Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನೆಹರು ಅವರ ಉಚಿತ, ಕಡ್ಡಾಯ ಶಿಕ್ಷಣ...

ನೆಹರು ಅವರ ಉಚಿತ, ಕಡ್ಡಾಯ ಶಿಕ್ಷಣ ನೀತಿಯನ್ನೇ ನಾಶಪಡಿಸುವ ಹುನ್ನಾರ: ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆತಂಕ

ಮನೋಜ್ ಆಜಾದ್/ವಾರ್ತಾಭಾರತಿಮನೋಜ್ ಆಜಾದ್/ವಾರ್ತಾಭಾರತಿ29 Nov 2026 6:39 PM IST
share
ನೆಹರು ಅವರ ಉಚಿತ, ಕಡ್ಡಾಯ ಶಿಕ್ಷಣ ನೀತಿಯನ್ನೇ ನಾಶಪಡಿಸುವ ಹುನ್ನಾರ: ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆತಂಕ

ಬೆಂಗಳೂರು : ಪಂಡಿತ್ ಜವಾಹರಲಾಲ್ ನೆಹರು ಅವರ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಆಶಯವನ್ನೇ ಸಂಪೂರ್ಣವಾಗಿ ವಿನಾಶದತ್ತ ಕೊಂಡೊಯ್ಯುವ ಪ್ರಯತ್ನ ಸರಕಾರದಿಂದ ನಡೆಯುತ್ತಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಫ್ರೀಡಂಪಾರ್ಕ್‍ನಲ್ಲಿ ಸರಕಾರಿ ಶಾಲೆಗಳನ್ನು ಉಳಿಸಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ, ಸರಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಸರಕಾರದ ಕ್ರಮವನ್ನು ಖಂಡಿಸಿದರು. ಶಿಕ್ಷಣವು ಸರಕಾರದ ಖಾಸಗಿ ಆಸ್ತಿಯಲ್ಲ. ಯಾವುದೇ ಸರಕಾರ ಅಧಿಕಾರಕ್ಕೆ ಬಂದರೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸುವ ತನ್ನ ಜವಾಬ್ದಾರಿಯನ್ನು ನಿಷ್ಠೆ ಯಿಂದ ನಿರ್ವಹಿಸಬೇಕು ಎಂದರು.

ಸರಕಾರಿ ಶಾಲೆಗಳನ್ನು ದತ್ತು ನೀಡುವ ಹೆಸರಿನಲ್ಲಿ ಖಾಸಗಿ ಸಂಸ್ಥೆಗಳಿಗೆ ವಹಿಸುವುದು ಶಿಕ್ಷಣದ ವ್ಯಾಪಾರಿಕರಣಕ್ಕೆ ಮತ್ತಷ್ಟು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಇದು ಶಿಕ್ಷಣ ವ್ಯವಸ್ಥೆಯ ಮತ್ತೊಂದು ಹಂತದ ಮಾರಾಟಕ್ಕೆ ದಾರಿ ಮಾಡಿಕೊಡಲಿದೆ. ಕೆಪಿಎಸ್ ಬ್ಲಾಕ್ ಗ್ರಿಡ್ ಶಾಲೆಗಳ ಹೆಸರಿನಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಹಾಗೂ ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ಶಿಕ್ಷಣದಿಂದ ಹೊರಗುಳಿಯುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಅಮಾನವೀಯ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳ ವ್ಯಾಪಾರಿಕರಣದಿಂದ ಬಡ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಸರಕಾರಿ ಶಾಲೆಗಳನ್ನೂ ಖಾಸಗಿಯವರಿಗೆ ವಹಿಸಿದರೆ ಬಡ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗಲಿದೆ. ಸರಕಾರ ಶಿಕ್ಷಣ ಕ್ಷೇತ್ರದ ಕುರಿತು ಸಮಗ್ರ ಚಿಂತನೆ ನಡೆಸಲು ನೈಜ ಶಿಕ್ಷಣ ತಜ್ಞರ ಸಮಿತಿಯನ್ನು ರಚಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ಹಿತಾಸಕ್ತಿಯ ಬದಲಿಗೆ ಶಿಕ್ಷಣ ನೀತಿಯ ಬಗ್ಗೆ ಆಳವಾದ ಜ್ಞಾನ ಹೊಂದಿರುವ ತಜ್ಞರ ಸಲಹೆಗಳನ್ನು ಪಡೆದು ನಿರ್ಧಾರ ಕೈಗೊಳ್ಳಬೇಕು. ಶಿಕ್ಷಣವನ್ನು ವ್ಯಾಪಾರದ ದೃಷ್ಟಿಯಿಂದ ನೋಡುವ ಸರಕಾರದ ಧೋರಣೆ ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದರು.

