Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದುಷ್ಟ, ದಲಿತ ವಿರೋಧಿ ಕಾಂಗ್ರೆಸ್...

ದುಷ್ಟ, ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಲು ಪ್ರತಿಭಟನೆ: ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ5 March 2025 2:34 PM IST
share
ದುಷ್ಟ, ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಲು ಪ್ರತಿಭಟನೆ: ವಿಜಯೇಂದ್ರ

ಬೆಂಗಳೂರು: ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿದ ಭ್ರಷ್ಟ, ದುಷ್ಟ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಕೆ ನೀಡಲು ನಾವು ಇಲ್ಲಿ ಸೇರಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ನಗರದ ಫ್ರೀಡಂ ಪಾರ್ಕ್‍ನಲ್ಲಿ ಇಂದು ನಡೆದ ‘ಎಸ್‍ಸಿಪಿ-ಟಿಎಸ್‍ಪಿ ಹಣ ದುರ್ಬಳಕೆ’ ಮಾಡಿಕೊಂಡ ದಲಿತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ದುಷ್ಟ, ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ. ನಮ್ಮ ಹೋರಾಟ ನಿರಂತರವಾಗಿರಲು ಕೈಜೋಡಿಸಿ ಎಂದು ಕರೆ ನೀಡಿದರು. ನಾಳೆ ಬೆಳಿಗ್ಗೆ ಇದೇ ಜಾಗದಲ್ಲಿ ಬೃಹತ್ ಹೋರಾಟ ನಡೆಯಲಿದೆ. ಎಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದರು.

ಬಿಜೆಪಿ ಸರಕಾರಗಳು ಪರಿóಶಿಷ್ಟ ಜಾತಿ, ಪಂಗಡದ ಹಣ ದುರ್ಬಳಕೆ ಮಾಡಿಲ್ಲ; ಮಾಡುವುದೂ ಇಲ್ಲ ಎಂದು ಹೇಳಿದರು. ಈ ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ಮಾಡುತ್ತ ಬಂದಿದೆ ಎಂದು ಅವರು ನುಡಿದರು. ಬಿಜೆಪಿ ಯಾವತ್ತೂ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಪರವಾಗಿದೆ ಎಂದು ವಿವರಿಸಿದರು. ಸಚಿವರೊಬ್ಬರು ಬಿಜೆಪಿ ಆಡಳಿತದ ಇತರ ರಾಜ್ಯಗಳ ಸರಕಾರಗಳ ಕುರಿತು ತಪ್ಪು ಮಾಹಿತಿ ನೀಡಿದ್ದಾಗಿ ಆಕ್ಷೇಪಿಸಿದರು.

ರಾಜ್ಯದ ಎಸ್‍ಸಿ, ಎಸ್‍ಟಿ ಸಮುದಾಯಗಳ ಹಣವನ್ನು ದುರುಪಯೋಗ ಮಾಡುವ ದುಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ 14 ತಂಡಗಳನ್ನು ರಚಿಸಿ ಜನಾಂದೋಲನ ರೂಪಿಸಲಾಗಿದೆ. ಚುನಾವಣೆ ಪೂರ್ವದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯ ಸೇರಿ ಎಲ್ಲರಿಗೂ ನ್ಯಾಯ ಕೊಡುವುದಾಗಿ ಹಾಗೂ ಅಭಿವೃದ್ಧಿ ಮಾಡುವುದಾಗಿ ಕಾಂಗ್ರೆಸ್ ಹೇಳಿ ಅಧಿಕಾರಕ್ಕೆ ಬಂದಿದೆ ಎಂದು ವಿವರಿಸಿದರು.

ಕಾರ್ಯಕರ್ತರಿಗೆ ಶಕ್ತಿ ತುಂಬುವ ಚುನಾವಣೆ

ಬಿಬಿಎಂಪಿಯಲ್ಲಿ ಬಿಜೆಪಿ ಸ್ವಂತ ಶಕ್ತಿಯಲ್ಲಿ ಅಧಿಕಾರ ಪಡೆಯುವಂತಾಗಬೇಕಿದೆ. ಮುಂದಿನ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯು ಕಾರ್ಯಕರ್ತರಿಗೆ ಶಕ್ತಿ ತುಂಬಲಿದೆ. ನಾವೆಲ್ಲರೂ ಒಗ್ಗೂಡಿ ಕಾರ್ಯಕರ್ತರ ಚುನಾವಣೆ ಎದುರಿಸಿ ಗೆಲ್ಲಿಸಲಿದ್ದೇವೆ ಎಂದು ವಿಶ್ವಾಸದಿಂದ ತಿಳಿಸಿದರು.

