Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪುರೋಹಿತರು ದೇಶವನ್ನು ದುರ್ಬಲಗೊಳಿಸಲು...

ಪುರೋಹಿತರು ದೇಶವನ್ನು ದುರ್ಬಲಗೊಳಿಸಲು ಹೊರಟಿದ್ದಾರೆ : ಪ್ರೊ.ಮುಕುಂದರಾಜ್

‘ಭಾರತೀಯ ಸಾಹಿತ್ಯ: ಬಹುತ್ವ ನೆಲೆಗಳು’ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ7 April 2025 9:19 PM IST
share
ಪುರೋಹಿತರು ದೇಶವನ್ನು ದುರ್ಬಲಗೊಳಿಸಲು ಹೊರಟಿದ್ದಾರೆ : ಪ್ರೊ.ಮುಕುಂದರಾಜ್

ಬೆಂಗಳೂರು : ಪುರೋಹಿತರು ದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕೆಂಬ ಉದ್ದೇಶದಿಂದ ದೇವರು, ಧರ್ಮ, ಸಂಪ್ರದಾಯ, ಜಾತಿ, ಮತ, ಕೋಮುವಾದ ಹಿನ್ನಲೆಯಲ್ಲಿ ರಾಜಕೀಯವನ್ನು ಮಾಡುತ್ತಾ, ದೇಶವನ್ನು ದುರ್ಬಲಗೊಳಿಸುವುದಕ್ಕೆ ಹೊರಟಿದ್ದಾರೆ ಎಂದು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ನಗರದ ಸೆಂಟ್ ಜೋಸೆಫ್ ವಿವಿಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹುಯೋಗದಲ್ಲಿ ಆಯೋಜಿಸಿದ್ದ ‘ಭಾರತೀಯ ಸಾಹಿತ್ಯ: ಬಹುತ್ವ ನೆಲೆಗಳು’ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಯಾಣ ಮತ್ತು ಮಹಾಭಾರತ ಮಹಾಕಾವ್ಯಗಳ ಸೂಕ್ಷ್ಮವನ್ನು ನಾವು ಅರ್ಥ ಮಾಡಿಕೊಂಡಿಲ್ಲ. ಈಗಲಾದರೂ ನಮ್ಮ ಸಾಹಿತ್ಯ ಕೃತಿಗಳನ್ನು ಸರಿಯಾದ ನೆಲೆಯಲ್ಲಿ ಅರ್ಥ ಮಾಡಿಕೊಂಡು, ದೇಶದ ಪ್ರಜಾಪ್ರಭುತ್ವ ಸಂವಿಧಾನವನ್ನು ಉಳಿಸುವುದಕ್ಕೆ ಪ್ರಯತ್ನ ಮಾಡಬೇಕು ಎಂದು ಹೇಳಿದರು.

70 ವರ್ಷಗಳಿಂದ ದೇಶದ ಜನ ನಿಧಾನವಾಗಿ ನೆಮ್ಮದಿಯತ್ತ ಬರುತ್ತಿದ್ದರು. ಸ್ವಾತಂತ್ರ್ಯ, ಸಮಾನತೆ, ಸಂವಿಧಾನದಿಂದ ಅಸಂಖ್ಯಾತ ಶೂದ್ರರು, ದಲಿತರು, ಮಹಿಳೆಯರು ವಿದ್ಯೆ, ಉದ್ಯೋಗದಿಂದ ಒಳ್ಳೆಯ ಸ್ಥಾನ ಮಾನಕ್ಕೆ ಬಂದರು. ಆಸ್ತಿ-ಪಾಸ್ತಿ, ಅಂತಸ್ತು-ಐಶ್ವರ್ಯಗಳನ್ನು ಗಳಿಸಿಕೊಂಡು 70 ವರ್ಷಗಳಿಂದೀಚಿಗೆ ಪ್ರಗತಿಯ ಕಡೆಗೆ ಹೋಗುತ್ತಿರುವ ಸಮಯದಲ್ಲಿ, ರಾಮಯಾಣ, ಮಹಾಭಾರತ ಕಾಲದಲ್ಲಿ ಇದ್ದಂತ ಪುರೋಹಿತರು ದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕೆಂಬ ಉದ್ದೇಶದಿಂದ ದೇಶವನ್ನು ದುರ್ಬಲಗೊಳಿಸುತ್ತಿರುವ ಸೂಕ್ಷ್ಮವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮುಕುಂದರಾಜ್ ತಿಳಿಸಿದರು.

