Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಲೆಮಾರಿಗಳ ರಕ್ಷಣೆ ಸರಕಾರದ ಹೊಣೆ: ಮಾಜಿ...

ಅಲೆಮಾರಿಗಳ ರಕ್ಷಣೆ ಸರಕಾರದ ಹೊಣೆ: ಮಾಜಿ ಸಚಿವ ಎಚ್.ಆಂಜನೇಯ

"ಅಪ್ರಾಪ್ತರ ಮೇಲಿನ ಅತ್ಯಾಚಾರ ಆತಂಕಕಾರಿ"

ವಾರ್ತಾಭಾರತಿವಾರ್ತಾಭಾರತಿ17 July 2025 9:35 PM IST
share
ಅಲೆಮಾರಿಗಳ ರಕ್ಷಣೆ ಸರಕಾರದ ಹೊಣೆ: ಮಾಜಿ ಸಚಿವ ಎಚ್.ಆಂಜನೇಯ

ಬೆಂಗಳೂರು: ಅಲೆಮಾರಿ ಸಮುದಾಯದ ಅಪ್ರಾಪ್ತರ ಮೇಲೆ ಈಚೆಗೆ ನಡೆಯುತ್ತಿರುವ ಅತ್ಯಾಚಾರಗಳು ಆತಂಕಕ್ಕೆ ಕಾರಣವಾಗಿದ್ದು, ಇದಕ್ಕೆ ತಡೆ ಹಾಕಲು ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ಆಗ್ರಹಿಸಿದ್ದಾರೆ.

ಗುರುವಾರ ಕರ್ನಾಟಕ ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ದಿ ವೇದಿಕೆ ಆಶ್ರಯದಲ್ಲಿ ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಲೆಮಾರಿಗಳ ಮೇಲೆ ನಡೆಯುತ್ತಿರುವ ನಿರಂತರ ಅತ್ಯಾಚಾರ, ದೌರ್ಜನ್ಯ ಕೊಲೆಯಂತಹ ಗಂಭೀರ ವಿಚಾರಗಳ ಬಗ್ಗೆ ಸರಕಾರದ ಗಮನ ಸೆಳೆಯಲು ಸಿಎಂ ಸಿದ್ದರಾಮಯ್ಯ ಬಳಿ ನಿಯೋಗ ತೆರಳುವ ಅಗತ್ಯ ಇದೆ ಎಂದರು.

ಈ ಮೂಲಕ ಅಲೆಮಾರಿಗಳ ಹಕ್ಕುಗಳ ಈಡೇರಿಕೆ ಜೊತೆಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕ ಗುಂಪು ರಚಿಸಲು ಒತ್ತಡ ತರಬೇಕಿದೆ ಎಂದು ಅವರು ಹೇಳಿದರು.

ದಿಕ್ಕುದೆಸೆ ಇಲ್ಲದ ಅಸ್ಪೃಶ್ಯ ನೋವು ಅನುಭವಿಸುತ್ತಿರುವ 49 ಅಲೆಮಾರಿ ಜಾತಿಗಳನ್ನು ನಾಗರಿಕ ಸಮಾಜದ ಮುಖ್ಯವಾಹಿನಿಗೆ ತರಲು ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕಿದೆ ಎಂದು ಆಂಜನೇಯ ತಿಳಿಸಿದರು.

ಶೀಘ್ರದಲ್ಲೇ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯಮಟ್ಟದ ಅಲೆಮಾರಿಗಳ ಸಮಾವೇಶ ಏರ್ಪಡಿಸಿ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ತಾವರೆಕೆರೆಯಲ್ಲಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಅಮಾನವೀಯ ಘಟನೆ ನಾಗರಿಕ ಸಮಾಜವೇ ತಲೆತಗ್ಗಿಸುವ ಹೇಯ ಕೃತ್ಯ. ಆ ನೊಂದ ಕುಟುಂಬಕ್ಕೆ ಪರಿಹಾರ, ಒಬ್ಬರಿಗೆ ಉದ್ಯೋಗ ನೀಡಲು ಸರ್ಕಾರದ ಮೇಲೆ ಒತ್ತಡ ತರಬೇಕಿದೆ ಎಂದು ತಿಳಿಸಿದರು.

ಕವಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ಅಶಕ್ತ, ಅಸ್ಪೃಶ್ಯ ಸಮುದಾಯದ ರಕ್ಷಣೆ ಸರ್ವರ ಹೊಣೆಯಾಗಿದೆ ಎಂದರು.

ಬಲಾಢ್ಯರು, ಬಹುಸಂಖ್ಯಾತರ ಜೊತೆ ಇವರನ್ನು ಸೇರಿಸಿ ಮೀಸಲಾತಿ ನೀಡುವ ಪದ್ಧತಿ ರದ್ದಾಗಬೇಕು. 49 ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ನೀಡಬೇಕೆಂದು ಹೇಳಿದರು.

ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಈ ಸಮುದಾಯಗಳ ಮೇಲಿನ ಅತ್ಯಾಚಾರ, ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಹಾಗೂ ಈ ವರ್ಗವನ್ನು ಮುಖ್ಯವಾಹಿನಿಗೆ ತರಲು ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಇವರ ಮೇಲೆ ದೌರ್ಜನ್ಯವನ್ನು ಎಸ್ ಸಿ, ಎಸ್.ಟಿ. ಸಮುದಾಯದವರೇ ನಡೆಸಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲು ಕಾಯ್ದೆಗೆ ತಿದ್ದುಪಡಿ ಮಾಡಿ ಇವರಿಗೆ ರಕ್ಷಣೆ ಒದಗಿಸುವ ಮಹತ್ವದ ನಿರ್ಧಾರ ಸರ್ಕಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕೆಪಿಸಿಸಿ ಎಸ್‌ಸಿ ವಿಭಾಗದ ಅಧ್ಯಕ್ಷ ಧರ್ಮಸೇನ, ಪತ್ರಕರ್ತ ಜಾಣಗೆರೆ ವೆಂಕಟರಮಣಯ್ಯ, ಸಾಹಿತಿ ಡಾ.ವಡ್ಡಗೆರೆ ನಾಗರಾಜಯ್ಯ, ಡಾ.ಬಾಲಗುರುಮೂರ್ತಿ, ಆದಿಜಾಂಭವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಅಂಬಣ್ಣ ಆರೋಲಿಕರ, ಭೀಮಾಶಂಕರ್, ಅಲೆಮಾರಿ ಮುಖಂಡರಾದ ಶೇಷಪ್ಪ ಅಂದೋಳ್ ಮಾತನಾಡಿದರು.

ಅಲೆಮಾರಿ ಸಮುದಾಯದ ಪ್ರಮುಖರಾದ ಚಾವಡೆ ಲೋಕೇಶ್, ಲೋಹಿತ್, ಕೆ.ವೀರೇಶ್, ಸುಭಾಷ್ ಚವಾಣ್, ಶಾಂತರಾಜ್, ಶಿವಕುಮಾರ್ ಬಳ್ಳಾರಿ, ಹನುಮಂತು, ಬಸವರಾಜ್ ನಾರಾಯಣಕೆರೆ, ಸಾವಿತ್ರಮ್ಮ ರತ್ನಾಕರ್, ಮಹಾಂತೇಶ್ ಸಂಕಲ್ ಇದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X