Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಸಂಚಾರ ಉದ್ಯಾನವನ...

ಬೆಂಗಳೂರಿನಲ್ಲಿ ಸಂಚಾರ ಉದ್ಯಾನವನ ಸ್ಥಾಪನೆಗೆ ಶಿಲಾನ್ಯಾಸ

ಸಂಚಾರ ಉದ್ಯಾನವನ ರಸ್ತೆ ಸುರಕ್ಷತೆಯ ಜ್ಞಾನ ನೀಡುವ ಮಹತ್ವದ ಕೇಂದ್ರ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ15 Oct 2026 9:37 PM IST
share
ಬೆಂಗಳೂರಿನಲ್ಲಿ ಸಂಚಾರ ಉದ್ಯಾನವನ ಸ್ಥಾಪನೆಗೆ ಶಿಲಾನ್ಯಾಸ

ಬೆಂಗಳೂರು : ನಗರದಲ್ಲಿ ಸ್ಥಾಪನೆಯಾಗಲಿರುವ ಸಂಚಾರ ಉದ್ಯಾನವನವು ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಕುರಿತು ಪ್ರಾಯೋಗಿಕ ಜ್ಞಾನ ನೀಡುವ ಮಹತ್ವದ ಕೇಂದ್ರವಾಗಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗುರುವಾರ ಇಲ್ಲಿನ ಥಣಿಸಂದ್ರದಲ್ಲಿರುವ ಸಂಚಾರ ತರಬೇತಿ ಮತ್ತು ರಸ್ತೆ ಸುರಕ್ಷತಾ ಸಂಸ್ಥೆಯ ಆವರಣದಲ್ಲಿ ನೂತನ ಸಂಚಾರ ಉದ್ಯಾನವನ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈ ಉದ್ಯಾನವನದಲ್ಲಿ ಮಾದರಿ ರಸ್ತೆಗಳು, ರಸ್ತೆ ಕೂಡು ಸ್ಥಳಗಳು, ಸಂಚಾರ ದೀಪಗಳು, ರಸ್ತೆ ಸೂಚನಾ ಫಲಕಗಳು ಮತ್ತು ಪಾದಚಾರಿ ದಾಟುವ ಸ್ಥಳಗಳನ್ನು ನಿರ್ಮಿಸಲಾಗುತ್ತದೆ ಎಂದರು.

ಮಕ್ಕಳು ನೈಜ ರಸ್ತೆ ಪರಿಸ್ಥಿತಿಯನ್ನು ಹೋಲುವ ವಾತಾವರಣದಲ್ಲಿ ಸಂಚಾರ ನಿಯಮಗಳನ್ನು ಕಲಿಯಲು ಸಾಧ್ಯವಾಗಲಿದೆ. ವಿಶೇಷವಾಗಿ ಉತ್ತರ ಬೆಂಗಳೂರಿನ ಶಾಲಾ ಮಕ್ಕಳು ಮತ್ತು ಸಾರ್ವಜನಿಕರಿಗೆ ಈ ಸೌಲಭ್ಯ ಪ್ರಯೋಜನಕಾರಿಯಾಗಲಿದೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ರಸ್ತೆ ಸುರಕ್ಷತೆಯ ಅರಿವು ಬೆಳೆಸುವುದು, ಸಂಚಾರ ನಿಯಮಗಳ ಮಹತ್ವವನ್ನು ತಿಳಿಸುವುದು ಮತ್ತು ಸುರಕ್ಷಿತ ರಸ್ತೆ ಬಳಕೆಯ ಅಭ್ಯಾಸಗಳನ್ನು ರೂಪಿಸುವುದು ಇಂತಹ ತರಬೇತಿ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ಸಂಚಾರ ಪೊಲೀಸರ ರಸ್ತೆ ಸುರಕ್ಷತಾ ಮತ್ತು ಸಂಚಾರ ನಿರ್ವಹಣಾ ಉಪಕ್ರಮಗಳಿಗೆ ನೆರವಾಗುವ ಉದ್ದೇಶದಿಂದ ಹೋಂಡಾ ಇಂಡಿಯಾ ಫೌಂಡೇಷನ್ ತನ್ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ(ಸಿಎಸ್‍ಆರ್) ಕಾರ್ಯಕ್ರಮದಡಿ ಒಟ್ಟು 1.66 ಕೋಟಿ ರೂ. ಮೌಲ್ಯದ ನೆರವು ನೀಡುತ್ತಿದೆ. ಇದರಲ್ಲಿ ಸಂಚಾರ ಉದ್ಯಾನವನದ ಸ್ಥಾಪನೆಗೆ 1 ಕೋಟಿ ರೂ. ಹಾಗೂ 20 ಗಸ್ತು ಮೋಟಾರ್ ಸೈಕಲ್‍ಗಳ ರೂಪದಲ್ಲಿ 66 ಲಕ್ಷ ರೂ. ಮೌಲ್ಯದ ನೆರವು ಸೇರಿದೆ ಎಂದು ಅವರು ತಿಳಿಸಿದರು.

