‘ನಿಮ್ಮ ಕುರ್ಚಿ ಆಸೆಗೆ ಜನರ ರಕ್ತ ಇನ್ನೆಷ್ಟು ಹೀರುತ್ತೀರಿ?’; ಡಿಸಿಎಂ ಪ್ರಶ್ನಿಸಿದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು : ‘ನಿಮ್ಮ ಕುರ್ಚಿ ಆಸೆಗೆ ಜನಸಾಮಾನ್ಯರ ರಕ್ತ ಇನ್ನೆಷ್ಟು ಹೀರುತ್ತೀರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ?’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಇಂದಿಲ್ಲಿ ಪ್ರಶ್ನಿಸಿದ್ದಾರೆ.
ಶುಕ್ರವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಅವರ ಜೋಳಿಗೆ ತುಂಬಿಸಿ, ಸಿಎಂ ಕುರ್ಚಿ ಗಿಟ್ಟಿಸಿಕೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಎಷ್ಟು ಸುಲಿಗೆ ಟಾರ್ಗೆಟ್ ಕೊಟ್ಟಿದ್ದೀರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ?’ ಎಂದು ಕೇಳಿದ್ದಾರೆ.
‘ಮರಣೋತ್ತರ ಪರೀಕ್ಷೆ ವರದಿ ಪಡೆಯಲು ಲಂಚ, ಮರಣ ಪ್ರಮಾಣಪತ್ರ ಪಡೆಯಲು ಲಂಚ, ಅಂತ್ಯಸಂಸ್ಕಾರ ಮಾಡೋದಕ್ಕೆ ಲಂಚ’ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಮತ್ತು @RahulGandhi ಅವರ ಜೋಳಿಗೆ ತುಂಬಿಸಿ, ಸಿಎಂ ಕುರ್ಚಿ ಗಿಟ್ಟಿಸಿಕೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಎಷ್ಟು ಸುಲಿಗೆ ಟಾರ್ಗೆಟ್ ಕೊಟ್ಟಿದ್ದೀರಿ ಡಿಸಿಎಂ @DKShivakumar ಅವರೇ?
— R. Ashoka (@RAshokaBJP) October 31, 2025
✔️ಮರಣೋತ್ತರ ಪರೀಕ್ಷೆ ವರದಿ ಪಡೆಯಲು ಲಂಚ
✔️ಮರಣ ಪ್ರಮಾಣಪತ್ರ ಪಡೆಯಲು ಲಂಚ
✔️ಅಂತ್ಯಸಂಸ್ಕಾರ ಮಾಡೋದಕ್ಕೆ ಲಂಚ
ನಿಮ್ಮ ಕುರ್ಚಿ ಆಸೆಗೆ… pic.twitter.com/6qtr5M1GSA







