Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರತಿಯೊಂದು ಕಾಮಗಾರಿಯಲ್ಲೂ ಗುಣಮಟ್ಟ...

ಪ್ರತಿಯೊಂದು ಕಾಮಗಾರಿಯಲ್ಲೂ ಗುಣಮಟ್ಟ ಪರಿಶೀಲನೆ ಕಡ್ಡಾಯ : ಜಿ.ಜಗದೀಶ್

“ರಸ್ತೆ ಗುಂಡಿಮುಕ್ತಗೊಳಿಸದಿದ್ದಲ್ಲಿ ಇಂಜಿನಿಯರ್‌ಗಳ ಮೇಲೆ ಶಿಸ್ತು ಕ್ರಮ”

ವಾರ್ತಾಭಾರತಿವಾರ್ತಾಭಾರತಿ9 Oct 2026 6:54 PM IST
share
ಪ್ರತಿಯೊಂದು ಕಾಮಗಾರಿಯಲ್ಲೂ ಗುಣಮಟ್ಟ ಪರಿಶೀಲನೆ ಕಡ್ಡಾಯ : ಜಿ.ಜಗದೀಶ್

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವುದರ ಜೊತೆಗೆ, ಪ್ರತಿ ಕಾಮಗಾರಿಗೆ ಗುಣಮಟ್ಟದ ಪರಿಶೀಲನೆ ಕಡ್ಡಾಯವಾಗಿ ನಡೆಸಬೇಕು ಎಂದು ಪಾಲಿಕೆಯ ಆಯುಕ್ತ ಜಿ.ಜಗದೀಶ್ ಸಂಬಂಧಿತ ಅಧಿಕಾರಿ ಹಾಗೂ ಇಂಜಿನಿಯರ್ ಗಳಿಗೆ ಸೂಚನೆ ನೀಡಿದ್ದಾರೆ.

ವಿವಿಧ ವಿಭಾಗಗಳ ಇಂಜಿನಿಯರಿಂಗ್ ಹಾಗೂ ಇತರೆ ವಿಭಾಗಗಳ ಅಧಿಕಾರಿಗಳೊಂದಿಗೆ ಎಂ.ಜಿ.ರಸ್ತೆಯ ಪಿಯುಬಿ ಕಟ್ಟಡದ ಆಯುಕ್ತರ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಆಯುಕ್ತರು ಮಾತನಾಡಿದರು.

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಗುಣಮಟ್ಟ, ಸಾರ್ವಜನಿಕ ದೂರುಗಳ ವಿಲೇವಾರಿ, ರಸ್ತೆ ಗುಂಡಿಗಳ ದುರಸ್ಥಿ, ಅರ್ಟಿರಿಯಲ್ ಮತ್ತು ಸಬ್ ಅರ್ಟಿರಿಯಲ್ ರಸ್ತೆಗಳ ಡಾಂಬರೀಕರಣ ಕಾಮಗಾರಿ, ವಾರಸುದಾರರಿಲ್ಲದ ಅನಾಥ ವಾಹನಗಳ ತೆರವು ಹಾಗೂ ಪ್ರಮುಖ ಟ್ರಾಫಿಕ ಜಂಕ್ಷನ್‍ಗಳ ಸುಧಾರಣೆ ಸೇರಿದಂತೆ ಪ್ರತಿಯೊಂದು ಕಾಮಗಾರಿಯಲ್ಲೂ ಗುಣಮಟ್ಟ ಕಾಯ್ದುಕೊಳ್ಳುವಂತೆ, ಕಾಮಗಾರಿಯ ಪ್ರಮಾಣ, ಸಮಯಪಾಲನೆ ಹಾಗೂ ಜವಾಬ್ದಾರಿತನಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಆಯುಕ್ತರು ಸೂಚಿಸಿದರು.

