Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಾಗತಿಕ ತಂತ್ರಜ್ಞಾನ ಸಹಭಾಗಿತ್ವಕ್ಕೆ...

ಜಾಗತಿಕ ತಂತ್ರಜ್ಞಾನ ಸಹಭಾಗಿತ್ವಕ್ಕೆ ಕರ್ನಾಟಕದ ಹೊಸ ಹೆಜ್ಜೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ6 Oct 2026 7:58 PM IST
share
ಜಾಗತಿಕ ತಂತ್ರಜ್ಞಾನ ಸಹಭಾಗಿತ್ವಕ್ಕೆ ಕರ್ನಾಟಕದ ಹೊಸ ಹೆಜ್ಜೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಜಾಗತಿಕ ನಾವೀನ್ಯತಾ ಒಕ್ಕೂಟದ(ಜಿಐಎ 2.0) ಎರಡನೆ ಹಂತದ ಉಪಕ್ರಮಗಳ ಮೂಲಕ ಕರ್ನಾಟಕವು ಹೂಡಿಕೆ ಆಕರ್ಷಿಸುವ ರಾಜ್ಯವಷ್ಟೇ ಅಲ್ಲದೆ, ಜಾಗತಿಕ ತಂತ್ರಜ್ಞಾನ, ನಾವೀನ್ಯತೆ ಮತ್ತು ಹೂಡಿಕೆ ಸಹಭಾಗಿತ್ವ ಸೃಷ್ಟಿಸುವ ಪ್ರಮುಖ ಕೇಂದ್ರವಾಗಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಪಾಲುದಾರ ದೇಶಗಳು ಮತ್ತು ಅಂತರರಾಷ್ಟ್ರೀಯ ವಾಣಿಜ್ಯ ನಿಯೋಗಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕವು ಬಂಡವಾಳ ಹೂಡಿಕೆಗೆ ಸೂಕ್ತ ತಾಣವಾಗಿರುವುದರ ಜೊತೆಗೆ, ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಅಭಿವೃದ್ಧಿ, ನವೋದ್ಯಮ ಮತ್ತು ದೀರ್ಘಕಾಲೀನ ಸಹಭಾಗಿತ್ವಕ್ಕೆ ಪ್ರಮುಖ ಕೇಂದ್ರವಾಗಿಯೂ ಹೊರಹೊಮ್ಮುತ್ತಿದೆ ಎಂದರು.

40ಕ್ಕೂ ಹೆಚ್ಚು ದೇಶಗಳ ಜೊತೆಗೆ ಅಧಿಕೃತ ಪಾಲುದಾರಿಕೆ ಹೊಂದಿರುವ ಜಾಗತಿಕ ನಾವೀನ್ಯತಾ ಒಕ್ಕೂಟವು ಈಗ ರಾಜತಾಂತ್ರಿಕ ವೇದಿಕೆ ಮೀರಿ, ಜಾಗತಿಕ ತಂತ್ರಜ್ಞಾನ ಪರಿಸರ ವ್ಯವಸ್ಥೆಗಳನ್ನು ಪರಸ್ಪರ ಸಂಪರ್ಕಿಸುವ ಪ್ರಮುಖ ವೇದಿಕೆಯಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕವು ಬೆಂಗಳೂರಿನ ಸಾಂಪ್ರದಾಯಿಕ ತಂತ್ರಜ್ಞಾನ ಸಾಮಥ್ರ್ಯವನ್ನು ಮೀರಿ ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್, ಕ್ವಾಂಟಂ ತಂತ್ರಜ್ಞಾನ, ಬಯೋಟೆಕ್, ಹವಾಮಾನ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಸೇರಿದಂತೆ ಭವಿಷ್ಯದ ತಲೆಮಾರಿನ ತಂತ್ರಜ್ಞಾನ ಕ್ಷೇತ್ರಗಳಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತಿದೆ. ಜಾಗತಿಕ ಪಾಲುದಾರಿಕೆ ಎಂದರೆ ಕೇವಲ ಹೂಡಿಕೆ ಅಥವಾ ಒಪ್ಪಂದವಲ್ಲ. ಪರಸ್ಪರ ವ್ಯವಸ್ಥೆಗಳ ಜೊತೆಗೆ ಸಂಪರ್ಕ ಬೆಳೆಸಿ, ಜ್ಞಾನ, ತಂತ್ರಜ್ಞಾನ, ಪ್ರತಿಭೆ ಮತ್ತು ಹೊಸ ಅವಕಾಶಗಳನ್ನು ಹಂಚಿಕೊಳ್ಳುವ ದೀರ್ಘಕಾಲಿಕ ಸಹಭಾಗಿತ್ವ ಎಂಬುದು ಜಿಐಎ 2.0ನ ಪ್ರಮುಖ ಆಶಯವಾಗಿದೆ ಎಂದು ಅವರು ಹೇಳಿದರು.

ಸದ್ಯಕ್ಕೆ ಜಾಗತಿಕ ಸ್ಪರ್ಧಾತ್ಮಕತೆಯ ಸ್ವರೂಪ ಬದಲಾಗಿದ್ದು, ಯಾವುದೇ ರಾಜ್ಯ, ದೇಶ ಹಾಗೂ ನಾವೀನ್ಯತೆಯು ಏಕಾಂಗಿಯಾಗಿ ಭವಿಷ್ಯವನ್ನು ರೂಪಿಸಲು ಸಾಧ್ಯವಿಲ್ಲ. ಕೃತಕ ಬುದ್ಧಿಮತ್ತೆ, ಕ್ವಾಂಟಂ ತಂತ್ರಜ್ಞಾನಕ್ಕೆ ಗಡಿಯ ಮಿತಿಗಳಿಲ್ಲ. ಸೆಮಿಕಂಡಕ್ಟರ್, ಜೈವಿಕ, ಹವಾಮಾನ ಹಾಗೂ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳನ್ನು ವಿಶ್ವವಿದ್ಯಾಲಯ, ನವೋದ್ಯಮ, ಸಂಶೋಧಕರು, ಹೂಡಿಕೆದಾರರು, ಕಾರ್ಪೊ ರೇಟ್‍ಗಳು ಮತ್ತು ಸರಕಾರಗಳ ಜಾಗತಿಕ ಸಂಪರ್ಕ ಜಾಲದ ಮೂಲಕ ಅಭಿವೃದ್ಧಿಪಡಿಸಲಾಗುವುದು. ಇದಕ್ಕೆ ಜಾಗತಿಕ ನಾವೀನ್ಯತಾ ಒಕ್ಕೂಟದ ಎರಡನೆ ಹಂತವು ಗಮನಾರ್ಹ ಕೊಡುಗೆ ನೀಡಲಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್, ಕೆಐಟಿಎಸ್ ಮತ್ತು ಕಿಯೊನಿಕ್ಸ್‍ನ ವ್ಯವಸ್ಥಾಪಕ ನಿರ್ದೇಶಕ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಇ.ವಿ. ರಮಣ ರೆಡ್ಡಿ, ಬಿಟಿಎಸ್ 2026ರ ಕಾರ್ಯಕ್ರಮ ಸಂಯೋಜಕ ಜಗದೀಶ್ ಪಾಟಣ್ಕರ್ ಉಪಸ್ಥಿತರಿದ್ದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X