Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗಡಿಭಾಗದ ಸಮಸ್ಯೆ ಪರಿಹರಿಸಲು ಕೇಂದ್ರ...

ಗಡಿಭಾಗದ ಸಮಸ್ಯೆ ಪರಿಹರಿಸಲು ಕೇಂದ್ರ ಮುಂದಾಗಲಿ : ರಾಷ್ಟ್ರಪತಿಗೆ ಪತ್ರ ಬರೆದ ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ27 Feb 2025 6:04 PM IST
share
ಗಡಿಭಾಗದ ಸಮಸ್ಯೆ ಪರಿಹರಿಸಲು ಕೇಂದ್ರ ಮುಂದಾಗಲಿ : ರಾಷ್ಟ್ರಪತಿಗೆ ಪತ್ರ ಬರೆದ ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ಗಡಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರಕಾರ ಪ್ರಾಮಾಣಿಕವಾಗಿ ಮುಂದಾಗಬೇಕು. ಕೂಡಲೇ ಸಂವಿಧಾನದ ಅವಕಾಶದಂತೆ ವಿಶೇಷಾಧಿಕಾರಿಯನ್ನು ನೇಮಿಸಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.

ಈ ಕುರಿತು ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿರುವ ಅವರು, ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತರ್‌ ರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರಕಾರ ಮನಸು ಮಾಡಬೇಕು ಎಂದು ತಿಳಿಸಿದ್ದಾರೆ.

ಸಂವಿಧಾನದ 350(ಬಿ) ಅನುಚ್ಛೇದದಲ್ಲಿ ಗಡಿ ಪ್ರದೇಶಗಳಲ್ಲಿ ವಾಸಿಸುವ ಭಾಷಾ ಅಲ್ಪಸಂಖ್ಯಾತರು ಬಹುಸಂಖ್ಯಾತರೊಂದಿಗೆ ಸಾಮರಸ್ಯದ ಜೀವನವನ್ನು ನಡೆಸುವಲ್ಲಿ ಕೇಂದ್ರ ಸರಕಾರದ ಜವಾಬ್ದಾರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಲಾಗಿದ್ದು, ಅದರಂತೆ ಕೇಂದ್ರ ಸರಕಾರವು ವಿಶೇಷಾಧಿಕಾರಿಯನ್ನು ನೇಮಿಸಬೇಕಿದೆ ಎಂದಿದ್ದಾರೆ.

ನೇಮಿಸಲಾಗುವ ವಿಶೇಷಾಧಿಕಾರಿ, ಗಡಿ ಭಾಗಗಳ ಭಾಷಾ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಕೂಲಂಕಷವಾಗಿ ಅಧ್ಯಯನ ನಡೆಸಬೇಕು. ಸಮಸ್ಯೆವಾರು ವಿವರಗಳನ್ನು ಸಿದ್ಧಪಡಿಸಿ, ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಬೇಕು. ರಾಷ್ಟ್ರಪತಿಗಳು ಅದನ್ನು ಸಂಸತ್ತಿನ ಉಭಯ ಸದನಗಳ ಮುಂದೆ ಮಂಡಿಸಲು ನಿರ್ದೇಶಿಸಬಹುದಾಗಿದ್ದು, ಕೇಂದ್ರ ಸರಕಾರವು ವರದಿಯ ಆಧಾರದಲ್ಲಿ ಉಭಯ ರಾಜ್ಯಗಳ ಗಡಿ ಹಿಂಸಾಚಾರಗಳನ್ನು ಹತ್ತಿಕ್ಕುವಲ್ಲಿ ಕ್ರಮ ವಹಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

‘ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಗಲಭೆ ಈ ಪತ್ರ ಬರೆಯಲು ಪ್ರೇರೇಪಿಸಿದೆ. ಈ ಸಮಸ್ಯೆ ಮೇಲ್ನೋಟಕ್ಕೆ ಕಾಣುವುದಕ್ಕಿಂತಲೂ ತೀವ್ರವಾಗಿದ್ದು, ಎರಡೂ ರಾಜ್ಯಗಳ ಆಡಳಿತ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿರುವುದಷ್ಟೇ ಅಲ್ಲದೇ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ, ಅಗಾಧ ಹಿಂಸಾಚಾರ ವೇದನೆ ತರುವ ವಿಷಯವಾಗಿದೆ. ಈ ಅರ್ಥಹೀನ ಗಲಭೆಗಳಿಗೆ ಕೊನೆಯಾಡಲು ಕೇಂದ್ರ ಸರಕಾರವು ಕೂಡಲೇ ಮುಂದಾಗಬೇಕು’

-ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X