Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಲಿತ ನಾಯಕತ್ವದಲ್ಲಿ ಬಲಿಷ್ಠ ಭಾರತ...

ದಲಿತ ನಾಯಕತ್ವದಲ್ಲಿ ಬಲಿಷ್ಠ ಭಾರತ ಕಟ್ಟಬೇಕು: ಪ್ರೊ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ15 April 2026 12:22 AM IST
share
ದಲಿತ ನಾಯಕತ್ವದಲ್ಲಿ ಬಲಿಷ್ಠ ಭಾರತ ಕಟ್ಟಬೇಕು: ಪ್ರೊ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ಪ್ರಸ್ತುತ ಜನಕೇಂದ್ರಿತವಾದ ಯೋಚನೆಗಳು ಹಿನ್ನಲೆಗೆ ಸರಿಯುತ್ತಿರುವಾಗ ನಾವೆಲ್ಲರೂ ದಲಿತ ನಾಯಕತ್ವದಲ್ಲಿ ಬಲಿಷ್ಠ ಭಾರತವನ್ನು ಕಟ್ಟಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆ ಮುಂಭಾಗ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದದ ವತಿಯಿಮದ ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ‘ಅಂಬೇಡ್ಕರ್ ವಾದ ಸಂಚಿಕೆ ಬಿಡುಗಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಕೊಟ್ಟ ರಾಷ್ಟ್ರೀಯವಾದ ಜನಕೇಂದ್ರಿತ ರಾಷ್ಟ್ರೀಯವಾದ. ಅದಕ್ಕಿಂತ ಹಿಂದೆ ಇದ್ದಂತ ರಾಷ್ಟ್ರೀಯವಾದಗಳೆಲ್ಲವೂ ಮತಕೇಂದ್ರಿತ ರಾಷ್ಟ್ರೀಯವಾದಗಳು. ಈಗಲೂ ಅನೇಕರು ಮತಕೇಂದ್ರಿತವಾದ ಭಾರತವನ್ನು ಕಟ್ಟಲು ಹೊರಡುತ್ತಿದ್ದಾರೆ ಎಂದರು.

ಅಂಬೇಡ್ಕರ್ ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತವಾಗುತ್ತಿದ್ದಾರೆ. ಯಾಕೆಂದರೆ ಒಂದೆಡೆಯಲ್ಲಿ ಭಾರತದ ಸಂವಿಧಾನವನ್ನು ಅಪಮೌಲ್ಯಗೊಳಿಸುವ ಕೆಲಸ ನಡೆಯುತ್ತಿದೆ. ಸಂವಿಧಾನವನ್ನು ಇಟ್ಟುಕೊಂಡು ಸಂವಿಧಾನ ವಿರುದ್ಧದ ಚಳವಳಿಗಳು, ಕೆಲಸಗಳು ನಡೆಯುತ್ತಿವೆ. ಸಂವಿಧಾನದಲ್ಲಿ ಹೇಳಿದ ಅನುಚ್ಛೇದ 14, ಅನುಚ್ಛೇದ 15, ಅನುಚ್ಛೇದ 16ರಲ್ಲಿರುವ ಆಶಯಗಳನ್ನು ಈವತ್ತಿನ ಸಮಾಜ ಅಂಗೀರಿಸುತ್ತಿಲ್ಲ ಎಂದು ಪುರುಷೋತ್ತಮ ಬಿಳಿಮಲೆ ಬೇಸರ ವ್ಯಕ್ತಪಡಿಸಿದರು.

ಮುಸ್ಲಿಮ್‍ರು ಇಂತಹ ಕಡೆ ಅಂಗಡಿ ಇಡಬೇಕು, ಇಡಬಾರದು ಎನ್ನುವುದು ನಿರ್ಣಯ ಆಗುತ್ತಿದೆ. ಕಾನೂನುಗಳು ಇದ್ದವರಿಗೆ ಒಂದು ಇಲ್ಲದಿರುವರಿಗೆ ಒಂದು, ಹಿಂದುಗಳಿಗೊಂದು, ಮುಸಲ್ಮಾನರಿಗೊಂದು ಹೀಗಾಗಿದೆ. ಜನಗಳಿಗೆ ನ್ಯಾಯಾಂಗದ ಮೇಲೆ ನಂಬಿಕೆ ನಿಧಾನವಾಗಿ ಕಡಿಮೆ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಹೇಳಿದ ಚಿಂತನೆಗಳು ಗಟ್ಟಿಯಾಗಿ ಹಿಡಿದುಕೊಂಡು, ಅದನ್ನು ವರ್ತಮಾನಕ್ಕೆ ಒಗ್ಗಿಸುವ ಮತ್ತು ನಮ್ಮ ಕಾಲದ ಅಗತ್ಯಗಳಿಗೆ ಅನುಗುಣವಾಗಿ ವ್ಯಾಖ್ಯಾನಿಸಿ ಜನಗಳ ಹತ್ತಿರ ತೆಗೆದುಕೊಂಡು ಹೋಗಬೇಕಾದ ಕೆಲಸ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಈ ಕೆಲಸವನ್ನು ಮಾಡುವುದಕ್ಕೆ ನಮಗೆ ದೊಡ್ಡಶಕ್ತಿಯಾಗಿ ಹಿನ್ನಲೆಯಲ್ಲಿರುವುದು ಅಂಬೇಡ್ಕರ್ ಅವರು. ನಮ್ಮನ್ನು ಕೈ ಹಿಡಿದು ಮುನ್ನಡಿಸುವ ಶಕ್ತಿ ಇರುವುದು ನಿಜವಾದ ಅರ್ಥದಲ್ಲಿ ಸಂವಿಧಾನ. ಇದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ದಲಿತರು ಚಾರಿತ್ರಕವಾಗಿ ದೇಶವನ್ನು ನಡೆಸುವ ಹಕ್ಕಿದೆ. ಯಾಕೆಂದರೆ ಅತ್ಯಂತ ಶೋಷಿತರು. ಅವರು ಜವಾಬ್ದಾರಿಯಿಂದ ವರ್ತಿಸಬೇಕು. ಅದನ್ನು ಬೇಕಾಬಿಟ್ಟಿಯಾಗಿ ನಾಯಕತ್ವ ಸಿಕ್ಕಿದೆ ಎಂದು ಬೇರೆ ನಾಯಕತ್ವಗಳ ಜೊತೆಗೆ ಹೋಲಿಸಿಕೊಂಡು ಮಾಡುವ ಪ್ರಶ್ನೆಯಿಲ್ಲ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಸುಬ್ಬು ಹೊಲೆಯಾರ್, ಲೇಖಕ ಡಾ.ನಟರಾಜ್ ಹುಳಿಯಾರ್, ದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಶಿಕ್ಷಣ ತಜ್ಞ ಶ್ರೀಪಾದ್ ಭಟ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Prof. Purushottama Bilimale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X