧಕವಾಗಿ ಕಾರ್ಯನಿರ್ವಹಿಸಬೇಕು. ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತವಾಗಿ ಬಳಸುವ ಮೂಲಕ ಸಮಾಜಮುಖಿ ಅಭಿವೃದ್ಧಿಗೆ ವೇಗ ನೀಡಬೇಕು. ಮುಂದಿನ ತಲೆಮಾರಿನ ನವೋದ್ಯಮಿಗಳನ್ನು ರೂಪಿಸಬೇಕು ಎಂದು ಅವರು ಕರೆ ನೀಡಿದರು.

ಬಡತನ ನಿರ್ಮೂಲನೆ, ಉತ್ತಮ ಆರೋಗ್ಯ ಸೇವೆ, ಗುಣಮಟ್ಟದ ಶಿಕ್ಷಣ, ಅಸಮಾನತೆ ನಿವಾರಣೆ ಹಾಗೂ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಇನ್ನೂ ಸಾಕಷ್ಟು ಅಂತರವಿದೆ. ಈ ಅಂತರವನ್ನು ಕಡಿಮೆ ಮಾಡುವಲ್ಲಿ ಕೃತಕ ಬುದ್ಧಿಮತ್ತೆ ಅಪೂರ್ವ ಅವಕಾಶವನ್ನು ಒದಗಿಸುತ್ತಿದ್ದು, ಅದನ್ನು ಮಾನವ ಕಲ್ಯಾಣದ ದೃಷ್ಟಿಯಿಂದ ಜವಾಬ್ದಾರಿಯುತವಾಗಿ ಬಳಸಬೇಕಾಗಿದೆ ಎಂದು ಅವರು ಹೇಳಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಯತ್ತ ಸಾಗುವ ಸಂದರ್ಭದಲ್ಲಿ ತಂತ್ರಜ್ಞಾನ ಸದಾ ಮಾನವ ಕೇಂದ್ರಿತವಾಗಿರಬೇಕು. ವೈದ್ಯರಿಗೆ ಜೀವ ಉಳಿಸಲು, ರೈತರಿಗೆ ಉತ್ಪಾದಕತೆ ಹೆಚ್ಚಿಸಲು, ಸರಕಾರಗಳಿಗೆ ನಾಗರಿಕ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನೀಡಲು ಹಾಗೂ ಯುವ ನವೋದ್ಯಮಿಗಳಿಗೆ ಸಮಾಜಮುಖಿ ಪರಿಹಾರಗಳನ್ನು ರೂಪಿಸಲು ಎಐ ನೆರವಾಗಬೇಕು. ಇದೇ ನಮ್ಮ ಭವಿಷ್ಯದ ದಿಕ್ಕಾಗಬೇಕು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ವಿಶ್ವವಿದ್ಯಾಲಯಗಳು ಮೂಲಸೌಕರ್ಯಕ್ಕಿಂತ ಸಂಶೋಧನೆ, ನಾವೀನ್ಯತೆ, ಉದ್ಯಮಶೀಲತೆ ಮತ್ತು ಉದ್ಯೋಗಾರ್ಹತೆಗೆ ಆದ್ಯತೆ ನೀಡುವ ಮೂಲಕ ಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಯುವ ನವೋದ್ಯಮಿಗಳನ್ನು ರೂಪಿಸಬೇಕು. ಶಿಕ್ಷಣ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಎಐ ಬಳಕೆಯಿಂದ ಕಲಿಕೆ ಹಾಗೂ ನಾಗರಿಕ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಬಹುದಾಗಿದ್ದು, ಸರಕಾರಗಳು ಸ್ಟಾರ್ಟ್‍ಅಪ್‍ಗಳು ಮತ್ತು ಸಂಶೋಧಕರಿಗೆ ಮೊದಲ ಗ್ರಾಹಕರಾಗಿ ಬೆಂಬಲ ನೀಡುವ ಮೂಲಕ ಸಮಾಜಮುಖಿ ಎಐ ಪರಿಹಾರಗಳ ಅಭಿವೃದ್ಧಿಗೆ ಉತ್ತೇಜನ ನೀಡಬೇಕು ಎಂದು ಅವರು ತಿಳಿಸಿದರು.

ಇದೇ ವೇಳೆ ಡಾ.ಮನಮೋಹನ್‍ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ರಮೇಶ್ ಬಿ. ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು, ಶಿಕ್ಷಣತಜ್ಞರು ಪಾಲ್ಗೊಂಡಿದ್ದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X