Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಗೃಹಜ್ಯೋತಿ’ಗೆ ಕತ್ತರಿ ಹಾಕಲು ಮನೆ-ಮನೆ...

‘ಗೃಹಜ್ಯೋತಿ’ಗೆ ಕತ್ತರಿ ಹಾಕಲು ಮನೆ-ಮನೆ ಪರಿಶೀಲನೆ ಹುನ್ನಾರ : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ1 July 2026 7:18 PM IST
share
‘ಗೃಹಜ್ಯೋತಿ’ಗೆ ಕತ್ತರಿ ಹಾಕಲು ಮನೆ-ಮನೆ ಪರಿಶೀಲನೆ ಹುನ್ನಾರ : ಆರ್.ಅಶೋಕ್

ಬೆಂಗಳೂರು : ‘ವಿಧಾನಸಭೆ ಚುನಾವಣೆಗೆ ಮುನ್ನ ‘ಕಾಕಾ ಪಾಟೀಲ್‍ಗೂ ಫ್ರೀ, ಮಹದೇವಪ್ಪನಿಗೂ ಫ್ರೀ, ಎಲ್ಲರಿಗೂ ಫ್ರೀ ಎಂದು ಗಂಟಲು ಹರಿದುಕೊಳ್ಳುವಂತೆ ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ, ಇಂದು ಕರ್ನಾಟಕದ ಜನತೆಗೆ ದ್ರೋಹ ಬಗೆಯಲು ಹೊರಟಿದೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.

ಬುಧವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಗೃಹಜ್ಯೋತಿಗೆ ವೋಟರ್ ಕಾರ್ಡ್ ಓಕೆ, ಪ್ಯಾನ್ ಕಾರ್ಡ್ ಯಾಕೆ?, ಜಾತಿ ಪ್ರಮಾಣ ಪತ್ರ ಯಾಕೆ?. ಖಜಾನೆ ಸಂಪೂರ್ಣ ದಿವಾಳಿಯಾಗಿರುವುದನ್ನು ಮುಚ್ಚಿಡಲು, ಇದೀಗ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಸಂಖ್ಯೆಗೆ ಕತ್ತರಿ ಹಾಕಲು ಈ ಸರಕಾರ ಮನೆ-ಮನೆ ಪರಿಶೀಲನೆಯ ಹೊಸ ಹುನ್ನಾರ ನಡೆಸಿದೆ ಎಂದು ದೂರಿದ್ದಾರೆ.

‘ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ ಹೆಸರಿನಲ್ಲಿ ಮನೆಗೆ ಬರುವ ಎಸ್ಕಾಂ ಸಿಬ್ಬಂದಿಗೆ ಪ್ಯಾನ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರವನ್ನು ತೋರಿಸಬೇಕಂತೆ. ಸಿಎಂ ಡಿ.ಕೆ.ಶಿವಕುಮಾರ್ ಅವರೇ, ಚುನಾವಣೆಗೆ ಮುನ್ನ ಅಧಿಕಾರಕ್ಕೆ ಬರುವ ಹಪಾಹಪಿಯಲ್ಲಿ ಯಾವುದೇ ಷರತ್ತಿಲ್ಲದೆ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿ, ಈಗ ಆದಾಯ ಮತ್ತು ಜಾತಿಯ ಆಧಾರದ ಮೇಲೆ ಅರ್ಹತೆ ನಿರ್ಧಾರ ಮಾಡಲು ಹೊರಟಿರುವುದು ಯಾವ ಸೀಮೆ ಗ್ಯಾರೆಂಟಿ ಸ್ವಾಮಿ?’ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

‘ಇಷ್ಟಕ್ಕೂ ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣ ಪತ್ರ ಯಾಕೆ?, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳು ನಮ್ಮ ರಾಜ್ಯದ ನಿವಾಸಿಗಳೋ, ಮತದಾರರೋ ಅಲ್ಲವೋ ಅಂತ ನಿರ್ಧಾರ ಮಾಡೋಕೆ ವೋಟರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಸಾಕು. ಆದರೆ ಅವರ ಜಾತಿ ಯಾವುದು, ಆದಾಯ ಎಷ್ಟು ಎನ್ನುವ ಮಾಹಿತಿ ಯಾಕೆ ಬೇಕು?’ ಎಂದು ಆರ್.ಅಶೋಕ್ ಕೇಳಿದ್ದಾರೆ.

‘ಪ್ಯಾನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಕೇಳುವ ಮೂಲಕ ನೀವು ಯಾರನ್ನು ಯೋಜನೆಯಿಂದ ಹೊರದಬ್ಬಲು ಸ್ಕೆಚ್ ಹಾಕುತ್ತಿದ್ದೀರಿ?. ಗ್ಯಾರಂಟಿಗಳನ್ನು ನಿಭಾಯಿಸಲು ಹಣವಿಲ್ಲದೆ ಒದ್ದಾಡುತ್ತಿರುವ ಈ ಲೂಟಿ ಸರಕಾರ, ಹೇಗಾದರೂ ಮಾಡಿ ಲಕ್ಷಾಂತರ ಬಡ-ಮಧ್ಯಮ ವರ್ಗದವರನ್ನು ಗೃಹಜ್ಯೋತಿಯಿಂದ ವಂಚಿಸಲು ಈ U-Turn ನೀತಿಯನ್ನು ತಂದಿದೆ. ಸುಳ್ಳು ಭರವಸೆಗಳ ಮೂಲಕ ಅಧಿಕಾರ ಹಿಡಿದು ಈಗ ಜನರನ್ನು ದಾಖಲೆಗಳ ಹೆಸರಿನಲ್ಲಿ ಸತಾಯಿಸುತ್ತಿರುವ ಈ ಜನವಿರೋಧಿ ಸರಕಾರ ಜನರ ಹಕ್ಕನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ’ ಎಂದು ಆರ್.ಅಶೋಕ್ ಎಚ್ಚರಿಸಿದ್ದಾರೆ.

✅ಗೃಹಜ್ಯೋತಿಗೆ ವೋಟರ್ ಕಾರ್ಡ್ ಓಕೆ
❓ಪ್ಯಾನ್ ಕಾರ್ಡ್ ಯಾಕೆ?
❓ಜಾತಿ ಪ್ರಮಾಣ ಪತ್ರ ಯಾಕೆ?

ಚುನಾವಣೆಗೆ ಮುನ್ನ "ಕಾಕಾ ಪಾಟೀಲನಿಗೂ ಫ್ರೀ, ಮಹಾದೇವಪ್ಪನಿಗೂ ಫ್ರೀ, ಎಲ್ಲರಿಗೂ ಫ್ರೀ" ಎಂದು ಗಂಟಲು ಹರಿದುಕೊಳ್ಳುವಂತೆ ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ @INCKarnataka ಸರ್ಕಾರ, ಇಂದು ಕರ್ನಾಟಕದ ಜನತೆಗೆ ದ್ರೋಹ ಬಗೆಯಲು ಹೊರಟಿದೆ.

ಖಜಾನೆ… pic.twitter.com/NOPyKuZO59

— R. Ashoka (@RAshokaBJP) July 1, 2026

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X