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಕಾಮಗಾರಿ ಹಾಗೂ ವಿಶೇಷ ಮೂಲಭೂತ ಸೌಕರ್ಯ ಕಲ್ಪಿಸುವ ಸಂಬಂಧಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಲು ಹಾಗೂ ಕೈಗೊಳ್ಳುವ ಪ್ರತಿ ಕಾಮಗಾರಿಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಪ್ರತಿ ವಾರ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಆಯುಕ್ತರು ಸೂಚಿಸಿದರು

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ಆ ರಸ್ತೆಯಲ್ಲಿ ಕೈಗೊಳ್ಳಲಾಗುತ್ತಿರುವ ಇನ್ನಿತರೆ ಸಿವಿಲ್ ಕಾಮಗಾರಿಗಳು ಸಂಪೂರ್ಣವಾಗಿ ಪೂರ್ಣಗೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇನ್ನಿತರೆ ಸಿವಿಲ್ ಕಾಮಗಾರಿಗಳು ಬಾಕಿ ಇರುವಾಗ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳುವುದರಿಂದ ಕೈಗೊಳ್ಳುವ ರಸ್ತಗೆ ಕಾಮಗಾರಿ ಹಾಳಾಗುವುದರಿಂದ ಹಾಗೂ ಈ ರೀತಿ ರಸ್ತೆ ಹಾಳಾಗುವುದರಿಂದ ಪುನಃ ಈ ರಸ್ತೆ ಕಾಮಗಾರಿ ಕೈಗೊಳ್ಳಬೇಕಾಗುತ್ತದೆ. ಇದರಿಂದ ಅನಗತ್ಯ ಸಾರ್ವಜನಿಕ ಹಣ ದುಂದು ವೆಚ್ಚವಾಗುತ್ತದೆ ಎಂದು ಆಯುಕ್ತರು ತಿಳಿಸಿದರು.

ಜೊತೆಗೆ, ಸಾರ್ವಜನಿಕ ಸಂಚಾರ ಸೇರಿದಂತೆ ಇನ್ನಿತರೆ ಅನಾನುಕೂಲತೆಗಳು ಉಂಟಾಗುವುದರಿಂದ ರಸ್ತೆ ಡಾಂಬರೀಕರಣ ಕೈಗೊಳ್ಳುವ ಮುಂಚೆ ಮೊದಲು ಆ ರಸ್ತೆಯಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಲು ಉದ್ದೇಶಿರುವ ಇತರೆ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಂಡ ನಂತರ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳುವ ರಸ್ತೆ ಕಾಮಗಾರಿ, ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ, ಕಟ್ಟಡ ಕಾಮಗಾರಿ, ಇನ್ನಿತರೆ ನಿರ್ವಹಣಾ ಕಾಮಗಾರಿ ಸೇರಿದಂತೆ ಪ್ರತಿಯೊಂದು ಕಾಮಗಾರಿಯಲ್ಲೂ ಗುಣಮಟ್ಟದ ಪರಿಶೀಲನೆಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಬೇಕು. ಗುಣಮಟ್ಟ ನಿಯಂತ್ರಣ ವಿಭಾಗದ ತಂಡವು ಕೈಗೊಳ್ಳುವ ಎಲ್ಲಾ ಕಾಮಗಾರಿಗಳನ್ನು ನಿರಂತರವಾಗಿ ಪರಿಶೀಲಿಸಿ, ಗುಣಮಟ್ಟದಲ್ಲಿ ಕಂಡುಬರುವ ಲೋಪದೋಷಗಳ ಕುರಿತು ಸಮಗ್ರ ವರದಿಯನ್ನು ಸಲ್ಲಿಸಲು ಗುಣನಿಯಂತ್ರಣ ವಿಭಾಗದ ಅಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದರು.

