Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗೋವಾ ಕನ್ನಡ ಮಾಧ್ಯಮ ಶಾಲೆಗಳನ್ನು...

ಗೋವಾ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದು ಸಾಂವಿಧಾನಿಕ ಆಶಯಕ್ಕೆ ವಿರುದ್ಧ: ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ29 Jun 2026 11:34 PM IST
share
ಗೋವಾ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದು ಸಾಂವಿಧಾನಿಕ ಆಶಯಕ್ಕೆ ವಿರುದ್ಧ: ಬಿಳಿಮಲೆ

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ನೆಪದಲ್ಲಿ ಗೋವಾ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲು ಅಲ್ಲಿನ ಸರಕಾರ ಸಿದ್ಧತೆ ನಡೆಸುತ್ತಿರುವುದು ಸಾಂವಿಧಾನಿಕ ಆಶಯಗಳಿಗೆ ವಿರುದ್ಧವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಕಳವಳ ವ್ಯಕ್ತಪಡಿಸಿದ್ದಾರೆ.

ಸೋಮವಾರ ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ವಿದ್ಯಾರ್ಥಿಗಳು ಬದಲಾದ ಪರಿಸ್ಥಿತಿಗೆ ಹೊಂದಿಕೊಳ್ಳಬೇಕು ಎಂಬ ಲಘು ಹೇಳಿಕೆ ನೀಡಿರುವುದು ಅಘಾತಕಾರಿಯಾಗಿದೆ. ಇದು ಭಾರತದ ಸಂವಿಧಾನವು ಪ್ರತಿಪಾದಿಸುವ ವೈವಿಧ್ಯತೆಯಲ್ಲಿ ಏಕತೆ ಎಂಬ ಆಶಯದ ಸ್ಪಷ್ಟ ಉಲ್ಲಂಘನೆಯಾಗಿದೆ. ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿಯು ಭಾಷಾ ವೈವಿಧ್ಯ ಮತ್ತು ಸಹಬಾಳ್ವೆಯ ಮೌಲ್ಯಗಳಿಗೆ ಹೇಗೆ ಧಕ್ಕೆಯುಂಟು ಮಾಡಬಹುದು ಎಂಬುದಕ್ಕೆ ಉದಾಹರಣೆಯಾಗಿದೆ ಎಂದು ತಿಳಿಸಿದ್ದಾರೆ.

ನೆರೆ ರಾಜ್ಯಗಳ ಗಡಿ ಭಾಗದಲ್ಲಿ ವಾಸಿಸುವ ಸಾವಿರಾರು ಕನ್ನಡಿಗರು ಅವರ ಮಕ್ಕಳನ್ನು ಅಲ್ಲಿನ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಲು ಕಳುಹಿಸುವುದು ಹಲವಾರು ದಶಕಗಳಿಂದ ನಿರಂತರವಾಗಿ ನಡೆದು ಬಂದಿದ್ದು, ಉನ್ನತ ಶಿಕ್ಷಣಕ್ಕಾಗಿ ಅವರು ಕರ್ನಾಟಕಕ್ಕೆ ಬಂದ ಸಂದರ್ಭದಲ್ಲಿ ಅವರಿಗೆ ಅಗತ್ಯ ಸಹಕಾರವನ್ನು ನೀಡುವ ಕೆಲಸವನ್ನು ಕರ್ನಾಟಕವು ಮುಂದುವರಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಸಹಬಾಳ್ವೆಯ ಈ ಉನ್ನತ ಪರಂಪರೆಯ ಕೊಂಡಿಯನ್ನು ಒಂದೇ ಬಾರಿಗೆ ಕಳಚುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದಿದ್ದಾರೆ.

