Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾಹಿತ್ಯ ಕ್ಷೇತ್ರದಲ್ಲಿ ಅಲೆಮಾರಿ, ಅರೆ...

ಸಾಹಿತ್ಯ ಕ್ಷೇತ್ರದಲ್ಲಿ ಅಲೆಮಾರಿ, ಅರೆ ಅಲೆಮಾರಿ ಸಾಹಿತಿಗಳ ಪ್ರಮಾಣ ಕಡಿಮೆ : ಪ್ರೊ.ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ28 Jun 2026 9:07 PM IST
share
ಸಾಹಿತ್ಯ ಕ್ಷೇತ್ರದಲ್ಲಿ ಅಲೆಮಾರಿ, ಅರೆ ಅಲೆಮಾರಿ ಸಾಹಿತಿಗಳ ಪ್ರಮಾಣ ಕಡಿಮೆ : ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು : ಸಾಹಿತ್ಯ ಕ್ಷೇತ್ರಕ್ಕೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಸಾಹಿತಿಗಳು ಬಂದಿಲ್ಲ. ಅಪರೂಪಕ್ಕೆ ಒಬ್ಬೊಬ್ಬರು ಮಾತ್ರ ಕಾಣಿಸುತ್ತಾರೆ. ಯಾಕೆಂದರೆ ಅವರಲ್ಲಿ ಉನ್ನತ ಶಿಕ್ಷಣದ ಪ್ರಮಾಣ ಕಡಿಮೆ ಇದೆ ಎಂದು ಹಿರಿಯ ಸಾಹಿತಿ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ರವಿವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಬಹುಮುಖಿ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಅಂತರ್‍ರಾಷ್ಟ್ರೀಯ ಕಾವ್ಯ ಸಮ್ಮಿಲನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದಲಿತ, ಬಂಡಾಯ ಸಾಹಿತ್ಯ ಬಂದ ನಂತರವೂ ಸಹ ಅಲ್ಲಿರುವ ಸಾಹಿತ್ಯವನ್ನು ನಾವು ಒಳಗೊಳ್ಳಲು ಸಾಧ್ಯವಾಗಿಲ್ಲ. ಇತ್ತೀಚಿಗೆ ಬೆಂಗಳೂರಿನ ಕಾನೂನು ವಿವಿ ನಡೆಸಿದ ಸಮೀಕ್ಷೆಯೊಂದರ ಪ್ರಕಾರ ಅಲೆಮಾರಿ, ಅರೆ ಅಲೆಮಾರಿ ಜನಾಂಗದಲ್ಲಿ ಶೇ.25ರಷ್ಟು ಜನರು ಪ್ರಾಥಮಿಕ ಶಿಕ್ಷಣ ಪಡೆಯುತ್ತಾರೆ. ಅದರಲ್ಲಿ ಶೇ.75ರಷ್ಟು ಜನರು ಮಧ್ಯದಲ್ಲೇ ಶಾಲೆ ಬಿಡುತ್ತಾರೆ. ಶೇ.2ರಷ್ಟು ಜನರು ಮಾತ್ರ ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ ಎಂದು ತಿಳಿಸಿದರು.

ಒಬ್ಬ ಕವಿಗೆ ಮನಸ್ಸು ಮುಖ್ಯ. ಆ ಮನಸ್ಸಿನಲ್ಲಿ ಸಮಾಜ ಇರುತ್ತದೆ. ಇದಕ್ಕೆ ಅತ್ಯಂತ ಉತ್ತಮ ಉದಾಹರಣೆ ಎಂದರೆ ಕನ್ನಡ ಸಾಹಿತ್ಯ. ಸ್ಥಳೀಯ, ರಾಷ್ಟ್ರೀಯ, ಅಂತರ್‍ರಾಷ್ಟ್ರೀಯ ಸಂವೇದನೆ ಉಳ್ಳದ್ದು ಕನ್ನಡ ಸಾಹಿತ್ಯ ಎಂದು ಹೇಳಿದರು.

ಒಂದು ಕಾವ್ಯ, ಸಾಹಿತ್ಯ ಎನ್ನುವುದು ಭೂಗೋಳವನ್ನು ಮೀರಿ ಹೋಗುತ್ತದೆ. ಕನ್ನಡಕ್ಕೆ ಒಂದು ಜಾಗತಿಕ ಸಂವೇದನೆ ಇರುವುದರಿಂದ ಜಾಗತಿಕ ಸಮಸ್ಯೆಗಳನ್ನು ಗಮನಿಸಬೇಕು. ಈಗ ಯುದ್ಧದ ಸಮಸ್ಯೆ, ಅಭಿವ್ಯಕ್ತಿ ಸ್ವಾತಂತ್ರ್ಯ, ಅಸಮಾನತೆ, ಲಿಂಗತಾರತಮ್ಯದ ಸಮಸ್ಯೆ ಇದೆ. ಇವು ಕೇವಲ ಭಾರತಕ್ಕೆ ಮಾತ್ರ ಸೀಮಿತ ಅಲ್ಲ. ಇಡೀ ಜಗತ್ತಿನಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿವೆ. ಇಂತಹ ಸಂದರ್ಭದಲ್ಲಿ ನಾವು ಹೇಗೆ ಸ್ಪಂಧಿಸಬಹುದು ಎನ್ನುವುದು ಮುಖ್ಯ ಎಂದರು.

ಜಗತ್ತಿನಲ್ಲಿ ಯುದ್ಧ ನಡೆಯುತ್ತಿದೆ. ಅನೇಕ ನಾಯಕರು ದೇಶ-ವಿದೇಶಗಳನ್ನು ಸುತ್ತುತ್ತಿದ್ದಾರೆ. ಆದರೆ ಅಲ್ಲಿ ಕೇವಲ ವ್ಯಾಪಾರದ ಒಪ್ಪಂದಗಳು ಮಾತ್ರವೇ ಆಗುತ್ತಿವೆ. ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಕೇವಲ ನಿಮಿಷಗಳು ಸಾಕು. ಆದರೆ ಶಾಂತಿ ಒಪ್ಪಂದ ಮಾಡಿಕೊಳ್ಳಲು ತಿಂಗಳು-ವರ್ಷಗಳೇ ಬೇಕು. ಶೈಕ್ಷಣಿಕ ಒಪ್ಪಂದದ ಬಗ್ಗೆ ಮಾತೇ ಆಡುವುದಿಲ್ಲ. ಸಾಂಸ್ಕೃತಿಕ ವಿನಿಮಯದ ಒಪ್ಪಂದ ಆಗುತ್ತವೆಯೋ ಎಂದರೆ, ಸಾಂಸ್ಕೃತಿಕ ಪದದ ಅರ್ಥವೇ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಮರ್ಶಕ ಓ.ಎಲ್.ನಾಗಭೂಷಣ ಸ್ವಾಮಿ, ಕವಿಗಳಾದ ಉದಯನ್ ವಾಜಪೇಯಿ, ಸಯಾತ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಮತ್ತಿತರರು ಉಪಸ್ಥಿತರಿದ್ದರು.

Tags

Prof. Baraguru Ramachandrappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X