Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕರ್ನಾಟಕಕ್ಕೆ ಬೇಕಿರುವುದು ಕಾಂಗ್ರೆಸ್...

ಕರ್ನಾಟಕಕ್ಕೆ ಬೇಕಿರುವುದು ಕಾಂಗ್ರೆಸ್ ಸರಕಾರದ ಸಂಪೂರ್ಣ ಬದಲಾವಣೆ : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ27 May 2026 10:11 PM IST
share
ಕರ್ನಾಟಕಕ್ಕೆ ಬೇಕಿರುವುದು ಕಾಂಗ್ರೆಸ್ ಸರಕಾರದ ಸಂಪೂರ್ಣ ಬದಲಾವಣೆ : ಆರ್.ಅಶೋಕ್

ಬೆಂಗಳೂರು : ಕರ್ನಾಟಕಕ್ಕೆ ಇಂದು ಬೇಕಿರುವುದು ಕೇವಲ ಮುಖ್ಯಮಂತ್ರಿ ಬದಲಾವಣೆ ಅಲ್ಲ. ಈ ಜನವಿರೋಧಿ ಕಾಂಗ್ರೆಸ್ ಸರಕಾರದ ಸಂಪೂರ್ಣ ಬದಲಾವಣೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ರಾಜ್ಯದಲ್ಲಿ ಆಡಳಿತ ಎನ್ನುವುದು ಸಂಪೂರ್ಣ ಮರೀಚಿಕೆಯಾಗಿದೆ. ಅಭಿವೃದ್ಧಿ, ಜನಸಮಸ್ಯೆ, ರೈತರ ಸಂಕಷ್ಟ, ಯುವಕರ ಭವಿಷ್ಯ, ಇವೆಲ್ಲವೂ ಗೌಣವಾಗಿದೆ, ‘ಕುರ್ಚಿ ಯಾರಿಗೆ?’ ಎನ್ನುವ ಒಂದೇ ಪ್ರಶ್ನೆ ಸರಕಾರವನ್ನು ನುಂಗಿಬಿಟ್ಟಿದೆ ಎಂದು ಟೀಕಿಸಿದ್ದಾರೆ.

‘ಅಧಿಕಾರ ಹಂಚಿಕೆ’ ಎಂಬ ಪ್ರಹಸನ ಈಗ ಬೀದಿ ನಾಟಕದ ಮಟ್ಟಕ್ಕೆ ಇಳಿದಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಕುರ್ಚಿ ಕದನ ಇಡೀ ಕರ್ನಾಟಕದ ಮಾನವನ್ನು ದೇಶದ ಮುಂದೆ ಹರಾಜು ಹಾಕುತ್ತಿದೆ. ಪ್ರಜಾಸೌಧದಲ್ಲಿ ಆಡಳಿತದ ಚರ್ಚೆ ಇಲ್ಲ… ಬರಿ ಅಧಿಕಾರದ ಲೆಕ್ಕಾಚಾರ ಮಾತ್ರ ಎನ್ನುವಂತಾಗಿದೆ ಎಂದು ಅವರು ಹೇಳಿದ್ದಾರೆ.

ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕಾದ ಸತ್ಯ ಒಂದೇ. ಸಿದ್ದರಾಮಯ್ಯನವರೇ ಮುಂದುವರಿಯಲಿ, ಡಿ.ಕೆ.ಶಿವಕುಮಾರ್ ಬರಲಿ ಅಥವಾ ಮತ್ತೊಬ್ಬರನ್ನು ಕೂರಿಸಲಿ… ಈ ದಿವಾಳಿ ಕಾಂಗ್ರೆಸ್ ಸರಕಾರದಿಂದ ಕನ್ನಡಿಗರಿಗೆ ನಯಾ ಪೈಸೆ ಪ್ರಯೋಜನವಿಲ್ಲ ಎಂದು ಅಶೋಕ್ ಆರೋಪಿಸಿದ್ದಾರೆ.

ಏಕೆಂದರೆ ಇವರಿಗೆ: ರಾಜ್ಯದ ಅಭಿವೃದ್ಧಿಯ ಬಗ್ಗೆ ದೃಷ್ಟಿಯಿಲ್ಲ. ರೈತರ ಕಣ್ಣೀರಿನ ಬಗ್ಗೆ ಕಾಳಜಿಯಿಲ್ಲ. ಯುವಕರ ಭವಿಷ್ಯದ ಬಗ್ಗೆ ಚಿಂತೆಯಿಲ್ಲ. ಜನರ ಸಮಸ್ಯೆಗಳ ಬಗ್ಗೆ ಉತ್ತರದಾಯಿತ್ವವೇ ಇಲ್ಲ. ಇವರಿಗೆ ಇರುವುದು ಒಂದೇ ಅಜೆಂಡಾ: ಕುರ್ಚಿ, ಅಧಿಕಾರ, ಲೂಟಿ ಮತ್ತು ಸ್ವಾರ್ಥ ರಾಜಕಾರಣ ಎಂದು ಅವರು ದೂರಿದ್ದಾರೆ.

ಕರ್ನಾಟಕದ ಜನರ ಸಹನೆಯನ್ನು ಕಾಂಗ್ರೆಸ್ ದುರ್ಬಲತೆ ಎಂದು ಭಾವಿಸಬಾರದು. ಕನ್ನಡಿಗರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಯನ್ನು ಬಲಿಕೊಟ್ಟು ಒಳಜಗಳದಲ್ಲಿ ಮುಳುಗಿರುವ ಈ ಜನವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕ ಉತ್ತರ ನೀಡುವ ದಿನ ದೂರವಿಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X