ಹೊಸ ಮೋಟಾರ್ ಸೈಕಲ್‍ಗಳಲ್ಲಿ ಸೈರನ್‍ಗಳು, ಸಾರ್ವಜನಿಕ ಪ್ರಕಟಣಾ ವ್ಯವಸ್ಥೆ, ಮಿನುಗುವ ಎಚ್ಚರಿಕೆ ದೀಪಗಳು ಮತ್ತು ಸುರಕ್ಷತಾ ಶಿರಸ್ತ್ರಾಣಗಳ ಸೌಲಭ್ಯಗಳಿವೆ. ಇವು ಸಂಚಾರ ಪೊಲೀಸರ ಗಸ್ತು ಕಾರ್ಯಾಚರಣೆ, ತುರ್ತು ಸಂದರ್ಭಗಳಿಗೆ ತ್ವರಿತವಾಗಿ ಸ್ಪಂದಿಸುವುದು, ಸಂಚಾರ ನಿಯಂತ್ರಣ, ಅಪಘಾತ ಸ್ಥಳಗಳಿಗೆ ತಲುಪುವುದು ಮತ್ತು ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಸಾಧಿಸುವ ಕಾರ್ಯಗಳಿಗೆ ನೆರವಾಗಲಿವೆ. ಸಂಚಾರ ಪೊಲೀಸರಿಗೆ ಅಗತ್ಯವಾದ ಸೌಲಭ್ಯಗಳನ್ನು ಬಲಪಡಿಸುವುದರ ಜೊತೆಗೆ, ಸಾರ್ವಜನಿಕರ ಸಹಭಾಗಿತ್ವದ ಮೂಲಕ ರಸ್ತೆ ಸುರಕ್ಷತೆಯನ್ನು ಉತ್ತೇಜಿಸುವುದು ಇಂತಹ ಸಹಯೋಗಗಳ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಸಂಚಾರ ಪೊಲೀಸರು ರಸ್ತೆ ಸುರಕ್ಷತೆಯ ಕುರಿತು ಜನಜಾಗೃತಿ ಮೂಡಿಸಲು ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಸಂಚಾರ ನಿಯಮಗಳ ಅರಿವು ಮೂಡಿಸುವ ಉದ್ದೇಶದಿಂದ ಜಾರಿಯಲ್ಲಿರುವ ವಿದ್ಯಾರ್ಥಿಗಳ ರಸ್ತೆ ಸುರಕ್ಷತಾ ಸಂಘ ಉಪಕ್ರಮದಡಿ 2026ರಲ್ಲಿಯೇ ಈವರೆಗೆ 2,53,245 ಶಾಲಾ ಮಕ್ಕಳಿಗೆ ತರಬೇತಿ ನೀಡಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಚಾರ ಉದ್ಯಾನವನ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಹೋಂಡಾ ಇಂಡಿಯಾ ಫೌಂಡೇಷನ್ ವತಿಯಿಂದ ಒದಗಿಸಲಾದ 20 ಹೊಸ ಗಸ್ತು ಮೋಟಾರ್ ಸೈಕಲ್‍ಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಸೇವೆಗೆ ಚಾಲನೆ ನೀಡಿದರು. ಹಿರಿಯ ಪೊಲೀಸ್ ಅಧಿಕಾರಿಗಳು, ಹೋಂಡಾ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X