Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿದಾನಂದಮೂರ್ತಿ, ಭೈರಪ್ಪ ಕನ್ನಡಕ್ಕೆ...

ಚಿದಾನಂದಮೂರ್ತಿ, ಭೈರಪ್ಪ ಕನ್ನಡಕ್ಕೆ ಮಿಡಿದವರು : ಪ್ರೊ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 Jan 2026 12:35 AM IST
share
ಚಿದಾನಂದಮೂರ್ತಿ, ಭೈರಪ್ಪ ಕನ್ನಡಕ್ಕೆ ಮಿಡಿದವರು : ಪ್ರೊ.ಸಿದ್ದರಾಮಯ್ಯ
‘ಕನ್ನಡ-ಕನ್ನಡಿಗ-ಕರ್ನಾಟಕ’ ಪರಿಷ್ಕೃತ 17ನೇ ಆವೃತ್ತಿ ಲೋಕಾರ್ಪಣೆ

ಬೆಂಗಳೂರು : ಪ್ರಾಮಾಣಿಕ ಸಂಶೋಧನೆಗೆ ಹೆಸರಾಗಿದ್ದ ಎಂ.ಚಿದಾನಂದಮೂರ್ತಿ ಮತ್ತು ತಮ್ಮ ಕಾದಂಬರಿಗಳ ಮೂಲಕ ಅಪಾರ ಓದುಗರನ್ನು ಸೃಷ್ಟಿಸಿದ ಎಸ್.ಎಲ್.ಭೈರಪ್ಪ ಇಬ್ಬರೂ ಕನ್ನಡ ಮತ್ತು ಕನ್ನಡಿಗರ ಪರವಾಗಿ ಮಿಡಿದವರಾಗಿದ್ದಾರೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದ್ದಾರೆ.

ರವಿವಾರ ನಗರದ ರವೀಂದ್ರ ಕಲಾಕ್ಷೇತ್ರದ ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಕನ್ನಡ ಗೆಳೆಯರ ಬಳಗ, ಕರ್ನಾಟಕ ವಿಕಾಸ ರಂಗ ಮತ್ತು ಸಪ್ನಾ ಪುಸ್ತಕ ಮಳಿಗೆ ಸಂಯುಕ್ತವಾಗಿ ಏರ್ಪಡಿಸಿದ್ದ 'ಕನ್ನಡ- ಕನ್ನಡಿಗ- ಕರ್ನಾಟಕ' ಕೃತಿಯ ಪರಿಷ್ಕೃತ 17ನೇ ಮುದ್ರಣ ಮತ್ತು ಎಸ್.ಎಲ್.ಭೈರಪ್ಪ ನೆನಪು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೊದಲು ಕೇವಲ 12 ಪುಟಗಳ ಕರಪತ್ರದ ರೂಪದಲ್ಲಿ ಬಂದ 'ಕನ್ನಡ-ಕನ್ನಡಿಗ-ಕರ್ನಾಟಕ'ವು ಈಗ 480 ಪುಟಗಳ ಸಮಗ್ರ ಸಂಪುಟದ ಮಟ್ಟಕ್ಕೆ ಬೆಳೆದಿರುವುದು ಅದರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

