ಮದ್ದೂರಿಗೆ ತೆರಳುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

ಪುನೀತ್ ಕೆರೆಹಳ್ಳಿ
ಬೆಂಗಳೂರು : ಹಿಂದುತ್ವ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.
ಗಣೇಶಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದ ಹಿನ್ನೆಯಲ್ಲಿ ಮದ್ದೂರು ಉದ್ವಿಗ್ನಗೊಂಡಿದ್ದು, ಬುಧವಾರ ಮದ್ದೂರಿನಲ್ಲಿ 20ಕ್ಕೂ ಗಣೇಶ ಮೂರ್ತಿಗಳನ್ನು ಮೆರವಣಿಗೆ ಮೂಲಕ ವಿಸರ್ಜಿಸಲಾಯಿತು. ಕಲ್ಲು ತೂರಾಟ ಖಂಡಿಸಿ ಪುನೀತ್ ಕೆರೆಹಳ್ಳಿ ಮದ್ದೂರಿಗೆ ತೆರಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಬಸವನಗುಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story