ಸಿದ್ದಣ್ಣ, ಲೂಟಿ ಗ್ಯಾರಂಟಿ ಅಣ್ಣ : ಆರ್. ಅಶೋಕ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಸರಕಾರದಲ್ಲಿ ದುಡ್ಡಿಲ್ಲ; ಬೊಕ್ಕಸ ಖಾಲಿಯಾದ ಕಾರಣ ದಲಿತರ ಉದ್ಧಾರಕ್ಕೆ ಮೀಸಲಾಗಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದ್ದಾರೆ. ನಾನು ಸಿದ್ದಣ್ಣ, ಲೂಟಿ ಗ್ಯಾರಂಟಿ ಅಣ್ಣ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯವನ್ನು ಭಿಕ್ಷೆ ಬೇಡುವ ಸ್ಥಿತಿಗೆ ಸಿದ್ದರಾಮಯ್ಯನವರು ತಂದು ನಿಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಸಾಲದ ವಿಚಾರದಲ್ಲೂ ಚಾಂಪಿಯನ್ ಎಂದು ಆಕ್ಷೇಪಿಸಿದರು. ಎಲ್ಲ ನಿಗಮ, ತಾಂಡಾ ಅಭಿವೃದ್ಧಿ ನಿಗಮಗಳಿಗೆ ಕನಿಷ್ಠ ಮೊತ್ತವನ್ನು ಈ ಮನೆಹಾಳ ಕಾಂಗ್ರೆಸ್ ಸರಕಾರ ನೀಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ತಲೆ ಎತ್ತಿ ತಿರುಗಲಾರದ ಪರಿಸ್ಥಿತಿ: ಛಲವಾದಿ ನಾರಾಯಣಸ್ವಾಮಿ

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ದಲಿತರ ಹಣ ದುರ್ಬಳಕೆ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಂದೋಲನ ರೂಪಿಸಿದೆ. ಬಿಜೆಪಿಯ ದಲಿತಪರ ಚಿಂತನೆ, ಅವರ ಪರವಾದ ಯೋಜನೆಗಳೇ ಕಾರಣ ಎಂದು ತಿಳಿಸಿದರು. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಈ ವಿಷಯವನ್ನು ತೀಕ್ಷ್ಣವಾಗಿ ಪರಿಗಣಿಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ತಲೆ ಎತ್ತಿ ತಿರುಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು.

ಕೌನ್ಸಿಲರ್ ಚುನಾವಣೆ ಹತ್ತಿರದಲ್ಲಿರುವಂತೆ ಕಾಣುತ್ತಿದೆ. ಕೋರ್ಟಿನ ಆದೇಶದ ಕಾರಣ ಚುನಾವಣೆ ನಡೆಯುವ ಸಾಧ್ಯತೆ ಇದೆ. ನಾವು ಜನರನ್ನು ಭೇಟಿ ಮಾಡಿ ಮನೆಮನೆಗೆ ಹೋಗಿ ಅವರನ್ನು ಪ್ರೇರೇಪಿಸಬೇಕು. ಬಿಜೆಪಿ ಕಾರ್ಯಕರ್ತರನ್ನು ನಾವು ಉತ್ತೇಜಿಸಬೇಕು ಎಂದು ಮನವಿ ಮಾಡಿದರು. ಈ ಹೋರಾಟಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶಾಸಕರಾದ ಎಸ್.ಆರ್.ವಿಶ್ವನಾಥ್, ಬೈರತಿ ಬಸವರಾಜ್, ಮಾನಪ್ಪ ವಜ್ಜಲ್, ಉದಯ್ ಗರುಡಾಚಾರ್, ರಘು, ಸಿಮೆಂಟ್ ಮಂಜು, ಭಾಗೀರಥಿ ಮರುಳಸಿದ್ದಯ್ಯ, ಮಾಜಿ ಶಾಸಕ ಹಾಲಪ್ಪ, ಪ್ರಕೋಷ್ಠಗಳ ಸಂಯೋಜಕ ದತ್ತಾತ್ರಿ, ಮುಖಂಡರಾದ ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಉಮೇಶ್ ಶೆಟ್ಟಿ, ರವೀಂದ್ರ, ನಗರದ 3 ಜಿಲ್ಲೆಗಳ ಅಧ್ಯಕ್ಷರಾದ ಹರೀಶ್, ರಾಮಮೂರ್ತಿ, ಸಪ್ತಗಿರಿ ಗೌಡ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X