Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಿಗೆ...

ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳ ಬೆಂಬಲ ಬೇಡ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Aug 2026 9:54 PM IST
share
ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳ ಬೆಂಬಲ ಬೇಡ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು : ಯಾವುದೇ ರಾಜಕೀಯ ಪಕ್ಷಗಳು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಿಗೆ ಬೆಂಬಲಿಸಬಾರದು ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಶನಿವಾರ ನಗರದ ಕನ್ಯಾಕುಮಾರಿ ಶಾಲೆಯ ವಾಸುದೇವ ಸಭಾಂಗಣದಲ್ಲಿ ಆಯೋಜಿಸಿದ್ದ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಹಿರಿಯ ಪತ್ರಕರ್ತ ಹಾಗೂ ಲೇಖಕ ಜಾಣಗೆರೆ ವೆಂಕಟರಾಮಯ್ಯ ಅವರನ್ನು ಬೆಂಬಲಿಸಿ ನಡೆದ ‘ಸಮಾಲೋಚನಾ ಸಭೆ’ಯಲ್ಲಿ ಅವರು ಮಾತನಾಡಿದರು.

12 ವರ್ಷಗಳಲ್ಲಿ ಕಸಾಪ ಬೈಲಾ ತಿದ್ದುಪಡಿಯಿಂದ ಎಷ್ಟು ಹಾಳಾಗಿದೆ ಎಂದರೆ ಅಸಾಂಸ್ಕೃತಿಕ ವಾತಾವರಣ, ಸರ್ವಾಧಿಕಾರಿ ಧೋರಣೆಯಿಂದ ಕೂಡಿದೆ. ಅದಕ್ಕಾಗಿ ಕಸಾಪದಿಂದ ಅಮಾನತ್ತುಗೊಂಡಿರುವ ವ್ಯಕ್ತಿ(ಮಹೇಶ್ ಜೋಶಿ)ಅವರು ಕಸಾಪ ಚುನಾವಣೆಯಲ್ಲಿ ಸ್ಪರ್ಧಿಸದಂತೆ, ನಡವಳಿಕೆಯನ್ನು ವಿರೋಧಿಸಬೇಕು ಎಂದರು.

ಹೊರನಾಡು ಕನ್ನಡಿಗರು, ಹೊರ ದೇಶದ ಕನ್ನಡಿಗರಿಗೆ ವೇದಿಕೆಯಾಗಿರುವುದು ಕನ್ನಡ ಸಾಹಿತ್ಯ ಪರಿಷತ್. ಅದನ್ನು ಸಂರಕ್ಷಿಸಿಕೊಳ್ಳದ ಹೊರತು, ಅದರ ಸ್ವಾಯತ್ತತೆಯನ್ನು ಕಾಪಾಡಿಕೊಳ್ಳದ ಹೊರತು ನಮ್ಮ ಸಾಂಸ್ಕೃತಿಕ ಎಚ್ಚರವನ್ನು ಉಳಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

ಕನ್ನಡಕ್ಕಾಗಿಯೇ ತಮ್ಮ ಜೀವನವನ್ನು ಮುಡುಪಾಗಿಟ್ಟುಕೊಂಡ ಜಾಣಗೆರೆ ವೆಂಕಟರಾಮಯ್ಯ ಅವರನ್ನು ಒಮ್ಮತದ ಅಭಿಪ್ರಾಯದಿಂದ ಬೆಂಬಲಿಸಿ ಚುನಾವಣೆಗೆ ನಿಲ್ಲಿಸಿದ್ದೇವೆ. ಜಾಣಗೆರೆ ಅವರ ವಿರುದ್ಧ ಯಾರಾದರೂ ಚುನಾವಣೆಗೆ ಸ್ಪರ್ಧಿಸಿದರೆ ಅದು ಕನ್ನಡ ಮಾತೆಗೆ, ಕನ್ನಡಿಗರಿಗೆ ಮಾಡುವ ದ್ರೋಹ ಎಂದು ಹೇಳಿದರು.

ಲೇಖಕ ಆರ್.ಜಿ.ಹಳ್ಳಿ ನಾಗರಾಜ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ಅಧ್ಯಕ್ಷರು ಎಲ್ಲರ ಠೇವಣಿಯನ್ನು ಮುರಿದು ಅಧ್ಯಕ್ಷನಾಗಿದ್ದೇನೆ ಎಂದು ಕೊಚ್ಚಿಕೊಳ್ಳುತ್ತಿದ್ದರು. ಅವರು ಯಾವ ಸಾಹಿತಿಗಳಿಗೂ, ಜನಸಾಮಾನ್ಯರಿಗೂ ಗೌರವ ಕೊಡಲಿಲ್ಲ. ಸಾಮಾನ್ಯರು ಕನ್ನಡ ಸಾಹಿತ್ಯ ಪರಿಷತ್‍ಗೆ ಹೋಗಲು ಸಾಧ್ಯವೇ ಆಗುತ್ತಿರಲಿಲ್ಲ. ಅಷ್ಟೊಂದು ದರ್ಪ, ದಬ್ಬಾಳಿಕೆ ಇತ್ತು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‍ನ ಅನೇಕ ಅಧ್ಯಕ್ಷರು ಯಾವುದೇ ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಆದರೆ ಜಾಣಗೆರೆ ವೆಂಕಟರಾಮಯ್ಯ ಅವರು ಎಲ್ಲದಕ್ಕೂ ಸ್ಪಂಧಿಸುತ್ತಾರೆ. ಯಾಕೆಂದರೆ ಅವರು ನೆಲಮೂಲದಿಂದ ಬಂದವರು, ಜಾತ್ಯತೀತ ಪರಿಕಲ್ಪನೆ ಅವರಲ್ಲಿದೆ ಎಂದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ, ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ, ಶಿವಕುಮಾರ್ ಮತ್ತಿತರರು ಹಾಜರಿದ್ದರು.


Tags

Prof. SG Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X