ಹಿರಿಯ ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ, ಶಿಕ್ಷಣದ ವಿಚಾರದಲ್ಲಿ ಸರಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡನೀಯ. ನಾಲ್ಕು ದಿನಗಳಿಂದ ಹೋರಾಟ ನಡೆಯುತ್ತಿದ್ದರೂ ಸರಕಾರ ಎಚ್ಚೆತ್ತುಕೊಳ್ಳದಿರುವುದು ವಿಷಾದನೀಯ. ಸರಕಾರಿ ಶಾಲೆಗಳ ಉಳಿವಿನ ಹೋರಾಟ ಕೇವಲ ಶಿಕ್ಷಣದ ಪ್ರಶ್ನೆಯಲ್ಲ. ಇದು ಕನ್ನಡ ಭಾಷೆ, ಕನ್ನಡ ಮಾಧ್ಯಮ, ಬಡ ವಿದ್ಯಾರ್ಥಿಗಳ ಹಕ್ಕು ಮತ್ತು ಮುಂದಿನ ಪೀಳಿಗೆಯ ಭವಿಷ್ಯದ ಪ್ರಶ್ನೆಯಾಗಿದೆ. ಹೀಗಾಗಿ ಸರಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡದೆ, ಹೋರಾಟಗಾರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಬೆಳಗಾವಿ ಅಧಿವೇಶನ ಆರಂಭವಾಗುವ ಮುನ್ನವೇ ಸಮಸ್ಯೆ ಬಗೆಹರಿಸಲು ಸರಕಾರಕ್ಕೆ ಅವಕಾಶವಿತ್ತು. ಸಭೆ ಕರೆಯುತ್ತೇವೆ ಎಂದು ವಿಳಂಬ ಮಾಡುವುದು ಸರಿಯಲ್ಲ. ಪ್ರಾಥಮಿಕ ಶಿಕ್ಷಣ ಸಚಿವರು ತಕ್ಷಣ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಹೋರಾಟಗಾರರ ಅಹವಾಲು ಆಲಿಸಬೇಕು. ಈಗಾಗಲೇ ಆಶಾ ಕಾರ್ಯಕರ್ತೆಯರ ಹೋರಾಟದ ವಿಚಾರದಲ್ಲೂ ಸರಕಾರ ವಿಳಂಬ ಧೋರಣೆ ಅನುಸರಿಸಿದೆ. ಇದೀಗ ಸರಕಾರಿ ಶಾಲೆಗಳ ಉಳಿವಿನ ಹೋರಾಟಕ್ಕೂ ಸ್ಪಂದಿಸದಿದ್ದರೆ ಸರಕಾರಕ್ಕೆ ಮತ್ತಷ್ಟು ಹಿನ್ನಡೆಯಾಗಲಿದೆ ಎಂದು ಎಚ್ಚರಿಸಿದರು.

ಈ ನ್ಯಾಯಯುತ ಹೋರಾಟಕ್ಕೆ ಸಾಹಿತಿಗಳು, ಕಲಾವಿದರು ಹಾಗೂ ಹೋರಾಟಗಾರರು ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಸರಕಾರ ಕೂಡಲೇ ಎಚ್ಚೆತ್ತುಕೊಂಡು ಹೋರಾಟಗಾರರ ಬೇಡಿಕೆಗಳನ್ನು ಈಡೇರಿಸುವ ಮೂಲಕ ತನ್ನ ಗೌರವವನ್ನು ಉಳಿಸಿಕೊಳ್ಳಬೇಕು ಎಂದು ಜಾಣಗೆರೆ ವೆಂಕಟರಾಮಯ್ಯ ಹೇಳಿದರು.

ಧರಣಿಯಲ್ಲಿ ಶಿಕ್ಷಣ ತಜ್ಞ ಶ್ರೀಪಾದ್ ಭಟ್, ಹೋರಾಟಗಾರರಾದ ಅಭಯ್ ಕುಮಾರ್, ಯೋಗಾನಂದ, ವಿದ್ಯಾರ್ಥಿ ಮುಖಂಡರಾದ ಸರೋವರ್ ಬೆಂಕಿಕೆರೆ, ವೀಣಾ ನಾಯ್ಕ್, ದುರ್ಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Prof. SG Siddaramaiah
share
ಮನೋಜ್ ಆಜಾದ್/ವಾರ್ತಾಭಾರತಿ
ಮನೋಜ್ ಆಜಾದ್/ವಾರ್ತಾಭಾರತಿ
Next Story
X