ಕನ್ನಡ-ಕನ್ನಡಿಗ-ಕರ್ನಾಟಕ ಇದೊಂದು ವಿಶಿಷ್ಟ ಕೃತಿ. ಈ ಕೃತಿಯಲ್ಲಿ ಕನ್ನಡಿಗರ ಹಿತದೃಷ್ಟಿಯಿಂದ ಆಗಬೇಕಾದ ಕೆಲಸಗಳು ಏನೇನು ಎಂಬುದು ಗೊತ್ತಾಗುತ್ತದೆ. ಗೋಕಾಕ್ ಚಳವಳಿಯ ಹೋರಾಟದ ಪರಿಣಾಮದಲ್ಲಿ ಒಂದು ಉಪಉತ್ಪನ್ನದಂತೆ ರಚಿತವಾಗಿರುವ ಈ ಕೃತಿ ಏಕವ್ಯಕ್ತಿಯದ್ದಲ್ಲ, ಇದೊಂದು ಸಮಷ್ಟಿ ಚಿಂತನೆಯ ಫಲ. ಚಿದಾನಂದಮೂರ್ತಿ ಗುರುವಿನ ಸ್ಥಾನದ ಮೌಲ್ಯಗಳ ಮಾತೃರೂಪದಂತೆ ಬಾಳಿ ಬದುಕಿದರು. ಪ್ರಾಮಾಣಿಕತೆ, ಅಧಿಕಾರ ನಿರ್ಲಿಪ್ತಿ ಇವುಗಳಿಗೆ ಹೆಸರಾಗಿದ್ದರು. ಒಕ್ಕೂಟ ಧರ್ಮಕ್ಕೆ ಅಪಾಯ ಬಂದಿರುವ ಸಂದರ್ಭದಲ್ಲಿ ಇಂತಹ ಕೃತಿಗಳು ನೆರವಿಗೆ ಬರುತ್ತವೆ ಎಂದು ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಸಂಶೋಧಕ ಡಾ.ಆರ್.ಶೇಷಶಾಸ್ತ್ರಿ ಮಾತನಾಡಿ, ಚಿದಾನಂದಮೂರ್ತಿಗಳು ಖಚಿತ ಪುರಾವೆಗಳನ್ನು ಆಧರಿಸಿ ಸಂಶೋಧನೆ ನಡೆಸುತ್ತಿದ್ದರು. ಇನ್ನೊಬ್ಬರ ಅಭಿಪ್ರಾಯವನ್ನು ಯಾವತ್ತೂ ತಮ್ಮದೆಂದು ಹೇಳಿಕೊಳ್ಳುತ್ತಿರಲಿಲ್ಲ. ಇಡೀ ಕರ್ನಾಟಕಕ್ಕೆ ಸಂಬಂಧಿಸಿದ ಬಹುಮುಖಿ ಧಾರೆಗಳ ಪರಿಪೂರ್ಣ ಗ್ರಂಥಾಲಯ ಸ್ಥಾಪಿಸಬೇಕು ಎಂಬ ಕನಸನ್ನು ಹೊಂದಿದ್ದರು. ಅದನ್ನು ಸರಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಅನುವಾದಕ ಬಿ.ಎಸ್.ಜಯಪ್ರಕಾಶ ನಾರಾಯಣ ಮಾತನಾಡಿ, ಎಸ್.ಎಲ್.ಭೈರಪ್ಪನವರು ಅನುದಿನದ ಸಂಗತಿ, ನಂಬಿಕೆ, ಸಂಘರ್ಷ, ಮಿಥ್ ಗಳ ಮೂಲಕವೇ ತಮ್ಮ ಕೃತಿಗಳಲ್ಲಿ ಒಂದು ಗಂಭೀರ ತಾತ್ವಿಕತೆಯನ್ನು ಕಟ್ಟಿಕೊಡುತ್ತಿದ್ದರು. ಅವರು ಗ್ರಾಮೀಣ ಭಾಷೆಯ ಮೂಲಕವೇ ಅಖಿಲ ಭಾರತೀಯ ಸ್ತರದ ಪ್ರಜ್ಞೆಯನ್ನು ಸೃಷ್ಟಿಸಿದರು. ಹುಟ್ಟು, ಸಾವು ಮತ್ತು ಕಾಮದ ನಿರ್ವಹಣೆಯಲ್ಲಿ ಅವರೊಬ್ಬ ಆಸಾಧಾರಣ ಲೇಖಕರಾಗಿದ್ದರು. ಲೇಖಕರನ್ನು ಎಡ-ಬಲ ತರಹದ ಐಡಿಯಾಲಜಿಗಳ ಮೂಲಕ ನೋಡುವುದು ಸರಿಯಲ್ಲ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ್, ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ, ಲೇಖಕರಾದ ಕೆ.ಎನ್.ಭಗವಾನ್, ಬೆ.ರಾ.ನಾಗರಾಜ್, ರಮೇಶ್ ಬಾಬು, ಸುರೇಶ್, ಸಪ್ನ ಬುಕ್ ಹೌಸ್‍ನ ಆರ್.ದೊಡ್ಡೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.


Tags

Prof. Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X