Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹನೂರು ಶೂಟೌಟ್ ಪ್ರಕರಣ; ನ್ಯಾಯಾಂಗ...

ಹನೂರು ಶೂಟೌಟ್ ಪ್ರಕರಣ; ನ್ಯಾಯಾಂಗ ತನಿಖೆಗೆ ಆರ್‌.ಅಶೋಕ್‌ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Aug 2026 12:42 AM IST
share
ಹನೂರು ಶೂಟೌಟ್ ಪ್ರಕರಣ; ನ್ಯಾಯಾಂಗ ತನಿಖೆಗೆ ಆರ್‌.ಅಶೋಕ್‌ ಆಗ್ರಹ

ಬೆಂಗಳೂರು : ಚಾಮರಾಜನಗರದ ಹನೂರಿನಲ್ಲಿ ಮೂವರು ರೈತರ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಉತ್ತರಗಳೇ ಪರಸ್ಪರ ತಾಳೆಯಾಗುತ್ತಿಲ್ಲ. ಅರಣ್ಯ ಇಲಾಖೆ ಒಂದು ರೀತಿಯ ಹೇಳಿಕೆ ನೀಡುತ್ತದೆ. ಸ್ಥಳೀಯ ಜನಪ್ರತಿನಿಧಿಗಳ ಹೇಳಿಕೆ ಮತ್ತೊಂದು ಕಥೆ ಹೇಳುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರ ಮಾತುಗಳಲ್ಲೂ ಅನುಮಾನಗಳಿಗೆ ಉತ್ತರ ಸಿಗುತ್ತಿಲ್ಲ. ಹಾಗಾದರೆ ನಿಜವಾದದ್ದು ಯಾವುದು? ಯಾರ ಮಾತನ್ನು ನಂಬಬೇಕು? ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ.

ಹನೂರು ಶೂಟೌಟ್ ಪ್ರಕರಣ ಸಂಬಂಧ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಸರ್ಕಾರವೇ ಸತ್ಯವನ್ನು ಸ್ಪಷ್ಟಪಡಿಸಬೇಕಾದ ಪ್ರಕರಣದಲ್ಲಿ, ಅಧಿಕಾರಿಗಳ ಹೇಳಿಕೆಗಳಲ್ಲೇ ಇಷ್ಟೊಂದು ವೈರುಧ್ಯವಿರುವುದು ಅತ್ಯಂತ ಗಂಭೀರ ಸಂಗತಿ. ಮೂವರು ಜೀವಗಳು ಹೋಗಿವೆ. ಇದು ಕೇವಲ ಒಂದು ಇಲಾಖೆಯ ಕ್ರಮದ ಪ್ರಶ್ನೆಯಲ್ಲ - ಅಧಿಕಾರದ ದುರುಪಯೋಗವಾಗಿದೆಯೇ? ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ? ಗುಂಡಿನ ದಾಳಿ ಅನಿವಾರ್ಯವಾಗಿತ್ತೇ? ಘಟನೆಯ ನಂತರ ಸಾಕ್ಷ್ಯಗಳನ್ನು ಸಂರಕ್ಷಿಸಲಾಗಿದೆಯೇ? ಎಂಬ ಹಲವು ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಅಥವಾ ಅರಣ್ಯ ಇಲಾಖೆಯ ಆಂತರಿಕ ತನಿಖೆಯಿಂದ ಸತ್ಯ ಹೊರಬರುವುದಿಲ್ಲ. ಸರ್ಕಾರದ ಅಧೀನದಲ್ಲಿರುವ ಇಲಾಖೆಯೇ ಆರೋಪದ ಕೇಂದ್ರವಾಗಿರುವಾಗ, ಅದೇ ವ್ಯವಸ್ಥೆಯಿಂದ ತನಿಖೆ ನಡೆಸುವುದು ನ್ಯಾಯಸಮ್ಮತವಲ್ಲ. ಆದ್ದರಿಂದ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಈ ಪ್ರಕರಣದಲ್ಲಿ ತಕ್ಷಣ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೂವರು ರೈತರ ಸಾವಿನ ಹಿಂದಿನ ಸಂಪೂರ್ಣ ಸತ್ಯ ಹೊರಬರಬೇಕು. ತಪ್ಪಿತಸ್ಥರು ಯಾರೇ ಆಗಿರಲಿ - ಅರಣ್ಯ ಸಿಬ್ಬಂದಿಯಾಗಲಿ, ಅಧಿಕಾರಿಗಳಾಗಲಿ, ರಾಜಕೀಯ ಪ್ರಭಾವಿಗಳಾಗಲಿ - ಕಾನೂನಿನ ಮುಂದೆ ನಿಲ್ಲಿಸಬೇಕು. ಕಾಂಗ್ರೆಸ್‌ ಸರ್ಕಾರಕ್ಕೆ ನಿಜಕ್ಕೂ ಮುಚ್ಚಿಡುವುದೇನೂ ಇಲ್ಲದಿದ್ದರೆ, ನ್ಯಾಯಾಂಗ ತನಿಖೆಗೆ ಏಕೆ ಭಯ? ಅಮಾಯಕ ರೈತರ ಜೀವಕ್ಕೆ ನ್ಯಾಯ ಸಿಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಸತ್ಯ ಹೊರಬರಬೇಕಾದರೆ ನ್ಯಾಯಾಂಗ ತನಿಖೆಯೊಂದೇ ದಾರಿ

ಚಾಮರಾಜನಗರದ ಹನೂರಿನಲ್ಲಿ ಮೂವರು ರೈತರ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಉತ್ತರಗಳೇ ಪರಸ್ಪರ ತಾಳೆಯಾಗುತ್ತಿಲ್ಲ.

ಅರಣ್ಯ ಇಲಾಖೆ ಒಂದು ರೀತಿಯ ಹೇಳಿಕೆ ನೀಡುತ್ತದೆ. ಸ್ಥಳೀಯ ಜನಪ್ರತಿನಿಧಿಗಳ ಹೇಳಿಕೆ ಮತ್ತೊಂದು ಕಥೆ ಹೇಳುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರ ಮಾತುಗಳಲ್ಲೂ…

— R. Ashoka (@RAshokaBJP) August 15, 2026

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X