Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೇಡ್ತಿ, ಅಘನಾಶಿನಿ ನದಿ ಯೋಜನೆ ಕೈಬಿಡಲು...

ಬೇಡ್ತಿ, ಅಘನಾಶಿನಿ ನದಿ ಯೋಜನೆ ಕೈಬಿಡಲು ಆಗ್ರಹಿಸಿ ಧರಣಿ ಸತ್ಯಗ್ರಾಹ

ವಾರ್ತಾಭಾರತಿವಾರ್ತಾಭಾರತಿ10 Oct 2026 8:12 PM IST
share
ಬೇಡ್ತಿ, ಅಘನಾಶಿನಿ ನದಿ ಯೋಜನೆ ಕೈಬಿಡಲು ಆಗ್ರಹಿಸಿ ಧರಣಿ ಸತ್ಯಗ್ರಾಹ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ-ಅಘನಾಶಿನಿ ನದಿ ಜೋಡಣೆ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ, ‘ಪಶ್ಚಿಮಘಟ್ಟ ಉಳಿಸಿ ಉತ್ತರ ಕನ್ನಡ ರಕ್ಷಿಸಿ’ ಶೀರ್ಷಿಕೆಯಡಿ ‘ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ’ ನೇತೃತ್ವದಲ್ಲಿ ಶನಿವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ನಡೆಸಲಾಯಿತು.

ಬೇಡ್ತಿ-ಅಘನಾಶಿನಿ ಯೋಜನೆಗೆ ಸಂಬಂಧಿಸಿದಂತೆ ಡಿಪಿಎಆರ್ ಅನ್ನು ಕೂಡಲೇ ರದ್ದುಪಡಿಸಿ, ಉತ್ತರ ಕನ್ನಡದ ನದಿಗಳು ಹಾಗೂ ಜನರ ಜೀವ ಸಂರಕ್ಷಿಸಬೇಕು. ದಕ್ಷಿಣ ಭಾರತದ ಆಹಾರ ಸುರಕ್ಷತೆಯ ತಾಣ ಸಹ್ಯಾದ್ರಿ. ಪಶ್ಚಿಮ ಘಟ್ಟದಲ್ಲಿ ಹುಟ್ಟಿ ಹರಿಯುವ 22 ಪ್ರಮುಖ ನದಿ ಕಣಿವೆಗಳ ಸಂರಕ್ಷಣೆಗೆ ಸರಕಾರ ವಿಶೇಷ ಸುಸ್ಥಿರ ಯೋಜನೆ ರೂಪಿಸಬೇಕು ಎಂದು ಧರಣಿನಿರತರು ಆಗ್ರಹಿಸಿದರು.

ಪಶ್ಚಿಮ ಘಟ್ಟದ ಹೃದಯ ಭಾಗವಾದ ಬೇಡ್ತಿ ಮತ್ತು ಅಘನಾಶಿನಿ ನದಿ ಕಣಿವೆಗಳಲ್ಲಿ 4 ಸ್ಥಳಗಳಲ್ಲಿ ಆಣೆಕಟ್ಟು ಕಟ್ಟಿ ನೀರನ್ನು ಬೇರೆಡೆ ಸಾಗಿಸುವ ವಿನಾಶಕಾರಿ ಯೊಜನೆಗಳು ಕಣಿವೆಗಳ ರೈತರು, ಮೀನುಗಾರರು ಸೇರಿ ಲಕ್ಷಾಂತರ ಜನರ ಬದುಕು ನಾಶವಾಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎತ್ತಿನ ಹೊಳೆಯ ವಿಫಲ ನದಿ ತಿರುವು ಯೋಜನೆಯಂತೆ ಬೇಡ್ತಿ ಅಘನಾಶಿನಿ ನದಿಗಳ ದಿಕ್ಕು ತಿರುಗಿಸುವ ಯೋಜನೆಗಳು ವ್ಯರ್ಥ, ನೀರಿಲ್ಲದ ನೀರಾವರಿ ಯೋಜನೆಗಳಾಗಲಿವೆ. ಬೇಡ್ತಿ ನದಿಯಲ್ಲಿ ಹೆಚ್ಚುವರಿ ನೀರಿಲ್ಲ. ನದಿಗಳನ್ನು ತಿರುಗಿಸುವ ಹುಚ್ಚು ಸಾಹಸ ನಡೆಸಿದರೆ ಬೇಡ್ತಿ ಅಘನಾಶಿನಿ ಜೀವ ನದಿಗಳು ಸಾಯುತ್ತವೆ ಎಂದು ಎಚ್ಚರಿಕೆ ನೀಡಿದರು.

ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಸುಸ್ಥಿರ ನೀರಾವರಿ ಯೋಜನೆಯನ್ನು ವಿನಾಶ ರಹಿತವಾಗಿ ರೂಪಿಸಬೇಕು. ವಿಜ್ಞಾನಿಗಳು, ಸ್ಥಳೀಯ 120 ಗ್ರಾಮ ಪಂಚಾಯತ್‍ಗಳು, 160 ಗ್ರಾಮೀಣ ಸಹಕಾರ ಸಂಘಗಳು, ಉತ್ತರ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಎಲ್ಲಾ ಧಾರ್ಮಿಕ ಮುಖಂಡರು, ಬೇಡ್ತಿ ಮತ್ತು ಅಘನಾಶಿನಿ ನದಿ ತಿರುವು ಯೋಜನೆಗಳನ್ನು ಕೇಂದ್ರ, ರಾಜ್ಯ ಸರಕಾರಗಳು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ ಎಂದರು.

ಧರಣಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಶಾಸಕ ಭೀಮಣ್ಣ ನಾಯ್ಕ್, ಪರಿಸರ ಹೋರಾಟಗಾರ ಡಾ.ಯಲ್ಲಪ್ಪ ರೆಡ್ಡಿ, ವಿಜ್ಞಾನಿ ಟಿ.ವಿ.ರಾಮಚಂದ್ರ, ಪರಿಸರ ತಜ್ಞ ಎ.ಎನ್ ನಾಯಕ್, ಸಾಹಿತಿ ಜಯಂತ್ ಕಾಯ್ಕಿಣಿ, ನೀರಾವರಿ ತಜ್ಞರಾದ ವಿ.ಆರ್. ಹೆಗಡೆ ಮತ್ತಿತರರು ಹಾಜರಿದ್ದರು.

Tags

Aghanashini River ProjectsBedtiprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X