ಕನ್ನಡ ಸಾಹಿತ್ಯ, ಭಾರತೀಯ ಸಾಹಿತ್ಯ ಮತ್ತು ಜಗತ್ತಿನ ಸಾಹಿತ್ಯವೇ ಬಹುತ್ವದ ನೆಲೆಯಲ್ಲಿ ಮನುಷ್ಯನ ವಿವೇಕವನ್ನು ಕಟ್ಟಿಕೊಡುತ್ತಾ, ಮಾನವೀಯ ಮೌಲ್ಯಗಳನ್ನು ಬಿತ್ತುತ್ತಾ ಹೋಗುತ್ತದೆ. ಸಾಹಿತ್ಯ ಎಂದಿಗೂ ಮನುಷ್ಯನ ವಿರೋಧಿಯಾಗಿಲ್ಲ. ಸಾವಿರಾರು ವರ್ಷಗಳಿಂದ ಮನುಷ್ಯರ ಪರವಾಗಿ ಮಾತನಾಡಿಕೊಂಡು ಬಂದಿದೆ. ಭಾರತೀಯ ಸಾಹಿತ್ಯದ ರಾಮಾಯಣ ಮತ್ತು ಮಹಾಭಾರತ ದೇಶದ ಎರಡು ಮಹಾಕಾವ್ಯಗಳು. ಇವು ಜಗತ್ತಿನಲ್ಲಿಯೇ ಶ್ರೇಷ್ಠ ಕಾವ್ಯಗಳಾಗಿವೆ. ಅಂತಹ ಕಾವ್ಯಗಳನ್ನುಕೊಟ್ಟಿದ್ದು ಭಾರತ. ಇದನ್ನು ಯಾರೂ ಅಲ್ಲಗೆಳೆಯುವದಕ್ಕೆ ಸಾಧ್ಯವಿಲ್ಲ ಎಂದರು.

ರಾಮಯಣ, ಮಹಾಭಾರತಗಳಲ್ಲಿ ಕವಿಗಳು ತುಂಬಾ ಮಾನವೀಯವಾದ ಸೂಕ್ಷ್ಮಗಳನ್ನು ಅಡಗಿಸಿಟ್ಟಿರುತ್ತಾರೆ. ನಾವು ಅದನ್ನ ಶೋದಿಸಿ ಅರ್ಥೈಸಿಕೊಂಡು, ಬೇರೆಯವರಿಗೂ ಅರ್ಥ ಪಡಿಸುವುದು ಬಹಳ ಮುಖ್ಯ. ಕವಿ ಲಕ್ಷ್ಮೀಶ ‘ಜೈಮಿನಿ ಭಾರತ’ದಲ್ಲಿ ಯಜ್ಞಯಾಗಗಳಿಂದ ಆಗುವ ಆಪತ್ತುಗಳನ್ನು ಬರೆಯುತ್ತಾನೆ. ರಾಮಾಶ್ವಮೇಧ ಉದ್ದೇಶ, ಎಲ್ಲರನ್ನೂ ಗೆಲ್ಲಬೇಕು ಎಂಬುದು. ಎಲ್ಲರನ್ನೂ ಗೆಲ್ಲಬೇಕೆನ್ನುವುದೇ ತಪ್ಪು. ಶ್ರೀರಾಮಚಂದ್ರನ ಆಡಳಿತ ಎಂದರೆ ಶ್ರೇಷ್ಠ ಆಡಳಿತ ಎಂಬುದು ಜನರ ಕಲ್ಪನೆ. ಅಂತಹ ಆಡಳಿತ ವ್ಯವಸ್ಥೆಯಲ್ಲಿ ಪ್ರಜೆಗಳೆಲ್ಲರೂ ನೆಮ್ಮದಿಯಾಗಿ ಇರುತ್ತಾರೆ. ಅದನ್ನೇ ಗಾಂಧೀಜಿ ರಾಮರಾಜ್ಯ ಎಂದು ಹೇಳಿದ್ದು ಎಂದು ಮುಕುಂದರಾಜ್ ನುಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮಾತನಾಡಿ, ಇಂದು ಎಲ್ಲ ಭಾಷೆಗಳು ಸಾಯುತ್ತಿವೆ. 2011ರ ಜನಗಣತಿಯ ಅವಧಿಯಲ್ಲಿ ಅಸ್ತಿತ್ವದಲ್ಲಿದ್ದ ಭಾಷೆಗಳು ಈಗ ಅಸ್ತಿತ್ವದಲ್ಲಿ ಇಲ್ಲವಾಗಿವೆ. ಎಷ್ಟೋ ಭಾಷೆಗಳು ನಶಿಸಿಹೋಗುವ ಕೊನೆಯ ಹಂತದಲ್ಲಿವೆ. ಅಂತಹ ಪರಿಸ್ಥಿತಿ ಕನ್ನಡಕ್ಕೆ ಬರಬಾರದು. ನಾವೆಲ್ಲರೂ ಕನ್ನಡವನ್ನು ಸರಿಯಾದ ರೀತಿಯಲ್ಲಿ ಕಾಪಾಡಬೇಕಾದ ಅವಶ್ಯಕತೆ ಇದೆ ಎಂದು ಕರೆ ನಿಡಿದರು.

ಕಾರ್ಯಕ್ರಮದಲ್ಲಿ ಅನುವಾದಕ ಪ್ರೊ.ಶ್ರೀಧರ್ ಅಘಲಯ, ಸೆಂಟ್ ಜೋಸೆಫ್ ವಿವಿ ಕುಲಪತಿ ರೆ.ಡಾ.ವಿಕ್ಟರ್ ಲೋಬೊ ಎಸ್.ಜೆ., ಸಹ ಕುಲಪತಿ ರೆ.ಡಾ.ರೋನಾಲ್ಡ್ ಮಸ್ಕರೇನಸ್, ಪ್ರಾಧ್ಯಾಪಕರಾದ ಡಾ.ಅರುಲ್ ಮಣಿ, ಡಾ.ಕುಮಾರಸ್ವಾಮಿ, ಡಾ.ಈಶ್ವರಯ್ಯ ಹಂಪಾಪುರ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X