Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆಯವ್ಯಯದಲ್ಲಿ ಶಾಲೆಗಳ ಸಬಲೀಕರಣಕ್ಕೆ...

ಆಯವ್ಯಯದಲ್ಲಿ ಶಾಲೆಗಳ ಸಬಲೀಕರಣಕ್ಕೆ ಅನುದಾನಗಳನ್ನು ಒದಗಿಸಿ: ನಿರಂಜನಾರಾಧ್ಯ ವಿ.ಪಿ.

ವಾರ್ತಾಭಾರತಿವಾರ್ತಾಭಾರತಿ6 Feb 2024 6:44 PM IST
share
ಆಯವ್ಯಯದಲ್ಲಿ ಶಾಲೆಗಳ ಸಬಲೀಕರಣಕ್ಕೆ ಅನುದಾನಗಳನ್ನು ಒದಗಿಸಿ: ನಿರಂಜನಾರಾಧ್ಯ ವಿ.ಪಿ.

ಬೆಂಗಳೂರು: ಮುಂಬರುವ ಆಯವ್ಯಯದಲ್ಲಿ ಸರಕಾರಿ ಶಾಲೆಗಳ ಸಬಲೀಕರಣಕ್ಕೆ ವಿಶೇಷ ಅನುದಾನಗಳನ್ನು ಒದಗಿಸಬೇಕು ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ. ಆಗ್ರಹಿಸಿದ್ದಾರೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ಅವರು, ದಿನದಿಂದ ದಿನಕ್ಕೆ ಸರಕಾರಿ ಶಾಲೆಗಳು ಕನಿಷ್ಠ ಮೂಲಸೌಕರ್ಯ ಹಾಗು ಖಾಯಂ ಶಿಕ್ಷಕರ ಕೊರತೆಯಿಂದ ಗುಣಾತ್ಮಕ ಶಿಕ್ಷಣವನ್ನು ಒದಗಿಸಲು ಹಲವು ಸಂಕಷ್ಟಗಳನ್ನು ಎದುರಿಸುತ್ತಿವೆ. ಹಾಗಾಗಿ ಶಾಲೆಗಳ ಅಭಿವೃದ್ಧಿಗೆ ಹಣವನ್ನು ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ.

ಸಾಮಾಜಿಕ ನ್ಯಾಯವನ್ನು ಕೇಂದ್ರ ಬಿಂದುವನ್ನಾಗಿಸಿಕೊಂಡು ಒಕ್ಕೂಟ ವ್ಯವಸ್ಥೆಯಲ್ಲಿ ತಾವು ಪ್ರತಿಪಾದಿಸುತ್ತಿರುವ ‘ಕರ್ನಾಟಕ ಅಭಿವೃದ್ಧಿ ಮಾದರಿಯುʼ, ಸೇವಾ ವಲಯವಾದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಈ ಬಗೆಯ ಹೊಸ ಮಾದರಿಗಳು ಜನ ಸಾಮಾನ್ಯರಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತವೆ ಎಂದಿದ್ದಾರೆ.

ಸರಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಮೂಲಕ ಪ್ರತಿಯೊಂದು ಶಾಲೆಯನ್ನು ನೆರೆಹೊರೆಯ ಸಮಾನ ಶಾಲೆಯನ್ನಾಗಿ ಪರಿವರ್ತಿಸಿ ಎಲ್ಲ ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣ ಒದಗಿಸಬೇಕೆಂಬ ಕೂಗು ರಾಜ್ಯದಲ್ಲಿ ಹಲವು ದಶಕಗಳಿಂದ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ವಲಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ, ತಾವು ಮಂಡಿಸಲಿರುವ ಆಯವ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಅನುದಾನಗಳನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.

2017ರಲ್ಲಿ ಸರಕಾರಿ ಶಾಲೆಗಳ ಸಬಲೀಕರಣಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ‘ಸರಕಾರಿ ಶಾಲೆಗಳ ಸಬಲೀಕರಣ ವರದಿಯನ್ನು’ ಸರಕಾರಕ್ಕೆ ಸಲ್ಲಿಸಿತ್ತು. ಆದರೆ, ಇಲ್ಲಿಯವರೆಗೆ ಈ ವರದಿಯನ್ನು ಜಾರಿಗೊಳಿಸಲು ಸರಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಮುಂದಿನ ಬಜೆಟ್ ಅಧಿವೇಶನದಲ್ಲಿ ಈ ವರದಿಯನ್ನು ಸದನದಲ್ಲಿ ಅಂಗೀಕರಿಸಿ ಪೂರ್ಣವಾಗಿ ಜಾರಿಗೊಳಿಸಲು ಆಯವ್ಯಯದಲ್ಲಿ ಹಣ ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮೂರು ಶೈಕ್ಷಣಿಕ ವರ್ಷದಿಂದ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಸಿದ ಕಾರಣ ನೂರಾರು ಮಕ್ಕಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಉಚಿತ ಬೈಸಿಕಲ್ ವಿತರಣೆಗೆ ಆಯವ್ಯದಲ್ಲಿ ಅಗತ್ಯ ಅನುದಾನ ನೀಡಬೇಕು ನಿರಂಜನಾರಾಧ್ಯ ವಿ.ಪಿ. ಹೇಳಿದ್ದಾರೆ.

ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಮೂಲಭೂತ ಸೌಕರ್ಯಗಳಾದ ಶಿಕ್ಷಕರು, ಕಲಿಕಾ ಕೊಠಡಿ, ಅಗತ್ಯ ಪಾಠೋಪಕರಣ, ಪೀಠೋಪಕರಣ, ಕ್ರೀಡಾ ಸಾಮಗ್ರಿ ಕುಡಿಯುವ ನೀರು, ಶೌಚಾಲಯ ಇತ್ಯಾದಿಗಳನ್ನು ಸಮರ್ಪಕವಾಗಿ ಒದಗಿಸಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಆರ್ ಟಿಇ ಅನುಪಾಲನೆ ಕೇವಲ ಶೇ.26.3ರಷ್ಟಿದೆ. ಶಿಕ್ಷಣ ಹಕ್ಕು ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಆಯವ್ಯದಲ್ಲಿ ‘ವಿಶೇಷ ಮೂಲಭೂತ ಸೌಕರ್ಯ ಅಭಿವೃದ್ಧಿ ಅನುದಾನವನ್ನು’ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಶಿಕ್ಷಣ ಹಕ್ಕು ಕಾಯಿದೆಯನ್ನು ಜಾರಿಗೊಳಿಸಲು ಒಂದು ರೋಡ್ ಮ್ಯಾಪನ್ನು ರೂಪಿಸಲು ಬಜೆಟ್ ನಲ್ಲಿ ಘೋಷಿಸಬೇಕು. ‘ಉಚಿತ ಮತ್ತು ಕಡ್ಡಾಯ ಶಿಕ್ಷಣ’ವನ್ನು ಪೂರ್ವ ಪ್ರಾಥಮಿಕದಿಂದ 12ನೆ ತರಗತಿಯವರೆಗೆ ವಿಸ್ತರಿಸಬೇಕು. ಸಂವಿಧಾನದ ವಿಧಿ 45ರ ಆಶಯದಂತೆ ಎಲ್ಲ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸಲು ಅಗತ್ಯ ಸೌಕರ್ಯಕ್ಕೆ ಮತ್ತು ನರ್ಸರಿ ಶಿಕ್ಷಕರ ನೇಮಕಾತಿಗೆ ವಿಶೇಷ ಅನುದಾನ ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X