ಕರ್ನಾಟಕ ಸರಕಾರದ ಸಚಿವರನ್ನೊಳಗೊಂಡ ಉನ್ನತ ಮಟ್ಟದ ನಿಯೋಗವೊಂದನ್ನು ತಕ್ಷಣವೇ ಗೋವಾಕ್ಕೆ ಕಳುಹಿಸಿ, ಅಲ್ಲಿನ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರೊಂದಿಗೆ ಮಾತುಕತೆ ನಡೆಸಿ ಕನ್ನಡ ಶಾಲೆಗಳ ಮುಚ್ಚುವಿಕೆ ಪ್ರಕ್ರಿಯೆಗೆ ತಕ್ಷಣವೇ ತಡೆ ತರಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರಕಾರದ ಪ್ರತಿನಿಧಿಗಳು ಗೋವಾ ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನವು ಯಾವುದೇ ಪ್ರಾದೇಶಿಕ ಭಾಷಾ ಅಥವಾ ಭಾಷಾ ಅಲ್ಪಸಂಖ್ಯಾತರ ಅಸ್ತಿತ್ವಕ್ಕೆ ಮಾರಕವಾಗದಂತೆ ಕ್ರಮ ವಹಿಸಲು ಒತ್ತಡ ಹೇರಬೇಕು ಎಂದು ಕೋರಿದ್ದಾರೆ.

ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ: ಮಾತೃ ಭಾಷೆಯಲ್ಲಿ ಕಲಿಯುವ ಅವಕಾಶವನ್ನು ಕಳೆದುಕೊಳ್ಳುತ್ತಿರುವ ಗೋವಾ ರಾಜ್ಯದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಸಹಾಯಕ್ಕೆ ಕೇಂದ್ರ ಸರಕಾರವು ಕೂಡಲೇ ಧಾವಿಸುವ ಮೂಲಕ ಸಮಸ್ಯೆಯ ಪರಿಹಾರಕ್ಕೆ ಮುಂದಾಗಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉಲ್ಲೇಖಿಸಿ ಗೋವಾ ಸರಕಾರವು ಕೈಗೊಳ್ಳುತ್ತಿರುವ ತೀರ್ಮಾನವು ಕೇವಲ ಆಡಳಿತಾತ್ಮಕವಾದುದಾಗಿಲ್ಲ. ಬದಲಿಗೆ ಅದು ಭಾಷಾ ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಕಸಿಯುವ ಪ್ರಯತ್ನವಾಗಿದೆ. ಹಲವಾರು ಪೀಳಿಗೆಗಳಿಂದ ಕರ್ನಾಟಕದ ಗಡಿಭಾಗಗಳಲ್ಲಿ ನೆಲೆಸಿರುವ ಕನ್ನಡಿಗರು ತಮ್ಮ ಮಕ್ಕಳನ್ನು ಅಲ್ಲಿಯ ಕನ್ನಡ ಮಾಧ್ಯಮ ಶಾಲೆಗಳಿಗೆ ಕಳುಹಿಸಿ ಕೊಡುವ ಪ್ರಕ್ರಿಯೆ ನಡೆದು ಬಂದಿದ್ದು, ಇದು ಭಾಷಾ ವೈವಿಧ್ಯತೆಯನ್ನು ಹಾಗೂ ವಿವಿಧತೆಯಲ್ಲಿ ಏಕತೆಯನ್ನು ಗೌರವಿಸುವ ಮೌಲ್ಯಗಳಿಗೆ ಅನುಗುಣವಾಗಿದೆ. ಗೋವಾ ಸರಕಾರದ ಪ್ರಸ್ತುತ ತೀರ್ಮಾನವು ಒಕ್ಕೂಟ ವ್ಯವಸ್ಥೆಗೆ ಅಗೌರವವನ್ನು ತರುತ್ತಿದ್ದು, ಕೂಡಲೇ ಈ ಬಗ್ಗೆ ಶಾಶ್ವತ ಪರಿಹಾರಕ್ಕೆ ಕೇಂದ್ರ ಸರಕಾರ ಮುಂದಾಗಬೇಕು’ ಎಂದು ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.

Tags

purushotham bilimale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X