Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಗ್ಯಾರಂಟಿ’ ಕುರಿತು ಶ್ವೇತಪತ್ರ...

‘ಗ್ಯಾರಂಟಿ’ ಕುರಿತು ಶ್ವೇತಪತ್ರ ಹೊರಡಿಸಲಿ : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ15 Aug 2026 11:35 PM IST
share
‘ಗ್ಯಾರಂಟಿ’ ಕುರಿತು ಶ್ವೇತಪತ್ರ ಹೊರಡಿಸಲಿ : ಆರ್.ಅಶೋಕ್

ಬೆಂಗಳೂರು : ಗ್ಯಾರಂಟಿ ಯೋಜನೆಗಳಲ್ಲಿ ಗೋಲ್‍ಮಾಲ್ ನಡೆಯುತ್ತಿದ್ದು, ಸರಕಾರದ ಬಳಿ ಇರುವ ಯಾವುದೇ ಅಂಕಿ-ಅಂಶಗಳು ಹೊಂದಾಣಿಕೆಯಾಗುತ್ತಿಲ್ಲ. ಆದುದರಿಂದ ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ವೇತಪತ್ರ ಹೊರಡಿಸಿ ಸದನದಲ್ಲಿ ಮಾಹಿತಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಶನಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಶಕ್ತಿ ಯೋಜನೆಯ ಕುರಿತು ಮಾತನಾಡಿದ್ದಾರೆ. ಯೋಜನೆಯಡಿ ರಾಜ್ಯದ 3.5ಕೋಟಿ ಮಹಿಳೆಯರು 796ಕೋಟಿ ಉಚಿತ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ 3ವರ್ಷಗಳಲ್ಲಿ 14,875ಕೋಟಿ ರೂ.ಖರ್ಚು ಮಾಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಆದರೆ, ಸರಕಾರಕ್ಕೆ 3 ವರ್ಷ ಪೂರ್ಣಗೊಂಡ ಸಮಯದಲ್ಲಿ ಮಹಿಳೆಯರು 753.7ಕೋಟಿ ಉಚಿತ ಪ್ರಯಾಣ ಮಾಡಿದ್ದು, 19,771ಕೋಟಿ ರೂ.ಮೌಲ್ಯದ ಉಚಿತ ಟಿಕೆಟ್‍ಗಳನ್ನು ನೀಡಲಾಗಿದೆ ಎಂದು ಸಿಎಂ ಅಧಿಕೃತ ಎಕ್ಸ್ ನಿಂದ ಪೋಸ್ಟ್ (2026ರ ಜೂನ್ 11) ಮಾಡಲಾಗಿತ್ತು. ಇದಕ್ಕೂ ಮುನ್ನ 2026ರ ಮೇ 25ರಂದು ಮಾಡಿದ್ದ ಎಕ್ಸ್ ಪೋಸ್ಟ್ ನಲ್ಲಿ 726 ಕೋಟಿ ಉಚಿತ ಪ್ರಯಾಣಗಳಾಗಿದ್ದು, 18,943ಕೋಟಿ ರೂ. ವ್ಯಯಿಸಲಾದ ಅನುದಾನ ಎಂದು ಉಲ್ಲೇಖಿಸಲಾಗಿದೆ. ಇದನ್ನು ತಾಳೆ ಹಾಕಿದರೆ 5ರಿಂದ 6 ಸಾವಿರ ಕೋಟಿ ರೂ.ಗಳ ವ್ಯತ್ಯಾಸ ಬರುತ್ತದೆ. ಆಗ ಹೆಚ್ಚಿದ್ದ ಖರ್ಚು ಈಗ ದಿಢೀರನೆ ಕಡಿಮೆಯಾಗಿದ್ದು ಹೇಗೆ ಎಂದು ಸ್ಪಷ್ಟನೆ ನೀಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಎರಡು ತಿಂಗಳ 5 ಸಾವಿರ ಕೋಟಿ ರೂ. ಹಣವನ್ನು ಇನ್ನೂ ನೀಡಿಲ್ಲ. ಇದನ್ನು ನೀಡಲಾಗಿದೆಯೇ ಎಂಬ ಬಗ್ಗೆ ಸರಕಾರದಿಂದ ಇನ್ನೂ ಉತ್ತರ ಸಿಕ್ಕಿಲ್ಲ. ಆದುದರಿಂದ ಗ್ಯಾರಂಟಿಯ ಎಲ್ಲ ಯೋಜನೆಗಳ ಅಂಕಿ-ಅಂಶಗಳ ಬಗ್ಗೆ ಸರಕಾರ ನಿಖರ ಮಾಹಿತಿಯನ್ನು ಸದನಕ್ಕೆ ನೀಡಬೇಕು. ಇಲ್ಲವಾದರೆ ಇದು ಜನರಲ್ಲಿ ಇನ್ನಷ್ಟು ಗೊಂದಲ ಉಂಟಮಾಡುತ್ತದೆ ಎಂದು ಅವರು ಕೋರಿದ್ದಾರೆ.

🚨ಗ್ಯಾರೆಂಟಿ ಗೋಲ್ಮಾಲ್🚨

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲೂ ಅಪ್ಪಟ ಸುಳ್ಳು! ಏಳು ಕೋಟಿ ಕನ್ನಡಿಗರಿಗೆ ಸಿಎಂ @DKShivakumar ಮಾಡಿದ ಘೋರ ಅಪಮಾನ!

ಸ್ವಾತಂತ್ರ್ಯ ದಿನಾಚರಣೆಯಂತಹ ಪವಿತ್ರ ವೇದಿಕೆಯಲ್ಲೂ ರಾಜ್ಯದ ಜನತೆಗೆ ತಪ್ಪು ಮಾಹಿತಿ ನೀಡಿ, ಸುಳ್ಳು ಲೆಕ್ಕಗಳನ್ನು ನೀಡುವ ಮೂಲಕ ಡಿ.ಕೆ. ಶಿವಕುಮಾರ್ ಅವರು 7 ಕೋಟಿ ಕನ್ನಡಿಗರಿಗೆ ಘೋರ… pic.twitter.com/4ccFMQKnK7

— R. Ashoka (@RAshokaBJP) August 15, 2026

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X