ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಆದೇಶ; ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಬೆಂಗಳೂರು : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಇನ್ನು ಹೊರ ಬಂದಿಲ್ಲ. ಆದೇಶ ಬಂದ ತಕ್ಷಣವೇ ಆದೇಶದಂತೆ ಕ್ರಮ ವಹಿಸಲಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ವರದಿಯಾಗಿದೆ. ಆದರೆ ಪ್ರಕರಣವು ಸೂಕ್ಷ್ಮ ವಿಚಾರವಾಗಿರುವುದರಿಂದ ಆದೇಶ ಬಂದ ನಂತರವೇ ಕ್ರಮ ವಹಿಸಲಾಗುತ್ತದೆ. ಆದೇಶ ಹೊರ ಬಂದರೆ ಅಧಿಕಾರಿಗಳೊಂದಿಗೆ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ಮಾಡಿ ಕ್ರಮ ವಹಿಸಲಾಗುತ್ತದೆ ಎಂದರು.
ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಸುಪ್ರಿಂ ಕೋರ್ಟ್ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಅವರು ತಿಳಿಸಿದರು.
Next Story