ಯಾವುದೇ ಕಾಮಗಾರಿ ಆರಂಭಿಸುವ ಮುನ್ನ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುಣಮಟ್ಟ ನಿಯಂತ್ರಣ ತಂಡಕ್ಕೆ ಮುಂಚಿತವಾಗಿ ಮಾಹಿತಿ ನೀಡಿ, ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಅಗತ್ಯ ಅವಕಾಶ ಕಲ್ಪಿಸಬೇಕು. ಕಾಮಗಾರಿಗಳಲ್ಲಿ ನಿರ್ಮಾಣ ಕೌಶಲ್ಯ ಹಾಗೂ ಕಾರ್ಯನೈಪುಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ, ಸಂಬಂಧಿಸಿದ ಎಲ್ಲಾ ಇಂಜಿನಿಯರ್ ಗಳು ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಖುದ್ದು ಹಾಜರಿದ್ದು, ಕಾಮಗಾರಿಯ ಗುಣಮಟ್ಟ ಹಾಗೂ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ ಮೇಲ್ವಿಚಾರಣೆ ನಡೆಸಬೇಕು ಎಂದು ಆಯುಕ್ತರು ಸೂಚಿಸಿದರು.

ಹೊಸದಾಗಿ ನಿರ್ಮಿಸಲಾಗುವ ಪಾದಚಾರಿ ಮಾರ್ಗಗಳ ಎತ್ತರವು ನಿಗದಿತ ಮಾನದಂಡಕ್ಕಿಂತ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರು ಸುಗಮವಾಗಿ ಸಂಚರಿಸಲು ಅಗತ್ಯವಿರುವ ಸ್ಥಳಗಳಲ್ಲಿ ಇಳಿಜಾರು ಮಾರ್ಗಗಳನ್ನು ನಿರ್ಮಿಸಬೇಕು. ಪಾದಚಾರಿ ಮಾರ್ಗದ ಅಂಚಿನ ಕಲ್ಲುಗಳನ್ನು ಉತ್ತಮ ಗುಣಮಟ್ಟದಲ್ಲಿ ಅಳವಡಿಸಬೇಕು ಎಂದು ಆಯುಕ್ತರು ಸೂಚಿಸಿದರು.

ಸಹಾಯ ಪೋರ್ಟಲ್‍ನಲ್ಲಿ ದಾಖಲಾಗುವ ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ, ಪರಿಶೀಲನೆ ನಡೆಸಿ, ಸಮಸ್ಯೆಯ ಸ್ವರೂಪಕ್ಕೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಂಡು ನಿಗದಿತ ಅವಧಿಯೊಳಗೆ ಪರಿಹರಿಸಬೇಕು. ದೂರುಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ನಿರಂತರವಾಗಿ ಮೇಲ್ವಿಚಾರಣೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ವೈಯಕ್ತಿಕವಾಗಿ ಗಮನಹರಿಸಿ, ಬಾಕಿ ದೂರುಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಆಯುಕ್ತರು ನಿರ್ದೇಶನ ನೀಡಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರಸುದಾರರಿಲ್ಲದ ಅನಾಥ ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿ 7 ದಿನಗಳ ನೋಟಿಸ್ ಅವಧಿ ಪೂರ್ಣಗೊಂಡ ನಂತರ ಪೊಲೀಸ್ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಂವಹನ ಸಾಧಿಸಿ ಟೋಯಿಂಗ್ ವ್ಯವಸ್ಥೆ ಮೂಲಕ ತ್ವರಿತವಾಗಿ ವಾಹನಗಳನ್ನು ತೆರವುಗೊಳಿಸಬೇಕು ಎಂದು ಆಯುಕ್ತರು ಸೂಚಿಸಿದರು.

ಸಭೆಯಲ್ಲಿ ಪಾಲಿಕೆಯ ಅಭಿವೃದ್ದಿ ಅಪರ ಆಯುಕ್ತ ವೆಂಕಟಾಚಲಪತಿ ಆರ್., ಕಂದಾಯ ಅಪರ ಆಯುಕ್ತೆ ಲಕ್ಷ್ಮಮ್ಮ, ಮುಖ್ಯ ಇಂಜಿನಿಯರ್ ಗಳಾದ ವಿಜಯ್ ಕುಮಾರ್ ಹರಿದಾಸ್, ಹೇಮಲತಾ, ಅಧೀಕ್ಷಕ ಇಂಜಿನಿಯರ್ ಚಂದ್ರಶೇಖರ್, ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags

G.JagadeeshConstruction work
share
ವಾರ್ತಾಭಾರತಿ
ವಾರ್ತಾಭಾರತಿ
Next Story
X